AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ದೆಹಲಿಯ ಸಾಕೇತ್​ ಕೋರ್ಟ್​ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ದೆಹಲಿಯ ಸಾಕೇತ್ ಕೋರ್ಟ್​ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Delhi: ದೆಹಲಿಯ ಸಾಕೇತ್​ ಕೋರ್ಟ್​ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು
ದೆಹಲಿ ಪೊಲೀಸರು(ಸಾಂದರ್ಭಿಕ ಚಿತ್ರ)Image Credit source: NDTV
ನಯನಾ ರಾಜೀವ್
|

Updated on:Apr 21, 2023 | 12:33 PM

Share

ದೆಹಲಿಯ ಸಾಕೇತ್ ಕೋರ್ಟ್​ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದೆಹಲಿಯ ನ್ಯಾಯಾಲಯ ಸಂಕೀರ್ಣದೊಳಗೆ ಘಟನೆ ನಡೆದಿದೆ. ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗಾಗಿ ಮಹಿಳೆ ನ್ಯಾಯಾಲಯದಲ್ಲಿದ್ದಾಗ ವ್ಯಕ್ತಿಯೊಬ್ಬ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಎನ್‌ಐ ಪ್ರಕಾರ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ನೈಋತ್ಯ ದೆಹಲಿಯ ದ್ವಾರಕಾದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಕೀಲರೊಬ್ಬರನ್ನು ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ದಾಳಿಕೋರರು ನ್ಯಾಯಾಲಯಕ್ಕೆ ಪ್ರವೇಶಿಸಲು ವಕೀಲರಂತೆ ಪೋಸ್ ನೀಡಿದ್ದರು.

ಕಳೆದ ವರ್ಷ ಸೆಪ್ಟೆಂಬರ್ 24 ರಂದು, ರೋಹಿಣಿಯ ನ್ಯಾಯಾಲಯದ ಕೊಠಡಿಯೊಳಗೆ ದರೋಡೆಕೋರ ಜಿತೇಂದರ್ ಮಾನ್ ಅಲಿಯಾಸ್ ಗೋಗಿ ಮೇಲೆ ಇಬ್ಬರು ಬಂದೂಕುಧಾರಿಗಳು ವಕೀಲರಂತೆ ಬಂದು ಗುಂಡು ಹಾರಿಸಿದ್ದರು. ಕಳೆದ ವರ್ಷ ಏಪ್ರಿಲ್‌ನಲ್ಲಿ ಇಬ್ಬರು ವಕೀಲರು ಮತ್ತು ಅವರ ಕಕ್ಷಿದಾರನ ನಡುವೆ ಗಲಾಟೆ ನಡೆದ ನಂತರ ರೋಹಿಣಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ ನಡೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Fri, 21 April 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?