Delhi: ದೆಹಲಿಯ ಸಾಕೇತ್​ ಕೋರ್ಟ್​ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ದೆಹಲಿಯ ಸಾಕೇತ್ ಕೋರ್ಟ್​ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Delhi: ದೆಹಲಿಯ ಸಾಕೇತ್​ ಕೋರ್ಟ್​ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು
ದೆಹಲಿ ಪೊಲೀಸರು(ಸಾಂದರ್ಭಿಕ ಚಿತ್ರ)
Image Credit source: NDTV

Updated on: Apr 21, 2023 | 12:33 PM

ದೆಹಲಿಯ ಸಾಕೇತ್ ಕೋರ್ಟ್​ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದೆಹಲಿಯ ನ್ಯಾಯಾಲಯ ಸಂಕೀರ್ಣದೊಳಗೆ ಘಟನೆ ನಡೆದಿದೆ. ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗಾಗಿ ಮಹಿಳೆ ನ್ಯಾಯಾಲಯದಲ್ಲಿದ್ದಾಗ ವ್ಯಕ್ತಿಯೊಬ್ಬ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಎನ್‌ಐ ಪ್ರಕಾರ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ನೈಋತ್ಯ ದೆಹಲಿಯ ದ್ವಾರಕಾದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಕೀಲರೊಬ್ಬರನ್ನು ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ದಾಳಿಕೋರರು ನ್ಯಾಯಾಲಯಕ್ಕೆ ಪ್ರವೇಶಿಸಲು ವಕೀಲರಂತೆ ಪೋಸ್ ನೀಡಿದ್ದರು.

ಕಳೆದ ವರ್ಷ ಸೆಪ್ಟೆಂಬರ್ 24 ರಂದು, ರೋಹಿಣಿಯ ನ್ಯಾಯಾಲಯದ ಕೊಠಡಿಯೊಳಗೆ ದರೋಡೆಕೋರ ಜಿತೇಂದರ್ ಮಾನ್ ಅಲಿಯಾಸ್ ಗೋಗಿ ಮೇಲೆ ಇಬ್ಬರು ಬಂದೂಕುಧಾರಿಗಳು ವಕೀಲರಂತೆ ಬಂದು ಗುಂಡು ಹಾರಿಸಿದ್ದರು.
ಕಳೆದ ವರ್ಷ ಏಪ್ರಿಲ್‌ನಲ್ಲಿ ಇಬ್ಬರು ವಕೀಲರು ಮತ್ತು ಅವರ ಕಕ್ಷಿದಾರನ ನಡುವೆ ಗಲಾಟೆ ನಡೆದ ನಂತರ ರೋಹಿಣಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ ನಡೆದಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Fri, 21 April 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us