ವಾರದ ಹಿಂದೆ ಸುಪ್ರೀಂಕೋರ್ಟ್​​ ಹೊರಗಡೆ ದೇಹಕ್ಕೆ ಬೆಂಕಿ ಹಚ್ಚಿದ್ದ ಯುವತಿ  ಸಾವು

ಯುವತಿಯೊಂದಿಗೆ ಬಂದಿದ್ದ ದೆಹಲಿ ವಿಶ್ವವಿದ್ಯಾನಿಲಯದ ಪದವೀಧರ ಮತ್ತು ವಿದ್ಯಾರ್ಥಿ ನಾಯಕನಾಗಿದ್ದ ವ್ಯಕ್ತಿ ಶನಿವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಆತನ ಕುಟುಂಬವು ಯುವತಿಗೆ ಬೆಂಬಲ ನೀಡಿದ್ದು ಮಾತ್ರವಲ್ಲದೆ ನ್ಯಾಯಾಲಯದ ಪ್ರಕರಣದಲ್ಲಿ ಆಕೆಗೆ ಸಹಾಯ ಮಾಡುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ವಾರದ ಹಿಂದೆ ಸುಪ್ರೀಂಕೋರ್ಟ್​​ ಹೊರಗಡೆ ದೇಹಕ್ಕೆ ಬೆಂಕಿ ಹಚ್ಚಿದ್ದ ಯುವತಿ  ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 24, 2021 | 6:39 PM

ದೆಹಲಿ: ಕಳೆದ ವಾರ ಸುಪ್ರೀಂಕೋರ್ಟ್ ಹೊರಗೆ ತನ್ನ ಸ್ನೇಹಿತನೊಂದಿಗೆ ದೇಹಕ್ಕೆ ಬೆಂಕಿ ಹಚ್ಚಿಕೊಂಡ 24 ವರ್ಷದ ಯುವತಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾಳೆ. ಮೃತ ಯುವತಿ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ವಿದ್ಯಾರ್ಥಿನಿ. ಆಗಸ್ಟ್ 16 ರಂದು ತನ್ನ 27 ವರ್ಷದ ಸ್ನೇಹಿತನೊಂದಿಗೆ ದೆಹಲಿಗೆ ಬಂದಿದ್ದು ಇಬ್ಬರು ಸುಪ್ರೀಂಕೋರ್ಟ್ ಗೇಟ್ ಹೊರಗೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಬೆಂಕಿ ಹಚ್ಚುತ್ತಿರುವಾಗ ಅದನ್ನು ಫೇಸ್ ಬುಕ್ ಲೈವ್ ಮಾಡಿದ್ದಾರೆ. ಘೋಸಿ ಸಂಸದ ಅತುಲ್ ರಾಯ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಉತ್ತರ ಪ್ರದೇಶದ ಹಿರಿಯ ಐಪಿಎಸ್ ಅಧಿಕಾರಿಗಳು ದೂರು ನೀಡಿದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಯುವತಿ ಆರೋಪಿಸಿದ್ದಳು. ಸುಪ್ರೀಂಕೋರ್ಟ್ ಗೇಟ್ ಹೊರಗೆ ತನ್ನ ಭದ್ರತಾ ಸಿಬ್ಬಂದಿ ಇಬ್ಬರಿಗೂ ಸಹಾಯ ಮಾಡಲು ಧಾವಿಸಿದ್ದು ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದರು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಹಿಳೆಗೆ ಶೇ .85 ರಷ್ಟು ಸುಟ್ಟ ಗಾಯಗಳಾಗಿದ್ದು, ಆಕೆಯ ಸ್ನೇಹಿತನಿಗೆ ಶೇ .70 ರಷ್ಟು ಗಾಯಗಳಾಗಿವೆ.

ಯುವತಿಯೊಂದಿಗೆ ಬಂದಿದ್ದ ದೆಹಲಿ ವಿಶ್ವವಿದ್ಯಾನಿಲಯದ ಪದವೀಧರ ಮತ್ತು ವಿದ್ಯಾರ್ಥಿ ನಾಯಕನಾಗಿದ್ದ ವ್ಯಕ್ತಿ ಶನಿವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಆತನ ಕುಟುಂಬವು ಯುವತಿಗೆ ಬೆಂಬಲ ನೀಡಿದ್ದು ಮಾತ್ರವಲ್ಲದೆ ನ್ಯಾಯಾಲಯದ ಪ್ರಕರಣದಲ್ಲಿ ಆಕೆಗೆ ಸಹಾಯ ಮಾಡುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಮಹಿಳೆಯನ್ನು 2019 ರ ಜೂನ್ ನಲ್ಲಿ ಅವರ ಮನೆಗೆ ಹೋದಾಗ ಬಹುಜನ ಸಮಾಜ ಪಕ್ಷದ ಸಂಸದ ರಾಯ್  ಅತ್ಯಾಚಾರ ಮಾಡಿದ್ದಾರೆ. ಒಂದು ಪ್ರಕರಣವನ್ನು ದಾಖಲಿಸಿ  ರಾಯ್ ಅವರನ್ನು ಜೈಲಿಗೆ ಹಾಕಲಾಯಿತು. ಆದಾಗ್ಯೂ, ಉನ್ನತ ಪೊಲೀಸರು ಮತ್ತು ಅಧಿಕಾರಿಗಳು ತನ್ನನ್ನು ಕಿರುಕುಳ ನೀಡಿದರು ಮತ್ತು ನಕಲಿ ಪ್ರಕರಣದಲ್ಲಿ ಯುವತಿಯನ್ನು  ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಶನಿವಾರ ಬೆಳಗ್ಗೆ ಮಹಿಳೆಗೆ ವೆಂಟಿಲೇಟರ್ ಬೆಂಬಲ ನೀಡಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು.

“ಅವರನ್ನು ನಮ್ಮ ಬಳಿಗೆ ಕರೆತಂದ ದಿನವೇ ನಾವು ಇಬ್ಬರಿಗೂ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದೇವೆ. ಆದರೆ ಅವರಿಗೆ ತೀವ್ರವಾದ ಸುಟ್ಟ ಗಾಯಗಳಾಗಿವೆ ಮತ್ತು ಚಿಕಿತ್ಸೆ ಕಷ್ಟವಾಗಿತ್ತು. ಅವರ ಅಂಗಾಂಗಗಳು ವಿಫಲವಾಗಿವೆ ಮತ್ತು ಬದುಕುಳಿಯುವ ಸಾಧ್ಯತೆಗಳು ಕಡಿಮೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದರು ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ದೆಹಲಿ ಮತ್ತು ಉತ್ತರ ಪೊಲೀಸರು ತನಿಖೆ ಆರಂಭಿಸಿದ್ದಾರೆ, ಆದರೆ ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಲು ಸಾಧ್ಯವಾಗಲಿಲ್ಲ. ದೆಹಲಿ ಪೊಲೀಸರು ಲೈವ್ ವಿಡಿಯೊ ಮತ್ತು ವ್ಯಕ್ತಿಯ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಆಧರಿಸಿ ತನಿಖೆ ಆರಂಭಿಸಿದ್ದಾರೆ. ಅವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 309 (ಆತ್ಮಹತ್ಯೆಗೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಡಿಜಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಿದೆ ಮತ್ತು ಕಳೆದ ವಾರ ಅವರನ್ನು ದೆಹಲಿಗೆ ಕಳುಹಿಸಿ ಬೆಂಕಿ ಅವಘಡದ ಸ್ಥಳವನ್ನು ಪರಿಶೀಲಿಸಲು ಮತ್ತು ಇಬ್ಬರ ಕುಟುಂಬಗಳೊಂದಿಗೆ ಮಾತನಾಡಲು ಹೇಳಿತ್ತು.ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಮತ್ತು ಅವರು ಈಗ ದೆಹಲಿ ಪೊಲೀಸರು ಮತ್ತು ಸಮಿತಿಯಿಂದ ವರದಿಗಾಗಿ ಕಾಯುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನವೆಂಬರ್​ನಲ್ಲಿ ರಾಯ್ ಅವರ ಸಹೋದರ ವಾರಣಾಸಿಯಲ್ಲಿ ಮಹಿಳೆ ಹುಟ್ಟಿದ ದಿನಾಂಕಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಕಲಿ ಮಾಡಿದ ಆರೋಪದ ಮೇಲೆ ದೂರು ನೀಡಿದ್ದರು. ಆಕೆಯ ವಿರುದ್ಧ ನಕಲಿ ಮತ್ತು ವಂಚನೆಗಾಗಿ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್ 2 ರಂದು, ವಾರಣಾಸಿಯ ಸ್ಥಳೀಯ ನ್ಯಾಯಾಲಯವು ಮಹಿಳೆಯ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತು ಮತ್ತು ಪೊಲೀಸರು “ಹಲವು ದಾಳಿಗಳ ಹೊರತಾಗಿಯೂ ಪತ್ತೆಯಾಗಲಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇಬ್ಬರು ದೆಹಲಿಗೆ ಪ್ರಯಾಣಿಸುತ್ತಿರುವುದು “ತಿಳಿದಿರಲಿಲ್ಲ” ಎಂದು ಆ ವ್ಯಕ್ತಿ ಮತ್ತು ಮಹಿಳೆಯ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಪೊಲೀಸರಿಗೆ ಹೇಳಿದ್ದಾರೆ.

ಇದನ್ನೂ ಓದಿ: ‘ಕ್ಯಾಪ್ಟನ್ ಅಮರಿಂದರ್ ಸಿಂಗ್​​ನ್ನು ಬದಲಿಸಿ, ನವಜೋತ್ ಸಿಂಗ್ ಸಿಧು ಆಪ್ತರನ್ನು ವಜಾ ಮಾಡಿ’: ಪಂಜಾಬ್ ಕಾಂಗ್ರೆಸ್​ನಲ್ಲಿ ಮತ್ತೆ ಭಿನ್ನಮತದ ಕೂಗು

(Woman who had allegedly set herself on fire along with her friend outside the Supreme Court last week dies)

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ