Mehul Choksi: ಮೆಹುಲ್ ಚೋಕ್ಸಿ ಜೊತೆ ಡೊಮಿನಿಕಾಗೆ ಪ್ರಯಾಣಿಸಿದ್ದ ಮಹಿಳೆ ಆತನ ಪ್ರೇಯಸಿ ಅಲ್ಲ

ಮೆಹುಲ್ ಚೋಕ್ಸಿ ಕೆಲವು ದಿನಗಳ ಹಿಂದೆ ಆಂಟಿಗುವಾ ಮತ್ತು ಬರ್ಬುಡಾದಿಂದ ಕಣ್ಮರೆಯಾಗಿದ್ದರು. ಬಳಿಕ, ಚೋಕ್ಸಿಯನ್ನು ಪತ್ತೆಹಚ್ಚಿ ಡೊಮಿನಿಕಾದಲ್ಲಿ ಬಂಧಿಸಲಾಗಿತ್ತು.

Mehul Choksi: ಮೆಹುಲ್ ಚೋಕ್ಸಿ ಜೊತೆ ಡೊಮಿನಿಕಾಗೆ ಪ್ರಯಾಣಿಸಿದ್ದ ಮಹಿಳೆ ಆತನ ಪ್ರೇಯಸಿ ಅಲ್ಲ
ಮೆಹುಲ್ ಚೋಕ್ಸಿ
Follow us
TV9 Web
| Updated By: ganapathi bhat

Updated on:Aug 14, 2021 | 1:03 PM

ದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್​ ಒಂದರ ಹಗರಣದಲ್ಲಿ ಆರೋಪಿಯಾಗಿರುವ ದೇಶಭ್ರಷ್ಟ ಉದ್ಯಮಿ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ವಿಮಾನದಿಂದ ಇಳಿಯುವ ವೇಳೆಗೆ ಅವರ ಜೊತೆಗೆ ಒಬ್ಬಾಕೆ ಹುಡುಗಿ ಇದ್ದಳು ಆದರೆ ಆಕೆ ಮೆಹುಲ್ ಚೋಕ್ಸಿಯ ಪ್ರಿಯತಮೆ ಆಗಿರಲಿಲ್ಲ ಎಂದು ಉದ್ಯಮಿಯ ಆಪ್ತ ಮೂಲಗಳು ಮಾಹಿತಿ ನೀಡಿವೆ. ಬದಲಾಗಿ ಅವಳು, ಚೋಕ್ಸಿ ಬಂಧನಕ್ಕೆ ಸಹಕರಿಸಿದ ಗುಂಪಿನ ಸದಸ್ಯೆ ಎಂದು ಹೇಳಲಾಗಿದೆ.

ಮೆಹುಲ್ ಚೋಕ್ಸಿ ಕೆಲವು ದಿನಗಳ ಹಿಂದೆ ಆಂಟಿಗುವಾ ಮತ್ತು ಬರ್ಬುಡಾದಿಂದ ಕಣ್ಮರೆಯಾಗಿದ್ದರು. ಬಳಿಕ, ಚೋಕ್ಸಿಯನ್ನು ಪತ್ತೆಹಚ್ಚಿ ಡೊಮಿನಿಕಾದಲ್ಲಿ ಬಂಧಿಸಲಾಗಿತ್ತು. ಡೊಮಿನಿಕಾದಲ್ಲಿ ಪ್ರಿಯತಮೆಯೊಂದಿಗೆ ಸಿಕ್ಕಿಬಿದ್ದ ಮೆಹುಲ್ ಚೋಕ್ಸಿಯನ್ನು ಅಲ್ಲಿನ ಪೊಲೀಸರು ಸರಿಯಾಗಿ ವಿಚಾರಿಸಿಕೊಂಡಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ, ಇದೀಗ ಅದು ಆತನ ಪ್ರಿಯತಮೆ ಅಲ್ಲ ಎಂದು ತಿಳಿದುಬಂದಿದೆ.

ಅದಕ್ಕೂ ಮುನ್ನ ಚೋಕ್ಸಿಗೆ ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದಾಗ ಆತನಿಗೆ ಸೋಂಕು ಇಲ್ಲ ಎಂಬುದು ಪತ್ತೆಯಾಗಿದೆ. ಇದೀಗ ಡೊಮಿನಿಕಾದಲ್ಲಿ ವೈದ್ಯರು ಆತನಿಗೆ ಆರೈಕೆ ಮಾಡುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್​ ಒಂದರ ಹಗರಣದಲ್ಲಿ ಆರೋಪಿಯಾಗಿರುವ ದೇಶಭ್ರಷ್ಟ ಉದ್ಯಮಿ ಮೆಹುಲ್ ಚೋಕ್ಸಿ ಸದ್ಯ ಡೊಮಿನಿಕಾ ಪೊಲೀಸರ ವಶದಲ್ಲಿದ್ದಾರೆ.

ಡೊಮಿನಿಕಾದಿಂದ ಆಂಟಿಗುವಾಕ್ಕೆ ಚೋಕ್ಸಿಯನ್ನು ಕಳಿಸಲು ಅವಕಾಶ ನೀಡುವುದಿಲ್ಲ ಎಂದು ಅಲ್ಲಿನ ಪ್ರಧಾನಿ ಗಸ್ಟನ್ ಬ್ರೌನ್ ಈಗಾಗಲೇ ಹೇಳಿದ್ದಾರೆ. ಇದೀಗ ಚೋಕ್ಸಿಯನ್ನು ಭಾರತಕ್ಕೆ ಕಳಿಸುವ ಸಿದ್ಧತೆ ನಡೆದಿದೆ, ಅವರನ್ನು ಕರೆದೊಯ್ಯಲು ಖಾಸಗಿ ವಿಮಾನವೊಂದು ಡೊಮಿನಿಕಾದ ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದೆ ಎಂದು ಗಸ್ಟನ್​ ಬ್ರೌನ್​ ಹೇಳಿದ್ದಾರೆ.

ವಜ್ರದ ವ್ಯಾಪಾರಿ ಮೆಹುಲ್ ಚೋಸ್ಕಿ ಮತ್ತು ಅವನ ಸಂಬಂಧಿ ನೀರವ್​ ಮೋದಿ ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್​​ಗೆ (Punjab National Bank -PNB) 13,500 ಕೋಟಿ ರೂಪಾಯಿ ವಂಚನೆ ಎಸಗಿ ಪರಾರಿಯಾಗಿದ್ದಾರೆ. ಇಬ್ಬರು ವಿರುದ್ಧವೂ ಸಿಬಿಐ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುತ್ತಿದ್ದು, ಇಬ್ಬರೂ ಭಾರತಕ್ಕೆ ವಾಪಸಾಗಬೇಕಾಗಿದ್ದಾರೆ.

ಇದನ್ನೂ ಓದಿ: ಮೆಹುಲ್​ ಚೋಕ್ಸಿ ಡೊಮಿನಿಕಾದಿಂದ ಭಾರತಕ್ಕೆ ತೆರಳಲಿದ್ದಾರೆ ಎಂದ ಆಂಟಿಗುವಾ ಪ್ರಧಾನಿ; ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದ ಖಾಸಗಿ ಜೆಟ್​

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ

Published On - 6:24 pm, Mon, 31 May 21

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ