ಮುಂಬೈ: ಸಾಕಿನಾಕಾ ಏರಿಯಾದಲ್ಲಿ ಟೆಂಪೋ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದ 34ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಈಗ ಉಸಿರು ಚೆಲ್ಲಿದ್ದಾರೆ. ಆರೋಪಿ ಈಕೆಯ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ, ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ಹಾಕಿ ಚಿತ್ರಹಿಂಸೆ ನೀಡಿದ್ದ. ಒಂದು ಸರ್ಜರಿ ಆಗಿದ್ದರೂ ಮಹಿಳೆ ಚೇರಿಸಿಕೊಂಡಿರಲಿಲ್ಲ. ಎಚ್ಚರವೂ ಆಗಿರಲಿಲ್ಲ. ಇದೀಗ ಆಕೆ ಮೃತಪಟ್ಟಿದ್ದಾಗಿ ವರದಿಯಾಗಿದೆ. ಇದು ದೆಹಲಿಯ ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ನೆನಪಿಸುವಂತಿದೆ. ಅಂದು ಚಲಿಸುತ್ತಿದ್ದ ಬಸ್ ಮೇಲೆ ನಿರ್ಭಯಾಳನ್ನು ರೇಪ್ ಮಾಡಲಾಗಿತ್ತು.
ಸಕಿನಾಕಾ ಏರಿಯಾದಲ್ಲಿ ನಿಂತಿದ್ದ ಟೆಂಪೋದ ಮೇಲೆ ಮಹಿಳೆಯ ಮೇಲೆ ಅತ್ಯಾಚಾರ ಮಾಡಲಾಗಿತ್ತು. ರಕ್ತದ ಮಡುವಿನಲ್ಲಿ ನರಳುತ್ತ ಬಿದ್ದಿದ್ದ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಹಾಗೇ, ಕೆಲವೇ ಹೊತ್ತಲ್ಲಿ ಆರೋಪಿಯನ್ನೂ ಬಂಧಿಸಿದ್ದರು. ಪ್ರಸ್ತುತ ಪ್ರಕರಣದ ಸಂಬಂಧ ತನಿಖೆಯೂ ನಡೆಯುತ್ತಿದೆ. ಗುರುವಾರ ಮತ್ತು ಶುಕ್ರವಾರದ ನಡುವಿನ ರಾತ್ರಿಯಲ್ಲಿ ಈ ದುರ್ಘಟನೆ ನಡೆದಿತ್ತು. ಶುಕ್ರವಾರ ಮುಂಜಾನೆ ಹೊತ್ತಿಗೆ ಪೊಲೀಸರಿಗೆ ಯಾರೋ ಕರೆ ಮಾಡಿ, ಇಲ್ಲೊಬ್ಬ ವ್ಯಕ್ತಿ ಮಹಿಳೆಯೊಬ್ಬರನ್ನು ಥಳಿಸುತ್ತಿದ್ದಾನೆ ಎಂದು ಹೇಳಿದ್ದರು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಮಹಿಳೆಗೆ ತೀವ್ರ ರಕ್ತಸ್ರಾವ ಆಗಿತ್ತು ಎಂದು ವೈದ್ಯರು ಹೇಳಿದ್ದಾರೆ.
ಘಟನೆ ವಿರುದ್ಧ ರಾಷ್ಟ್ರಾದ್ಯಂತ ವಿರೋಧ ವ್ಯಕ್ತವಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಮಾಡಲಾಗುತ್ತಿದೆ. ಶಿವಸೇನೆ ಎಂಎಲ್ಸಿ ಮನಿಶಾ ಕಾಯಂದೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಹಾಗೇ, ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಬಿಜೆಪಿ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್, ಈ ಘಟನೆ ಬಗ್ಗೆ ತುಂಬ ಶಾಕ್ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Mumbai: ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ನಿಂದ ಚಿತ್ರಹಿಂಸೆ
ಕಲಬುರಗಿ: ಜೆಡಿಎಸ್ ಮನವೊಲಿಸುವ ಜವಾಬ್ದಾರಿ ಸಿಎಂ ಬೊಮ್ಮಾಯಿ ಹೆಗಲಿಗೆ; ಪಾಲಿಕೆ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್
(Woman who was raped in Sakinaka area Of Mumbai has died)