AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯೆಂದರೆ ಲೈಂಗಿಕ ಕ್ರಿಯೆಗೆ ಮಾತ್ರ ಸೀಮಿತ; ಕೆಂಗಣ್ಣಿಗೆ ಗುರಿಯಾದ ಕೇರಳದ ಸಿಪಿಎಂ ನಾಯಕ

ಮಹಿಳೆಯರು ಗಂಡನೊಂದಿಗೆ ಮಲಗಲು ಮತ್ತು ಮಕ್ಕಳನ್ನು ಹೆರಲು ಮಾತ್ರ ಸೀಮಿತ ಎಂದು ಚುನಾವಣೆಯಲ್ಲಿನ ಭರ್ಜರಿ ಗೆಲುವಿನ ಬಳಿಕ ಕೇರಳ ಸಿಪಿಎಂ ನಾಯಕ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಗೆಲುವಿನ ಭಾಷಣದ ವೇಳೆ ಸ್ತ್ರೀ ದ್ವೇಷ ಕಾರಿರುವ ಅವರ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಗಂಡಸರು ತಮ್ಮ ಲೈಂಗಿಕ ಕ್ರಿಯೆಗೆ ಮಾತ್ರ ಮಹಿಳೆಯನ್ನು ಮದುವೆಯಾಗಬೇಕು ಎಂದು ಅವರು ಹೇಳುವ ಮೂಲಕ ವಿವಾದಕ್ಕೆ ತುತ್ತಾಗಿದ್ದಾರೆ.

ಹೆಂಡತಿಯೆಂದರೆ ಲೈಂಗಿಕ ಕ್ರಿಯೆಗೆ ಮಾತ್ರ ಸೀಮಿತ; ಕೆಂಗಣ್ಣಿಗೆ ಗುರಿಯಾದ ಕೇರಳದ ಸಿಪಿಎಂ ನಾಯಕ
Kerala Cpm Leader Speech
ಸುಷ್ಮಾ ಚಕ್ರೆ
|

Updated on:Dec 15, 2025 | 7:55 PM

Share

ನವದೆಹಲಿ, ಡಿಸೆಂಬರ್ 15: ಕಳೆದ ವಾರ ಕೇರಳದಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ (Kerala Corporation Election) 47 ಮತಗಳ ಅಂತರದಿಂದ ಜಯಗಳಿಸಿದ ಸಂಭ್ರಮಾಚರಣೆಗೆ ಮಲಪ್ಪುರಂ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇರಳದ ಸಿಪಿಎಂ ನಾಯಕ ಸಯೀದ್ ಅಲಿ ಮಜೀದ್ ಭಾನುವಾರ ರಾತ್ರಿ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ.

ಮಹಿಳೆಯರು ಸೇರಿದಂತೆ ನೂರಾರು ಎಡಪಂಥೀಯ ಕಾರ್ಯಕರ್ತರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಸಯೀದ್ ಅಲಿ ಮಜೀದ್ ಭಾಷಣ ಮಾಡಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಕ್ಕಾಗಿ ಮಜೀದ್ ಅವರು ಮುಸ್ಲಿಂ ಲೀಗ್ ಅನ್ನು ಗುರಿಯಾಗಿಸಿಕೊಂಡು ಈ ಭಾಷಣ ಮಾಡಿದ್ದಾರೆ. ‘ಮತಗಳನ್ನು ಗೆಲ್ಲಲು ಮಹಿಳೆಯರನ್ನು ಮುಂದಿಟ್ಟುಕೊಂಡು ಕಣಕ್ಕಿಳಿದಿದ್ದಾರೆ’ ಎಂದು ಮಜೀದ್ ಆರೋಪಿಸಿದ್ದಾರೆ.

ಇದನ್ನೂ ಓದಿ: ವಿಕಸಿತ ಕೇರಳವೇ ನಮ್ಮ ಗುರಿ; ಕಾರ್ಪೋರೇಷನ್ ಗೆಲುವಿನ ಬಳಿಕ ತಿರುವನಂತಪುರಂ ಜನರಿಗೆ ಪ್ರಧಾನಿ ಮೋದಿ ಧನ್ಯವಾದ

ಮುಸ್ಲಿಂ ಲೀಗ್‌ನಿಂದ ಸ್ಪರ್ಧಿಸಿರುವ ಮಹಿಳಾ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ನೀಡಿದ ಅಸಭ್ಯ ಹೇಳಿಕೆಗಳಿಂದ ತೃಪ್ತರಾಗದ ಮಜೀದ್, ಸಿಪಿಎಂನ ಮಹಿಳೆಯರು ಕೂಡ ತಲೆತಗ್ಗಿಸುವಂತಹ ಹೇಳಿಕೆ ನೀಡಿದ್ದಾರೆ. “ನಮ್ಮಲ್ಲಿ ಮದುವೆಯಾದ ಮಹಿಳೆಯರಿದ್ದಾರೆ. ಆದರೆ, ಮತಗಳನ್ನು ಗಳಿಸಲು ನಾವು ಅವರನ್ನು ಪ್ರದರ್ಶನಕ್ಕಿಡುತ್ತಿಲ್ಲ. ಅವರು ಮನೆಯಲ್ಲಿಯೇ ಕುಳಿತುಕೊಳ್ಳಲಿ. ನಾವು ಮಹಿಳೆಯರೊಂದಿಗೆ ಮಲಗಲು ಮತ್ತು ಮಕ್ಕಳನ್ನು ಮಾಡಲು ಮದುವೆಯಾಗುತ್ತೇವೆ” ಎನ್ನುವ ಮೂಲಕ ವಿವಾದಕ್ಕೀಡಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Mon, 15 December 25

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?