AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು

ಸಮಾಜ ಎಷ್ಟೇ ಬದಲಾಗಿದ್ದರೂ ಜಾತಿ ಪದ್ಧತಿ ಮಾತ್ರ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ತೆಲಂಗಾಣದ ಜಾತ್ರೆಯೊಂದರಲ್ಲಿ ಜಾತಿಯ ಕಾರಣದಿಂದ ಮಹಿಳೆಯರ ಕೂದಲನ್ನು ಎಳೆದು, ಕೋಲಿನಿಂದ ಹೊಡೆದು ಹಿಂಸೆ ನೀಡಲಾಗಿದೆ. ಈ ಸಂಘರ್ಷದಲ್ಲಿ 2 ತಿಂಗಳ ಮಗು ಮೃತಪಟ್ಟಿದೆ. ಈ ಘಟನೆ ನಡೆದ ಬಳಿಕ ಆ ಕುಟುಂಬಕ್ಕೆ ಗ್ರಾಮದೊಳಗೆ ಬಾರದಂತೆ ಬೆದರಿಕೆ ಹಾಕಿ ಬಹಿಷ್ಕಾರ ಹಾಕಲಾಗಿದೆ. 

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು
Representative Image
ಸುಷ್ಮಾ ಚಕ್ರೆ
|

Updated on: Feb 23, 2026 | 7:55 PM

Share

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು.

ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು. ತಮ್ಮನ್ನು “ಕೆಳಜಾತಿ” ಎಂದು ಕರೆದು ಹೀಯಾಳಿಸಿದ್ದಾರೆ. ದೇವಾಲಯಕ್ಕೆ ಪ್ರವೇಶ ಉಚಿತವಾದ್ದರಿಂದ ಹಣ ನೀಡಲು ನಾವು ನಿರಾಕರಿಸಿದಾಗ ಹಲ್ಲೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಮುಂದೆ ಮೂತ್ರ ವಿಸರ್ಜನೆ: ಪ್ರಶ್ನಿಸಿದ್ದಕ್ಕೆ ಹಲ್ಲೆ

ಗಲಾಟೆಯ ವೇಳೆ ಆ ಮಹಿಳೆಯರಲ್ಲಿ ಒಬ್ಬರು ತನ್ನ 2 ತಿಂಗಳ ಮಗುವನ್ನು ಗಲಾಟೆ ಮಾಡುವವರ ಪಾದಗಳ ಮೇಲೆ ಇಟ್ಟು, ತನ್ನ ಗಂಡನನ್ನು ಹೊಡೆಯದಂತೆ ಬೇಡಿಕೊಂಡಾಗ ಆತ ಎರಡು ತಿಂಗಳ ಮಗುವನ್ನು ತುಳಿದಿದ್ದಾನೆ. ತಕ್ಷಣ ಶಿಶುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅದಾಗಿ ಮೂರು ದಿನಗಳ ನಂತರ ಆ ಮಗು ಮೃತಪಟ್ಟಿತು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆರೋಪಿಗಳು ಮಹಿಳೆಯರ ಕೂದಲನ್ನು ಎಳೆದು ಹೊರಗೆ ತಳ್ಳಿದರು. ತೆಂಗಿನಕಾಯಿ ಒಡೆಯಲು ಬಳಸಿದ್ದ ಕಬ್ಬಿಣದ ರಾಡ್ ಬಳಸಿ ನಾಲ್ವರು ಜನರು ಹಲ್ಲೆ ನಡೆಸಿದರು. ಈ ವೇಳೆ ಆ ಕುಟುಂಬದವರು ಹಾಕಿದ್ದ ಚಿನ್ನದ ಕಿವಿಯೋಲೆಗಳು, ಬೆಳ್ಳಿ ಬಳೆಗಳು ಮತ್ತು ಫೋನ್ ಸೇರಿದಂತೆ ಅವರ ವಸ್ತುಗಳನ್ನು ಕಸಿದುಕೊಳ್ಳಲಾಗಿದೆ ಎನ್ನಲಾಗಿದೆ. ಮೃತ ಶಿಶುವಿನ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಅದರ ಆಧಾರದ ಮೇಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!