NDA Exam: ಲಿಂಗ ತಾರತಮ್ಯಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಈ ಬಾರಿ ಮಹಿಳೆಯರಿಗೂ ಎನ್​ಡಿಎ ಪರೀಕ್ಷೆ ಬರೆಯಲು ಅವಕಾಶ

National Defence Academy Exam: ಇದುವರೆಗೂ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ ಇರಲಿಲ್ಲ. ಇದು ಲಿಂಗತಾರತಮ್ಯ ಎಂದು ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್ ಇದೇ ಮೊದಲ ಬಾರಿಗೆ ಮಹಿಳೆಯರಿಗೂ ಎನ್​ಡಿಎ ಪರೀಕ್ಷೆ ಬರೆಯಲು ಅನುಮತಿ ನೀಡಿದೆ.

NDA Exam: ಲಿಂಗ ತಾರತಮ್ಯಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಈ ಬಾರಿ ಮಹಿಳೆಯರಿಗೂ ಎನ್​ಡಿಎ ಪರೀಕ್ಷೆ ಬರೆಯಲು ಅವಕಾಶ
NDA Exam
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 18, 2021 | 2:58 PM

ನವದೆಹಲಿ: ಮಹಿಳೆಯರು ಕೂಡ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್​ಡಿಎ) ಪರೀಕ್ಷೆ ಬರೆಯಲು ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ. ಭಾರತದ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ (National Defence Academy) ಸೇರಲು ಮಹಿಳೆಯರಿಗೆ ಕೂಡ ಅವಕಾಶ ಕಲ್ಪಿಸಬೇಕು. ಕೇಂದ್ರ ಸರ್ಕಾರ ತನ್ನ ಪೂರ್ವಗ್ರಹ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದು ನ್ಯಾಯಾಲಯ ಘೋಷಿಸಿದೆ. ಇದೇ ಸೆಪ್ಟೆಂಬರ್ 5ರಂದು ಎನ್​ಡಿಎ (NDA) ಪರೀಕ್ಷೆ ನಡೆಯಲಿದೆ. ಈ ವರ್ಷದಿಂದಲೇ ಈ ಆದೇಶ ಜಾರಿಯಾಗಲಿದೆ.

ಇದುವರೆಗೂ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಸೇರಲು ಯುವತಿಯರಿಗೆ ಅವಕಾಶ ನೀಡುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಮಾನತೆಯ ದೃಷ್ಟಿಯಿಂದ ಈ ಆದೇಶ ಬಹಳ ಮಹತ್ವದ್ದಾಗಿದೆ. ಸೆಪ್ಟೆಂಬರ್ 5ರಂದು ನಡೆಯುವ ಪರೀಕ್ಷೆಯ ನಂತರ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಅಂತಿಮ ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ನಲ್ಲಿ ನಡೆಯುತ್ತಿರುವ ವಿಚಾರಣೆಯ ಬಳಿಕ ನಿರ್ಧಾರವಾಗಲಿದೆ.

ಇದೇ ವೇಳೆ ರಕ್ಷಣಾ ಅಕಾಡೆಮಿಯಲ್ಲಿ ಮಹಿಳೆಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಭಾರತೀಯ ಸೇನೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಇದು ಸೇನೆಯ ಲಿಂಗ ತಾರತಮ್ಯವನ್ನು ತೋರಿಸುತ್ತದೆ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ತಮಗೂ ರಕ್ಷಣಾ ಅಕಾಡೆಮಿಯ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಹಿಳೆಯರು ಸರ್ಕಾರವನ್ನು ಒತ್ತಾಯಿಸಿದ್ದರು. ಈ ಬಗ್ಗೆ ಕೇಂದ್ರ ಸರ್ಕಾರ ಯಾವ ನಿರ್ಧಾರವನ್ನೂ ತೆಗೆದುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೆಲವು ಯುವತಿಯರು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ಮಹಿಳೆಯರಿಗೂ ರಕ್ಷಣಾ ಅಕಾಡೆಮಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಧ್ಯಂತರ ಆದೇಶ ನೀಡಿದೆ.

ಮಹಾರಾಷ್ಟ್ರದ ಪುಣೆ ಬಳಿ ಇರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ದೇಶದಲ್ಲಿ ಮಿಲಿಟರಿ ಅಧಿಕಾರಿಗಳಿಗೆ ತರಬೇತಿ ನೀಡುವ ಪ್ರಮುಖ ಸಂಸ್ಥೆಯಾಗಿದೆ. ಭಾರತೀಯ ಸೇನೆ. ನೌಕಾಪಡೆ, ವಾಯುಪಡೆಗೆ ಸೇರಲು ಬಯಸುವವರಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ. ಇಲ್ಲಿ 3 ವರ್ಷಗಳ ಕಾಲ ತರಬೇತಿ ನೀಡಲಾಗುತ್ತದೆ. ಆದರೆ, ಇದುವರೆಗೂ ಇಲ್ಲಿ ತರಬೇತಿ ಪಡೆಯಲು ಮಹಿಳೆಯರು ಪರೀಕ್ಷೆ ಬರೆಯಲು ಅನುಮತಿ ಇರಲಿಲ್ಲ. ಈ ಪ್ರಕರಣದ ಕುರಿತು ಸೆ. 8ರಂದು ಅಂತಿಮ ವಿಚಾರಣೆ ನಡೆಯಲಿದೆ.

ಇತ್ತೀಚೆಗಷ್ಟೆ ಖಾಯಂ ಸೇವಾ ಆಯೋಗದಲ್ಲಿ ಮಹಿಳೆಯರನ್ನು ಸೇರಿಸುವ ಬಗ್ಗೆ ಮಹತ್ವದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಅದರ ಬೆನ್ನಲ್ಲೇ ರಕ್ಷಣಾ ಅಕಾಡೆಮಿಯಲ್ಲಿ ಮಹಿಳೆಯರು ಪರೀಕ್ಷೆ ಬರೆಯಬಹುದು ಎಂಬ ಆದೇಶ ನೀಡುವ ಮೂಲಕ ಮತ್ತೊಂದು ಮಹತ್ವದ ಆದೇಶ ಪ್ರಕಟಿಸಿದೆ. ಸೆಪ್ಟೆಂಬರ 5ರಂದು ನಡೆಯುವ ಈ ವರ್ಷದ ಪರೀಕ್ಷೆಯಿಂದಲೇ ಈ ಆದೇಶ ಜಾರಿಗೆ ಬರಲಿದೆ.

ಈ ಪ್ರಕರಣದ ವಿಚಾರಣೆ ವೇಳೆ ಭಾರತೀಯ ಸೇನೆಯು ಮಹಿಳೆಯರನ್ನು ಎನ್​ಡಿಎ ಪರೀಕ್ಷೆ ಬರೆಯಲು ಅನುಮತಿ ನೀಡದಿರುವುದು ನೀತಿ ನಿರ್ಧಾರ ಎಂದು ಹೇಳಿತ್ತು. ಇದಕ್ಕೆಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್ ಇದು ಲಿಂಗ ತಾರತಮ್ಯದ ನಿರ್ಧಾರ. ಸಮಾನತೆಯ ದೃಷ್ಟಿಯಿಂದ ಮಹಿಳೆಯರಿಗೂ ರಕ್ಷಣಾ ಅಕಾಡೆಮಿ ಸೇರಲು ಅವಕಾಶ ನೀಡಬೇಕು. ಮೊದಲು ನಿಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಿ ಎಂದು ಅಸಮಾಧಾನ ಹೊರಹಾಕಿದೆ.

ಇದನ್ನೂ ಓದಿ: ದೀರ್ಘಾವಧಿಯಲ್ಲಿ ಆನ್‌ಲೈನ್ ತರಗತಿಗಳು ಸುಗಮವಾಗಲ್ಲ : ಶಾಲೆ ಮತ್ತೆ ತೆರೆಯಬೇಕೆಂದು ಸುಪ್ರೀಂಕೋರ್ಟ್ ಮೊರೆ ಹೋದ ವಿದ್ಯಾರ್ಥಿ

Supreme Court: ಫ್ಲಿಪ್​ಕಾರ್ಟ್​, ಅಮೆಜಾನ್​ ವಿರುದ್ಧ ಸಿಸಿಐ ವಿಚಾರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

(Women Can Take NDA Exam Supreme Court Landmark Order and slams army for Gender discrimination)

Published On - 2:50 pm, Wed, 18 August 21

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ