ಮಹಿಳಾ ಸಬಲೀಕರಣ ಮುಖ್ಯ, ಅದು ನಮ್ಮ ಸರ್ಕಾರದ ಆದ್ಯತೆ -ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

PM Modi Women Empowerment: ಈ ಸಂದರ್ಭದಲ್ಲಿ ಗಿರ್ ಹಸುಗಳನ್ನು ವಿತರಿಸಿ, ಮಹಿಳಾ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಶೇರ್ ಮಾಡಿರುವ ವಿಡಿಯೋದಲ್ಲಿ ಅವರು ಹಲವು ಮಹಿಳೆಯರೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಮಹಿಳಾ ಸಬಲೀಕರಣ ಮುಖ್ಯ, ಅದು ನಮ್ಮ ಸರ್ಕಾರದ ಆದ್ಯತೆ -ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಮಹಿಳಾ ಸಬಲೀಕರಣ ಮುಖ್ಯ. ಅದು ನಮ್ಮ ಸರ್ಕಾರದ ಆದ್ಯತೆ ವಿಡಿಯೋ ಹಂಚಿಕೊಂಡ ಮೋದಿ
Follow us
ಸಾಧು ಶ್ರೀನಾಥ್​
|

Updated on: Feb 24, 2024 | 12:07 PM

ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿ ಪ್ರವಾಸದಲ್ಲಿದ್ದಾರೆ. ಈ ಸಂದರ್ಭದಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನಾ ಸಮಾರಂಭಗಳು ನಡೆಯುತ್ತಿವೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶನಿವಾರ ಕಾಶಿಯಲ್ಲಿ ಮಹಿಳೆಯರೊಂದಿಗೆ ಸಂವಾದದ ವೀಡಿಯೊವನ್ನು (Women Empowerment) ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಶುಕ್ರವಾರ ವಾರಣಾಸಿಗೆ ಭೇಟಿ ನೀಡಿ ಸುಮಾರು 13,000 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಾಯಿತು. ಅದೇ ಸಮಯದಲ್ಲಿ, ಯುಪಿ ಎಸ್‌ಐಡಿಎ (UPSIDA) ಆಗ್ರೋ ಪಾರ್ಕ್ ಕಾರ್ಖಿಯಾಂವ್‌ನಲ್ಲಿ ಬನಾಸ್ ಕಾಶಿ ಸಂಕುಲ್ ಹಾಲು ಸಂಸ್ಕರಣಾ ಘಟಕವನ್ನು ಪ್ರಧಾನಿ ಉದ್ಘಾಟಿಸಿದರು (BJP Government).

ಈ ಸಂದರ್ಭದಲ್ಲಿ ಗಿರ್ ಹಸುಗಳನ್ನು ವಿತರಿಸಿ, ಮಹಿಳಾ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಶೇರ್ ಮಾಡಿರುವ ವಿಡಿಯೋದಲ್ಲಿ ಅವರು ಹಲವು ಮಹಿಳೆಯರೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಅವರು ಹೀಗೆ ಬರೆದುಕೊಂಡಿದ್ದಾರೆ:

Also Read: ಫೆಬ್ರವರಿ 27-28 ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

‘ಮಹಿಳಾ ಸಬಲೀಕರಣ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ವಿಶ್ವನಾಥನ ನಗರದ ತಾಯಂದಿರು ಮತ್ತು ಸಹೋದರಿಯರಿಂದ ಗಿರ್ ಹಸು ಪಡೆದ ನಂತರ ಅವರ ಜೀವನವು ಸಾಕಷ್ಟು ಬದಲಾಗಿದೆ ಎಂದು ಕೇಳಿದಾಗ ತುಂಬಾ ತೃಪ್ತಿಯಾಯಿತು ಎಂದಿದ್ದಾರೆ. ಪ್ರಧಾನಿ ಮೋದಿಯವರೊಂದಿಗಿನ ಸಂವಾದದ ವೇಳೆ ಅನೇಕ ಮಹಿಳೆಯರು ಗಿರ್ ಹಸುಗಳು, ಅವುಗಳ ಸಂತಾನೋತ್ಪತ್ತಿ ಮತ್ತು ಪ್ರಯೋಜನಗಳ ಬಗ್ಗೆ ವಿವರಿಸಿದರು.

ಮಹಿಳೆಯರಿಗೆ ಗಿರ್ ಹಸುಗಳನ್ನು ನೀಡಿದ ಸರ್ಕಾರ:

ಪ್ರಧಾನಿಯವರು ಬನಾಸ್ ಡೈರಿಗೆ ಭೇಟಿ ನೀಡಿ ಅಲ್ಲಿ ದನ ಸಾಕುವ ಮಹಿಳೆಯರೊಂದಿಗೆ ಸಂವಾದ ನಡೆಸಿದರು. ಎರಡು ವರ್ಷಗಳ ಹಿಂದೆ ಬನಾಸ್ ಡೈರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ವಾರಣಾಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿ ಹೀಗೆ ಹೇಳಿದ್ದಾರೆ … ನಾನು ಬನಾಸ್ ಡೈರಿ ಪ್ಲಾಂಟ್‌ಗೆ ಹೋಗಿದ್ದೆ. ಅಲ್ಲಿ ಜಾನುವಾರು ಸಾಕಣೆಯಲ್ಲಿ ತೊಡಗಿರುವ ಅನೇಕ ಸಹೋದರಿಯರೊಂದಿಗೆ ಮಾತನಾಡುವ ಅವಕಾಶ ಸಿಕ್ಕಿತು. 2-3 ವರ್ಷಗಳ ಹಿಂದೆ ಈ ರೈತ ಕುಟುಂಬಗಳ ಸಹೋದರಿಯರಿಗೆ ದೇಶಿ ತಳಿಯ ಗಿರ್ ಹಸುಗಳನ್ನು ನೀಡಿದ್ದೆವು. ಪೂರ್ವಾಂಚಲದಲ್ಲಿ ಸುಧಾರಿತ ತಳಿಯ ದೇಶಿ ಹಸುಗಳ ಬಗ್ಗೆ ಮಾಹಿತಿ ನೀಡಲಾಯಿತು. ಹಸುಗಳನ್ನು ಸಾಕುವುದು ಮತ್ತು ರೈತರು ಮತ್ತು ಜಾನುವಾರು ಸಾಕಣೆದಾರರು ಇದರ ಲಾಭ ಪಡೆಯುವುದು ತಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ