AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಆಂಧ್ರಪ್ರದೇಶದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!

ವಾಸ್ತವವಾಗಿ ಗೂಗೂಡು ಗ್ರಾಮದ ದಲಿತರೂ ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಪ್ರವೇಶಿಸುವುದಿಲ್ಲ. ಇದೂ ಕೂಡ ಬಹಳ ಕಾಲದಿಂದಲೂ ಇರುವ ಅಪವಾದ... ಆದರೆ ಯಾರೂ ನಿರ್ಬಂಧ ಹೇರಿಲ್ಲ. ಇಲ್ಲಿಯ ಪದ್ಧತಿಯಂತೆ ಮಹಿಳೆಯರು ಮತ್ತು ದಲಿತರು ದೇವಸ್ಥಾನ ಪ್ರವೇಶಿಸುವಂತಿಲ್ಲ.

Andhra Pradesh: ಆಂಧ್ರಪ್ರದೇಶದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!
ಆಂಧ್ರದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 28, 2023 | 1:30 PM

Share

ಅನಂತಪುರ, ಜುಲೈ 28: ನಾರಪಾಲ ಮಂಡಲದ ಗೂಗುಡು ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಒಂದು ಪ್ರತ್ಯೇಕತೆಯ ವಿಶೇಷವಿದೆ. ಈ ದೇವಾಲಯದೊಳಕ್ಕೆ ಮಹಿಳೆಯರು ಪ್ರವೇಶಿಸುವುದಿಲ್ಲ… ಏಕೆಂದರೆ ಈ ದೇವಾಲಯಕ್ಕೆ ಮಹಿಳೆಯರು ಪ್ರವೇಶ ಮಾಡುವುದಿಲ್ಲ ಎಂಬ ಎಂಬ ಆಚಾರ ಮೊದಲಿನಿಂದಲೂ ಇದೆ. ಆದರೆ ಮಹಿಳೆಯರು ದೇವಸ್ಥಾನ ಪ್ರವೇಶಿಸಬಾರದು ಎಂಬ ಲಿಖಿತ ನಿಯಮವೇನೂ ಇಲ್ಲ. 13 ವರ್ಷದೊಳಗಿನ ಹುಡುಗಿಯರು ಒಳಗೆ ಹೋಗಿ ಸ್ವಾಮಿಯ ದರ್ಶನ ಮಾಡುತ್ತಾರೆ. ಆದರೆ 13 ವರ್ಷ ಮೇಲ್ಪಟ್ಟ ಮಹಿಳೆಯರು ತಾವಾಗಿಯೇ ದೇವಸ್ಥಾನ ಪ್ರವೇಶಿಸುವುದಿಲ್ಲ. ಮಹಿಳೆಯರು ಸಾಮಾನ್ಯವಾಗಿ ತಮ್ಮ ಮಾಸಿಕ ಅವಧಿಯಲ್ಲಿ ಯಾವುದೇ ದೇವಸ್ಥಾನಕ್ಕೆ ಹೋಗುವುದಿಲ್ಲ ಎಂಬುದು ಗಮನಾರ್ಹ.

ಅದೇ ರೀತಿ ಹಿಂದಿನಿಂದಲೂ ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿರಲಿಲ್ಲ. ಕಾಲಕ್ರಮೇಣ ಮಹಿಳೆಯರು ದೇವಸ್ಥಾನದ ಒಳಗೆ ಹೋಗುವುದನ್ನು ಸಂಪೂರ್ಣವಾಗಿ ನಿಲ್ಲಿಸಿ ದರ್ಶನ ಪಡೆಯುವುದನ್ನು ನಿಲ್ಲಿಸಿದರು… ಅಂದಿನಿಂದ ದೇವಸ್ಥಾನದೊಳಗೆ ಮಹಿಳೆಯರಿಗೆ ಪ್ರವೇಶವಿಲ್ಲ ಎಂಬ ಪ್ರಚಾರವೂ ನಡೆಯುತ್ತಿತ್ತು… ವಾಸ್ತವವಾಗಿ ಅಂತಹ ಲಿಖಿತ ನಿಯಮವೇನೂ ಇಲ್ಲ…

ಅದರಂತೆ ಅನಾದಿ ಕಾಲದ ಸಂಪ್ರದಾಯದಂತೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವುದಿಲ್ಲ… ಮಾಜಿ ಸಚಿವೆ ಶೈಲಜಾ ನಾಥ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಗೂಗೂಡು ಗ್ರಾಮದ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಅಪಘಾತದಲ್ಲಿ ಕೈ ಮುರಿದುಕೊಂಡಿದ್ದರು. ಹಾಗಾಗಿ ಅಂದಿನಿಂದ ಮಾಜಿ ಸಚಿವೆ ಶೈಲಜ ನಾಥ್ ಕೂಡ ದೇವಸ್ಥಾನದ ಹೊರಗೇ ಉಳಿದುಕೊಂಡಿದ್ದರು. ಅವರು ಹೊರಗಡೆಯಿಂದ ದೇವರ ದರ್ಶನ ಪಡೆಯುತ್ತಾರೆಯೇ ಹೊರತು, ದೇವಸ್ಥಾನದೊಳಕ್ಕೆ ಪ್ರವೇಶಿಸುವುದಿಲ್ಲ.

ವಾಸ್ತವವಾಗಿ ಗೂಗೂಡು ಗ್ರಾಮದ ದಲಿತರೂ ದೇವಸ್ಥಾನಕ್ಕೆ ಪ್ರವೇಶಿಸುವುದಿಲ್ಲ. ಇದೂ ಕೂಡ ಬಹಳ ಕಾಲದಿಂದಲೂ ಇರುವ ಅಪವಾದ… ದಲಿತರ ಪ್ರವೇಶಕ್ಕೆ ಸಹ ಯಾರೂ ನಿರ್ಬಂಧ ಹೇರಿಲ್ಲ. ಕೆಲವು ವರ್ಷಗಳಿಂದ ಇಲ್ಲಿಯ ಪದ್ಧತಿಯಂತೆ ಮಹಿಳೆಯರು ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶಿಸುವಂತಿಲ್ಲ. ಹೊರಗಿನಿಂದ ಸ್ವಾಮಿಯ ದರ್ಶನ ಮಾಡುತ್ತಾರೆ ಅಷ್ಟೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್