ಮಹಿಳೆಯರಿಗೆ ಸುರಕ್ಷತೆಯಿಲ್ಲ, ಟಿಎಂಸಿ ಅಪರಾಧಿಗಳನ್ನು ರಕ್ಷಿಸುತ್ತಿದೆ; ಕೊಲ್ಕತ್ತಾ ಅತ್ಯಾಚಾರ ಕುರಿತು ಮೋದಿ ವಾಗ್ದಾಳಿ
ಮಹಿಳಾ ಮುಖ್ಯಮಂತ್ರಿ ಅಧಿಕಾರದಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಟಿಎಂಸಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುತ್ತಿದೆ. ಕೊಲ್ಕತ್ತಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಕೊಲ್ಕತ್ತಾ, ಜುಲೈ 18: ಪ್ರಧಾನಿ ಮೋದಿ (PM Modi) ಇಂದು ಪಶ್ಚಿಮ ಬಂಗಾಳದಲ್ಲಿ 5,400 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಇಂದು ದುರ್ಗಾಪುರದಲ್ಲಿ (Modi in Durgapur) ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಲ್ಲಿ ಯುವ ವೈದ್ಯರ ಮೇಲೆ ದೌರ್ಜನ್ಯ ನಡೆದಾಗ ಟಿಎಂಸಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುವಲ್ಲಿ ಹೇಗೆ ತೊಡಗಿಸಿಕೊಂಡಿತು ಎಂಬುದನ್ನು ನೀವೆಲ್ಲರೂ ನೋಡಿದ್ದೀರಿ. ಮತ್ತೊಂದು ಕಾಲೇಜಿನಲ್ಲಿ ಮತ್ತೊಬ್ಬ ಯುವತಿಯ ಮೇಲೆ ಭಯಾನಕ ಕೃತ್ಯ ನಡೆದಾಗಲೂ ರಾಜ್ಯ ಸರ್ಕಾರ ಮೌನ ವಹಿಸಿತ್ತು. ಆ ಪ್ರಕರಣದಲ್ಲೂ ಆರೋಪಿಗಳು ಟಿಎಂಸಿ ಜೊತೆ ಸಂಪರ್ಕ ಹೊಂದಿದ್ದಾರೆಂದು ಕಂಡುಬಂದಿದೆ” ಎಂದು ಟೀಕಿಸಿದ್ದಾರೆ.
ಆಡಳಿತ ಪಕ್ಷದ ಕಾನೂನು ಮತ್ತು ಸುವ್ಯವಸ್ಥೆ ದಾಖಲೆಯನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ, “ಟಿಎಂಸಿ ರಾಜ್ಯದಲ್ಲಿ ಸುರಕ್ಷತೆ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳುವಲ್ಲಿ ವಿಫಲವಾಗಿದೆ. ಪಶ್ಚಿಮ ಬಂಗಾಳದಲ್ಲಿ ಮುರ್ಷಿದಾಬಾದ್‌ನಂತಹ ಗಲಭೆಗಳು ನಡೆಯುತ್ತಿವೆ ಮತ್ತು ಪೊಲೀಸರು ಏಕಪಕ್ಷೀಯ ಕ್ರಮ ಕೈಗೊಳ್ಳುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನ್ಯಾಯ ಸಿಗುತ್ತಿಲ್ಲ. ರಾಜ್ಯ ಸರ್ಕಾರವು ರಾಜ್ಯದ ಜನರ ಜೀವಗಳನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ‘ಆರ್‌ಜೆಡಿ, ಕಾಂಗ್ರೆಸ್ ಜನರನ್ನು ಲೂಟಿ ಮಾಡಿವೆ’; ಬಿಹಾರದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
ಟಿಎಂಸಿ ವ್ಯವಹಾರಗಳಿಂದ ಹಣವನ್ನು ಸುಲಿಗೆ ಮಾಡುತ್ತಿದೆ ಮತ್ತು ರಾಜ್ಯದ ಆರ್ಥಿಕ ಬೆಳವಣಿಗೆಗೆ ಅಡ್ಡಿಪಡಿಸುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಉದ್ಯಮಿಗಳಿಂದ ಹಣವನ್ನು ಕೇಳಲಾಗುತ್ತಿದೆ. ಟಿಎಂಸಿಯ ಜನರು ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಟಿಎಂಸಿಯ ‘ಗೂಂಡಾ ತೆರಿಗೆ’ ರಾಜ್ಯದಲ್ಲಿ ಹೂಡಿಕೆಗೆ ಅಡ್ಡಿ ಪಡಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.
TMC’s misrule in West Bengal has been marked by lies, lawlessness and loot. The people are turning towards the BJP with hope. Watch from Durgapur. https://t.co/SZMEEM8rmb
— Narendra Modi (@narendramodi) July 18, 2025
ಆಡಳಿತ ಪಕ್ಷವು “ಪಶ್ಚಿಮ ಬಂಗಾಳದಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದರು.
ಇದನ್ನೂ ಓದಿ: ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಗೆ ಬಂಗಾಳದ ದುರ್ಗಾಪುರದಲ್ಲಿ ಭರ್ಜರಿ ಸ್ವಾಗತ
ಇಂದು ಪ್ರಧಾನಮಂತ್ರಿ ಮೋದಿ ಬಂಕುರಾ ಮತ್ತು ಪುರುಲಿಯಾ ಜಿಲ್ಲೆಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ನ 1,950 ಕೋಟಿ ರೂ. ವೆಚ್ಚದ ನಗರ ಅನಿಲ ವಿತರಣಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿ ಉರ್ಜಾ ಗಂಗಾ (ಪಿಎಂಯುಜಿ) ಉಪಕ್ರಮದಡಿಯಲ್ಲಿ ಹಾಕಲಾದ ದುರ್ಗಾಪುರ-ಹಾಲ್ಡಿಯಾ ನೈಸರ್ಗಿಕ ಅನಿಲ ಪೈಪ್‌ಲೈನ್‌ನ 1,190 ಕೋಟಿ ರೂ. ವೆಚ್ಚದ ದುರ್ಗಾಪುರ-ಕೊಲ್ಕತ್ತಾ ವಿಭಾಗವನ್ನು (132 ಕಿ.ಮೀ) ರಾಷ್ಟ್ರಕ್ಕೆ ಸಮರ್ಪಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




