ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !

ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ ಎನ್ನುತ್ತಾರೆ ಇಲ್ಲಿನ ಮಹಿಳೆಯರು.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !
ಉತ್ತರ ಪ್ರದೇಶದ ಹಳ್ಳಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಮಹಿಳೆಯರು
Follow us
Lakshmi Hegde
|

Updated on: May 16, 2021 | 6:59 PM

ನೊಯ್ಡಾ: ಯಾವ ಲಾಕ್​ಡೌನ್​..ಕರ್ಫ್ಯೂದಿಂದಲೂ ಕೊರೊನಾ ವೈರಸ್​​ನ್ನು ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಲಸಿಕೆ ಅಭಿಯಾನ ನಡೆಯುತ್ತಿದ್ದರೂ ಇನ್ನೊಂದೆಡೆ ಸೋಂಕಿನ ತೀವ್ರತೆ ಏರುತ್ತಿದೆ. ಇನ್ನೇನು ದಾರಿ ಕಾಣದ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ 100ಕ್ಕೂ ಹೆಚ್ಚು ಮಹಿಳೆಯರು ಒಂದೆಡೆ ಸಾಲಾಗಿ ನಿಂತು, ಕೊರೊನಾ ಒಂದು ಮಾತೆ ಎಂದು ಪರಿಗಣಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ವಾರಾಣಸಿ ಮತ್ತು ಕುಶಿನಗರ ಜಿಲ್ಲೆಗಳ ಹಳ್ಳಿಗಳಲ್ಲಿ ಕೊರೊನಾವನ್ನು ದೈವೀಶಕ್ತಿ ಇರುವ ಮಾತೆಯೆಂದು ಪೂಜಿಸಲಾಗುತ್ತಿದೆ. ಕೋಪವನ್ನು ಕಡಿಮೆ ಮಾಡಿಕೊಂಡು ಎಲ್ಲರನ್ನೂ ರಕ್ಷಿಸು, ಪ್ರಾಣವನ್ನು ಉಳಿಸು ಎಂದು ಮಹಿಳೆಯರು ಬೇಡಿಕೊಳ್ಳುತ್ತಿದ್ದಾರೆ. ಹೀಗೆ ಪ್ರಾರ್ಥನೆ ಸಲ್ಲಿಸುವ ಮಹಿಳೆಯರು ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲಾಗಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕುಶಿನಗರ್​​ ನಿವಾಸಿ ಸುರಿಲಿ ದೇವಿ, ನಾವು ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ. ಈ ಬಗ್ಗೆ ನಮಗೆ ಹಲವು ಪಂಡಿತರೇ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಭಾಗದ ಅನೇಕರು ಪ್ರಾರ್ಥನೆಯಿಂದ ಕೊರೊನಾ ನಿರ್ಮೂಲನ ಆಗುತ್ತದೆ ಎಂದೇ ನಂಬಿಕೊಂಡಿದ್ದಾರೆ. ಅಷ್ಟೇ ಅಲ್ಲ, ಕೊರೊನಾ ಮಾತೆ ನಮ್ಮನ್ನು ಆಶೀರ್ವದಿಸಿ, ಖಂಡಿತ ಈ ಗ್ರಾಮ, ಜಗತ್ತಿನಿಂದ ದೂರವಾಗುತ್ತಾಳೆ ಎಂದು ಇನ್ನೊಬ್ಬ ಮಹಿಳೆ ಈಶ್ವರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಮಾನಸಿಕ ಅಸ್ವಸ್ಥರನ್ನು ಉಪಚರಿಸಿದ ಪೊಲೀಸರು; ಖಾಕಿ ಮಾನವಿಯತೆಗೆ ಸಾರ್ವಜನಿಕರಿಂದ ಮೆಚ್ಚುಗೆ

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ