ವೈರಲ್ ವೀಡಿಯೋ: ಬಸ್ಸಿನಲ್ಲಿ ಬೀಡಿ ಕಟ್ಟುತ್ತಾ ಉಚಿತ ಪ್ರಯಾಣ ಮಾಡಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ

Viral Video: ಈ ವೈರಲ್ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ತಮ್ಮ ಅಭಿಪ್ರಾಯವನ್ನು ಕಾಮೆಂಟ್ ರೂಪದಲ್ಲಿ ಟ್ವೀಟ್ ಮಾಡುತ್ತಿದ್ದಾರೆ. ಆಡುತ್ತಾ ಹಾಡುತ್ತಾ ದುಡಿದರೆ ಸುಸ್ತು ನಿವಾರಣೆಯಾಗುತ್ತದೆ ಎಂದು ಕೆಲವರು ತಮಾಷೆಯ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

ವೈರಲ್ ವೀಡಿಯೋ: ಬಸ್ಸಿನಲ್ಲಿ ಬೀಡಿ ಕಟ್ಟುತ್ತಾ ಉಚಿತ ಪ್ರಯಾಣ ಮಾಡಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ
ಉಚಿತ ಬಸ್ಸಿನಲ್ಲಿ ಸುತ್ತುತ್ತಾ ಬೀಡಿ ಸುತ್ತಿದ ಮಹಿಳೆಯರು! ಸರಕಾರವನ್ನು ಪ್ರಶ್ನಿಸತೊಡಗಿದ ಜನ
Follow us
ಸಾಧು ಶ್ರೀನಾಥ್​
|

Updated on:Jan 23, 2024 | 2:04 PM

ಹೈದರಾಬಾದ್, ಜನವರಿ 23: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಆದರೆ ಮಹಿಳೆಯರು ಈ ಸೌಲಭ್ಯವನ್ನು ಅತಿಯಾಗಿ ಬಳಸಿಕೊಂಡು ಹೊಸ ಟ್ರೆಂಡ್ ಸೃಷ್ಟಿಸಿದ್ದಾರೆ. ಉಚಿತ ಪ್ರಯಾಣದ ವೇಳೆ ಹಲವು ಬಾರಿ ಬಸ್ಸುಗಳಲ್ಲಿ ಪರಸ್ಪರ ಥಳಿಸಿಕೊಂಡಿರುವ ನಿದರ್ಶನಗಳೂ ಇವೆ. ಹೀಗೆ ಸುದ್ದಿಯಾಗಿದ್ದ TSRTC ಉಚಿತ ಬಸ್ ಪ್ರಯಾಣ ಇದೀಗ ಮಹಿಳೆಯರಿಬ್ಬರು ಮಾಡಿರುವ ಕೆಲಸದಿಂದ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸುಮ್ಮನೆ ಕುಳಿತುಕೊಳ್ಳುವುದು ಏಕೆಂದು ತಮ್ಮ ಕೈಲಾದ ಕೆಲಸವನ್ನು ಸಾಂಗೋಪಾಂಗವಾಗಿ ಮಾಡಿದ್ದಾರೆ. ಘಟನೆಯ ವಿಡಿಯೋ ತೆಗೆದ ಯುವಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ನೆಟ್ಟಿಗರಲ್ಲಿ ಅಚ್ಚರಿ ಮೂಡಿಸಿದೆ. ಘಟನೆ ಯಾವ ಡಿಪೋದಲ್ಲಿ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಈ ವೀಡಿಯೊವನ್ನು ಪೋಸ್ಟ್ ಮಾಡುವ ಮೊದಲು ‘ಹೇ ರೇವಂತ್ ರೆಡ್ಡಿ, ಹೇ ಉತ್ತಮ್ ಕುಮಾರ್ ರೆಡ್ಡಿ, ಯೇ ಕ್ಯಾ ಹುವಾ! ಮನೆಯಲ್ಲಿ ಕುಳಿತು ಒಬ್ಬರೇ ಬೀಡಿ ಕಟ್ಟಿದರೆ ಬೇಜಾರಾಗುತ್ತದೆ ಎಂದು ಬಸ್ ಗಳಲ್ಲೂ ಹೀಗೆ ಕಾಯಕದಲ್ಲಿ ನಿರತರಾಗಿದ್ದಾರೆ ನೋಡಿ ಆನಂದಿಸಿ ಎಂದಿದ್ದಾರೆ.

ಈ ವಿಡಿಯೋ ಹಾಕಿದವರ ವಿರುದ್ಧ ಕೆಲವರು ಟೀಕೆಯನ್ನೂ ಮಾಡಿದ್ದಾರೆ. ಹಾಯ್ ಬಿಚ್ಚಗಾಡು! ಅವರಿಗೆ ಸೀಟು ಸಿಕ್ಕರೆ ಉಚಿತ ಬಸ್ ಯೋಜನೆ ಯಶಸ್ವಿಯಾಗಿದೆ ಎಂದರ್ಥ. ಅವರು ಬೇರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ಅವರು ಏನನ್ನಾದರೂ ಮಾಡಿಕೊಳ್ಳಲಿ, ನಿನಗೇನು?ಇಷ್ಟು ಚೀಪಾಗಿ ಅವರ ಅನುಮತಿಯಿಲ್ಲದೆ ಆ ಮಹಿಳೆಯರ ವೀಡಿಯೊಗಳನ್ನು ತೆಗೆಯುವುದು ಅಪರಾಧವಲ್ಲವೆ ಎಂದೂ ಪ್ರಶ್ನಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ಸದ್ಯಕ್ಕೆ ಸರ್ಕಾರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಉಚಿತ ಬಸ್‌ಗಳಲ್ಲಿ ಸಾಕಷ್ಟು ಅಹಿತಕರ ಘಟನೆಗಳು ಮತ್ತು ಆಘಾತಕಾರಿ ಘಟನೆಗಳನ್ನು ನಾವು ಈಗಾಗಲೇ ನೋಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಏನೆಲ್ಲಾ ಬೆಳವಣಿಗೆಗಳು ಸೃಷ್ಟಿಯಾಗುತ್ತವೋ ಎಂದು ಜನ ಮಾತನಾಡುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Tue, 23 January 24

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ