AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆನ್ನೆಗೆ ಹೊಡೆದು, ಅಸಭ್ಯ ವರ್ತನೆ’; ಸಿಜೆಪಿ ರ‍್ಯಾಲಿ ವೇಳೆ ಸಿಆರ್‌ಪಿಎಫ್ ಕಾನ್​ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್

ದೆಹಲಿಯ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದ ಬಳಿ ನಡೆದ ಪ್ರತಿಭಟನೆ ವೇಳೆ ಮಹಿಳಾ ಸಿಆರ್‌ಪಿಎಫ್ ಕಾನ್​ಸ್ಟೆಬಲ್ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ ದೃಶ್ಯದ ವಿಡಿಯೋವನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಯೂಟ್ಯೂಬರ್ ಸೋಗಿನಲ್ಲಿ ಬಂದಿದ್ದ ಮಹಿಳೆ ಕರ್ತವ್ಯದಲ್ಲಿದ್ದ ಮಹಿಳಾ ಸಿಆರ್‌ಪಿಎಫ್ ಕಾನ್​ಸ್ಟೆಬಲ್‌ಗೆ ಕಪಾಳಮೋಕ್ಷ ಮಾಡಿದ್ದಾಳೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸಿಜೆಪಿ ಆಯೋಜಿಸಿದ್ದ 'ಲೆಹ್ರಾ ದೋ ತಿರಂಗ' ಪ್ರತಿಭಟನೆಯ ವೇಳೆ ಈ ಘಟನೆ ನಡೆದಿದ್ದು, ಪೊಲೀಸರು ಮತ್ತು ಅರೆಸೇನಾ ಪಡೆಗಳ ಮೇಲೆ ಹಲ್ಲೆ ನಡೆಸಿದ ದೃಶ್ಯಾವಳಿಗಳನ್ನು ದೆಹಲಿ ಪೊಲೀಸರು ಸಿಸಿಟಿವಿ ಮೂಲಕ ಪರಿಶೀಲಿಸುತ್ತಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ಕೆನ್ನೆಗೆ ಹೊಡೆದು, ಅಸಭ್ಯ ವರ್ತನೆ’; ಸಿಜೆಪಿ ರ‍್ಯಾಲಿ ವೇಳೆ ಸಿಆರ್‌ಪಿಎಫ್ ಕಾನ್​ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್
ಸಿಆರ್‌ಪಿಎಫ್Image Credit source: PTI
ಸುಷ್ಮಾ ಚಕ್ರೆ
|

Updated on: Oct 17, 2026 | 4:22 PM

Share

ನವದೆಹಲಿ, ಅಕ್ಟೋಬರ್ 17: ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ವತಿಯಿಂದ ಇಂದು (ಅಕ್ಟೋಬರ್ 16) ಸಂಜೆ ಪಾಲಿಕಾ ಬಜಾರ್ ಬಳಿ ಆಯೋಜಿಸಲಾಗಿದ್ದ ‘ಲೆಹ್ರಾ ದೋ ತಿರಂಗ’ ಪ್ರತಿಭಟನಾ ರ‍್ಯಾಲಿ ವೇಳೆ ಪೊಲೀಸರ ಮೇಲೆ ನಡೆದಿದೆ ಎನ್ನಲಾದ ಹಲ್ಲೆಯ ದೃಶ್ಯಗಳಿರುವ ವಿಡಿಯೋವನ್ನು ದೆಹಲಿ ಪೊಲೀಸರು ಇಂದು ಬಿಡುಗಡೆ ಮಾಡಿದ್ದಾರೆ. ದೆಹಲಿಯ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 6ರ ಬಳಿ ಯೂಟ್ಯೂಬರ್ ಸೋಗಿನಲ್ಲಿ ಬಂದಿದ್ದ ಮಹಿಳೆಯೊಬ್ಬಳು ಸಿಆರ್‌ಪಿಎಫ್ ಕಾನ್​ಸ್ಟೆಬಲ್ ಗೆ ಕಪಾಳಮೋಕ್ಷ ಮಾಡಿದ್ದಾಳೆ.

ಪ್ರತಿಭಟನೆಯ ಮರೆಯಲ್ಲಿ ಹಲವು ಪೊಲೀಸ್ ಸಿಬ್ಬಂದಿ ಹಾಗೂ ಅರೆಸೇನಾ ಪಡೆಗಳನ್ನು ಗುರಿಯಾಗಿಸಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವಿಧ ಕ್ಯಾಮೆರಾಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಈ ಹಲ್ಲೆಯಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರು ಮತ್ತು ಯೂಟ್ಯೂಬರ್‌ಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಸಿಜೆಪಿ ಪ್ರತಿಭಟನೆಯ ಹಿಂದೆ ಎಲಾನ್ ಮಸ್ಕ್ ಕೈವಾಡ’; ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಗಂಭೀರ ಆರೋಪ

ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶೋಕ್ ರಾಂಕಾ ಅವರ ಅಕ್ರಮ ಬಂಧನ ಖಂಡಿಸಿ, ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ನೇತೃತ್ವದಲ್ಲಿ ಅಕ್ಟೋಬರ್ 16ರಂದು ಸಂಜೆ 5 ಗಂಟೆಗೆ ಕನ್ನಾಟ್ ಪ್ಲೇಸ್‌ನಲ್ಲಿ ‘ಲೆಹ್ರಾ ದೋ ತಿರಂಗ’ ರ‍್ಯಾಲಿಗೆ ಕರೆ ನೀಡಲಾಗಿತ್ತು. ಪ್ರತಿಭಟನಾ ಸ್ಥಳವಾಗಿ ರದ್ದುಪಡಿಸಲಾಗಿದ್ದ ಜಂತರ್ ಮಂತರ್ ಪ್ರದೇಶಕ್ಕೆ ಅತಿಕ್ರಮ ಪ್ರವೇಶಕ್ಕೆ ಯತ್ನಿಸಿದ ಆರೋಪದ ಮೇಲೆ ಸೌರವ್ ದಾಸ್ ಮತ್ತು ರಾಂಕಾ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ಬಿಗುವಿನ ವಾತಾವರಣ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ:

ವಿವಾದಾತ್ಮಕ ಎಸ್​ಐಆರ್ ಪ್ರಕ್ರಿಯೆಯನ್ನು ಹಿಂಪಡೆಯುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಮತ್ತು ಇಂಡಿಯ ಒಕ್ಕೂಟವು ಪ್ರತಿಭಟನೆಗಳನ್ನು ನಡೆಸುತ್ತಿವೆ. ಕನ್ನಾಟ್ ಪ್ಲೇಸ್‌ನಲ್ಲಿ ನಿಗದಿಯಾಗಿದ್ದ ರ‍್ಯಾಲಿಗೂ ಮುನ್ನವೇ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳ ಕಾರಬಾರು
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳ ಕಾರಬಾರು
ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು
ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು
ರಾಯಚೂರಿನಲ್ಲಿ ಈರುಳ್ಳಿ ತುಂಬಿದ ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು
ರಾಯಚೂರಿನಲ್ಲಿ ಈರುಳ್ಳಿ ತುಂಬಿದ ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು
ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ
ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ
ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ
ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ
ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ