ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಂಪುಟ ಅಸ್ತು, ಐತಿಹಾಸಿಕ ನಿರ್ಣಯ ಕೈಗೊಂಡ ಮೋದಿ ಸರ್ಕಾರ

Women Reservation Bill: ಇಂದಿನಿಂದ ನೂತನ ಸಂಸತ್ ಭವನದಲ್ಲಿ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನವೇ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ಮಹಿಳಾ ಮಣಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಗುಡ್‌ನ್ಯೂಸ್ ನೀಡಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಂಪುಟ ಅಸ್ತು, ಐತಿಹಾಸಿಕ ನಿರ್ಣಯ ಕೈಗೊಂಡ ಮೋದಿ ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 19, 2023 | 12:12 PM

ನವದೆಹಲಿ, (ಸೆಪ್ಟೆಂಬರ್ 19): ಹಳೆ ಸಂಸತ್ ಭವನದಲ್ಲಿ ನಿನ್ನೆ ನಡೆದ ಕಟ್ಟ ಕಡೆಯ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Nagendra Modi) ಭಾವನಾತ್ಮಕ ಭಾಷಣ ಮಾಡಿದ್ರು. ಈ ಕಟ್ಟಡಕ್ಕೆ ವಿದಾಯ ಹೇಳುವುದು ಒಂದು ಭಾವನಾತ್ಮಕ ಕ್ಷಣ. ಅನೇಕ ಕಹಿ-ಸಿಹಿ ನೆನಪುಗಳು ಇದರೊಂದಿಗೆ ಸೇರಿಕೊಂಡಿವೆ ಅಂತೇಳಿದ್ದಾರೆ. ಇದೀಗ ಹೊಸ ಸಂಸತ್ ಭವನದಲ್ಲಿ ಅಧಿವೇಶನ ಆರಂಭಿಸುವ ಹೊತ್ತಲ್ಲೇ ರಾಜಕೀಯದಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ಹೌದು… ನಿನ್ನೆ(ಸೆಪ್ಟೆಂಬರ್ 19) ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ(Women’s Reservation Bill) ಅನುಮೋದನೆ ನೀಡಲಾಗಿದೆ.

ಈ ವಿಷಯವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್, ಮಹಿಳಾ ಮೀಸಲಾತಿಯ ಬೇಡಿಕೆಯನ್ನ ಈಡೇರಿಸುವ ನೈತಿಕ ಧೈರ್ಯ ಮೋದಿ ಸರ್ಕಾರಕ್ಕೆ ಮಾತ್ರ ಇತ್ತು, ಇದು ಸಂಪುಟದ ಅನುಮೋದನೆಯಿಂದ ಸಾಬೀತಾಗಿದೆ. ನರೇಂದ್ರ ಮೋದಿ ಜೀ ಮತ್ತು ಮೋದಿ ಸರ್ಕಾರಕ್ಕೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ವಿಶೇಷ ಅಧಿವೇಶನದಲ್ಲಿ ಇಂದೇ ಮಸೂದೆ ಮಂಡನೆ ಸಾಧ್ಯತೆ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಸೂದೆಯನ್ನು ಇಂದೇ ಮಂಡಿಸುವ ಸಾಧ್ಯತೆಯಿದೆ. ನೂತನ ಸಂಸತ್ ಭವನ ಸೆಂಟ್ರಲ್ ವಿಸ್ತಾದಲ್ಲಿ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಸೇರಿದಂತೆ ಯಾವುದೇ ಪ್ರತಿಪಕ್ಷಗಳು ವಿರೋಧಿಸುವ ಧೈರ್ಯ ಮಾಡುವುದಿಲ್ಲ. ಹೀಗಾಗಿ ಸಂಸತ್ತಿನ ಉಭಯ ಸದನಗಳಲ್ಲಿ ಮಸೂದೆಗೆ ಅಂಗೀಕಾರ ದೊರಕುವುದು ಬಹುತೇಕ ನಿಶ್ಚಿತವಾಗಿದೆ.. ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರದ ಬಳಿಕ ರಾಷ್ಟ್ರಪತಿ ಅಂಕಿತ ಹಾಕುವುದರಿಂದ ಮಹಿಳಾ ಮೀಸಲಾತಿ ಕಾನೂನು ರೂಪ ಪಡೆಯಲಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಯಲ್ಲಿದೆ. ಇದೀಗ ವಿಧಾನಸಭೆ ಲೋಕಸಭೆ ಚುನಾವಣೆಯಲ್ಲಿ ಮಹಿಳಾ ಮೀಸಲಾತಿ ಜಾರಿಯಾಗಿದ್ದೇ ಆದಲ್ಲಿ ಇನ್ಮುಂದೆ ರಾಜಕೀಯದಲ್ಲಿ ಮಹಿಳೆಯರ ದರ್ಬಾರ್ ದೊಡ್ಡ ಪ್ರಮಾಣದಲ್ಲಿ ಇರಲಿದೆ. ಪ್ರಸ್ತುತ ಲೋಕಸಭೆಯಲ್ಲಿ 543 ಸ್ಥಾನಗಳ ಪೈಕಿ 78ಮಂದಿ ಮಹಿಳಾ ಸದಸ್ಯೆಯರಿದ್ದಾರೆ. ಒಂದು ವೇಳೆ ಶೇ. 33ರಷ್ಟು ಮಹಿಳಾ ಮೀಸಲಾತಿ ಜಾರಿಯಾದ್ರೆ, ಲೋಕಸಭೆಯಲ್ಲಿ ಮಹಿಳಾ ಸದಸ್ಯರ ಸಂಖ್ಯೆ ಅಂದಾಜು 178ಕ್ಕೆ ಹೆಚ್ಚಳವಾಗಲಿದೆ. ಇನ್ನು ಕರ್ನಾಟಕ ವಿಧಾಸಭೆಯಲ್ಲಿ ಒಟ್ಟು 224 ಸ್ಥಾನಗಳ ಪೈಕಿ ಸದ್ಯ ಕೇವಲ 10ಮಂದಿ ಮಹಿಳಾ ಶಾಸಕಿಯರಿದ್ದಾರೆ. ಶೇ. 33ರಷ್ಟು ಮೀಸಲಾತಿ ಜಾರಿಯಾದ್ರೆ, ಕರ್ನಾಟಕ ವಿಧಾನಸಭೆಯಲ್ಲಿ ಮಹಿಳಾ ಶಾಸಕಿಯರ ಸಂಖ್ಯೆ ಅಂದಾಜು 73ಕ್ಕೆ ಏರಿಕೆಯಾಗಲಿದೆ.

ಮಹಿಳಾ ಮೀಸಲಾತಿ ಮಸೂದೆ ನಮ್ಮ ಬಹುಕಾಲದ ಬೇಡಿಕೆ ಎಂದ ಕಾಂಗ್ರೆಸ್

ಶೇ. 33ರಷ್ಟು ಮಹಿಳಾ ಮೀಸಲಾತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರೋದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. ಈ ಮಸೂದೆಯು ನಮ್ಮ ಪಕ್ಷದ ಬಹುಕಾಲದ ಬೇಡಿಕೆಯಾಗಿದೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪ್ರಸ್ತುತ ವಿಶೇಷ ಅಧಿವೇಶನದಲ್ಲಿ ಮಸೂದೆ ಮಂಡಿಸುವಂತೆ ಆಗ್ರಹಿಸಿದೆ. ಸಂಪುಟದ ನಿರ್ಧಾರವನ್ನ ಸ್ವಾಗತಿಸಿರುವ ಕೈ ನಾಯಕ ಜೈರಾಮ್ ರಮೇಶ್, ವಿಶೇಷ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆಯಲ್ಲಿ ಈ ಬಗ್ಗೆ ಚೆನ್ನಾಗಿ ಚರ್ಚಿಸಬಹುದಿತ್ತು. ಗೌಪ್ಯತೆ ಕಾಪಾಡುವ ಬದಲು ಒಮ್ಮತ ಮೂಡಿಸಬಹುದಿತ್ತು ಅಂತೇಳಿದ್ದಾರೆ.

ಮಹಿಳೆಯರ ಮೀಸಲಾತಿ ವಿಧೇಯಕಕ್ಕೆ ಕೇಂದ್ರ ಸಂಪುಟ ಸಭೆ ಅಸ್ತು ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ ಕಾಂಗ್ರೆಸ್ ನಾಯಕ ಜೈರಾಮ್​ ರಮೇಶ್ ಟ್ವೀಟ್ ಮಾಡಿದ್ದು, ಜೊತೆಗೆ 2018ರಲ್ಲಿ ಮೋದಿಗೆ ರಾಹುಲ್ ಗಾಂಧಿ ಬರೆದಿದ್ದ ಪತ್ರ ಪೋಸ್ಟ್​ ಮಾಡಿದ್ದಾರೆ. ರಾಹುಲ್​ ಗಾಂಧಿ ಮಹಿಳಾ ಮೀಸಲಾತಿ ಕುರಿತು ಈ ಹಿಂದೆ ಪತ್ರ ಬರೆದಿದ್ದರು.

ನೂತನ ಸಂಸತ್‌ನಲ್ಲಿ ಭಾಷಣಕ್ಕೆ ಮನಮೋಹನ್‌ ಸಿಂಗ್‌ಗೆ ಆಹ್ವಾನ

ನೂತನ ಸಂಸತ್‌ಭವನದಲ್ಲಿ ಇಂದು ಚೊಚ್ಚಲ ಅಧಿವೇಶನ ನಡೆಯಲಿದ್ದು, ಸದನದಲ್ಲಿ ಮಾತನಾಡಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರಿಗೆ ಆಹ್ವಾನ ನೀಡಲಾಗಿದೆ. ಅದೇ ರೀತಿ ರಾಜ್ಯಸಭೆಯ ಅತ್ಯಂತ ಹಿರಿಯ ಸದಸ್ಯ ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್‌ರಿಗೂ ಉಭಯ ಸದನ ಉದ್ದೇಶಿಸಿ ಭಾಷಣ ಮಾಡಲು ಆಹ್ವಾನ ನೀಡಲಾಗಿದೆ. ಅದೇನೆ ಇರಲಿ ಲೋಕಸಭೆ, ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಕೇಂದ್ರ ನಿರ್ಣಯ ಐತಿಹಾಸಿಕ ಕ್ರಮವಾಗಿದೆ.

Published On - 6:57 am, Tue, 19 September 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್