ಮೋದಿ ಇದ್ದರೆ ಎಲ್ಲವೂ ಸಾಧ್ಯ: ಮಹಿಳಾ ಮೀಸಲಾತಿ ಮಸೂದೆಯನ್ನು ಕ್ರಾಂತಿಕಾರಿ ಮಸೂದೆ ಎಂದು ಬಣ್ಣಿಸಿದ ಸಚಿವ ಕಿಶನ್ ರೆಡ್ಡಿ

Women's Reservation Bill: ಮೋದಿ ಇದ್ದರೆ ಎಲ್ಲವೂ ಸಾಧ್ಯ ಎಂದು ಕೇಂದ್ರ ಸಚಿವ ಜಿ ಕಿಶನ್​ ರೆಡ್ಡಿ(G Kishan Reddy) ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಐತಿಹಾಸಿಕ ಬೆಳವಣಿಗೆಯಾಗಿದ್ದು, ಇಂದು ಅಂಗೀಕಾರಗೊಂಡಿರುವ ಕ್ರಾಂತಿಕಾರಿ ಮಸೂದೆಯಾಗಿದೆ ಎಂದು ಸಚಿವ ಜಿ ಕಿಶನ್ ರೆಡ್ಡಿ ಬಣ್ಣಿಸಿದ್ದಾರೆ.

ಮೋದಿ ಇದ್ದರೆ ಎಲ್ಲವೂ ಸಾಧ್ಯ: ಮಹಿಳಾ ಮೀಸಲಾತಿ ಮಸೂದೆಯನ್ನು ಕ್ರಾಂತಿಕಾರಿ ಮಸೂದೆ ಎಂದು ಬಣ್ಣಿಸಿದ ಸಚಿವ ಕಿಶನ್ ರೆಡ್ಡಿ
ಕಿಶನ್ ರೆಡ್ಡಿ
Follow us
ನಯನಾ ರಾಜೀವ್
|

Updated on: Sep 21, 2023 | 12:43 PM

ಮೋದಿ ಇದ್ದರೆ ಎಲ್ಲವೂ ಸಾಧ್ಯ ಎಂದು ಕೇಂದ್ರ ಸಚಿವ ಜಿ ಕಿಶನ್​ ರೆಡ್ಡಿ(G Kishan Reddy) ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಐತಿಹಾಸಿಕ ಬೆಳವಣಿಗೆಯಾಗಿದ್ದು, ಇಂದು ಅಂಗೀಕಾರಗೊಂಡಿರುವ ಕ್ರಾಂತಿಕಾರಿ ಮಸೂದೆಯಾಗಿದೆ ಎಂದು ಸಚಿವ ಜಿ ಕಿಶನ್ ರೆಡ್ಡಿ ಬಣ್ಣಿಸಿದ್ದಾರೆ.

ಕಳೆದ 75 ವರ್ಷಗಳಲ್ಲಿ, ವಿವಿಧ ಸ್ಥಳಗಳಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ ಮತ್ತು ಸಂಸತ್ತಿನಲ್ಲಿ ಹಲವು ಬಾರಿ ಮಂಡಿಸಲಾಗಿದೆ. ರಾಜ್ಯಸಭೆಯೂ ಇದನ್ನು ಒಮ್ಮೆ ಅಂಗೀಕರಿಸಿತು, ಆದರೆ ಕಾಂಗ್ರೆಸ್ ಪಕ್ಷ ಮತ್ತು ಅದರ ರಾಜಕೀಯದ ಕಾರಣದಿಂದಾಗಿ ಮಸೂದೆಯನ್ನು ಅಂಗೀಕರಿಸಲಿಲ್ಲ ಎಂದರು. ಇಂದು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಮಹಿಳೆಯರಿಗೆ ಉಡುಗೊರೆ ನೀಡಲಾಗಿದೆ. ಅದಕ್ಕಾಗಿ ನಾನು ದೇಶದ ಮಹಿಳೆಯರಿಗೆ ಶುಭ ಹಾರೈಸುತ್ತೇನೆ ಎಂದು ಹೇಳಿದರು.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಎಲ್ಲವೂ ಸಾಧ್ಯ. ಇಂದು ರಾಜ್ಯಸಭೆಯಲ್ಲೂ ಈ ಮಸೂದೆ ಅಂಗೀಕಾರವಾಗಲಿದೆ, ನನಗೆ ಸಂಪೂರ್ಣ ಭರವಸೆ ಇದೆ ಎಂದು ಹೇಳಿದರು. 8 ಗಂಟೆಗಳ ಕಾಲ ನಡೆದ ಸುದೀರ್ಘ ಚರ್ಚೆಯ ನಂತರ, ಈ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ (ಸೆಪ್ಟೆಂಬರ್ 20) ಅಂಗೀಕರಿಸಲಾಯಿತು. ಈ ಮಸೂದೆಯು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಒದಗಿಸುತ್ತದೆ. ಬುಧವಾರ ಮಸೂದೆಯ ಪರವಾಗಿ 454 ಮತಗಳು ಮತ್ತು ವಿರುದ್ಧ 2 ಮತಗಳು ಚಲಾವಣೆಯಾದವು. ಎಐಎಂಐಎಂ ಸಂಸದರಾದ ಅಸಾದುದ್ದೀನ್ ಓವೈಸಿ-ಇಮ್ತಿಯಾಜ್ ಜಲೀಲ್ ಈ ಮಸೂದೆಯನ್ನು ವಿರೋಧಿಸಿದ್ದರು.

ಮತ್ತಷ್ಟು ಓದಿ: Women’s Reservation Bill: ಇಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲದ ಅಗತ್ಯವಿತ್ತು. ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ನಾರಿ ಶಂಕ್ತಿವಂದನ್ ವಿಧೇಯಕವನ್ನು ಕೇಂದ್ರ ಸರ್ಕಾರ ಇಂದು ರಾಜ್ಯಸಭೆಯಲ್ಲಿ ಮಂಡಿಸಲಿದೆ. ಈ ಮಸೂದೆಯ ಮೂಲಕ ಸಂವಿಧಾನದ 330 ಹಾಗೂ 332ನೇ ವಿಧಿಗಳಿಗೆ ತಿದ್ದುಪಡಿ ತರಲಾಗುತ್ತಿದ್ದು, ಈ ಮೂಲಕ ಲೋಕಸಭೆಯ 543 ಸ್ಥಾನಗಳ ಪೈಕಿ 181 ಸ್ಥಾನಗಳನ್ನು ಮತ್ತು ರಾಜ್ಯ ವಿಧಾನಸಭೆಗಳಲ್ಲಿ 4,109 ಸ್ಥಾನಗಳ ಪೈಕಿ 1370 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ