ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ: ಪ್ರಹ್ಲಾದ್​ ಜೋಶಿ

ಪ್ರಧಾನಿ ಮೋದಿ ಅವರ ಧೃಡ ನಿಶ್ಚಯ, ರಾಜಕೀಯ ಇಚ್ಛಾಶಕ್ತಿ ಕಾರಣದಿಂದ ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಎರಡು ವೋಟ್ ವಿರೋಧದಿಂದ, ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕಾರವಾಗಿದೆ. ಇದು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಬಣ್ಣಿಸಿದರು.

ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ: ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 22, 2023 | 12:21 PM

ನವದೆಹಲಿ ಸೆ.22: ನಾರಿ ಶಕ್ತಿ ವಂದನ್ (ಮಹಿಳಾ ಮೀಸಲಾತಿ) (Women’s Reservation Bill) ಮಸೂದೆ ಸಂಸತ್​ನಲ್ಲಿ ಅಂಗಿಕಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದೂರದರ್ಶಿ ನಾಯಕತ್ವದಲ್ಲಿ, ಉದಾತ್ತ ಚಿಂತನೆಮಹಿಳಾ ಮೀಸಲಾತಿಯಲ್ಲಿ ಮೂಡಿ ಬಂದ ಕಲ್ಪನೆ ಮಹಿಳಾ ಮೀಸಲಾತಿ. ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳ ಶಾಸನಸಭೆಗಳಲ್ಲೇ ಮಹಿಳಾ ಮೀಸಲಾತಿ ‌ಇಲ್ಲ. ಭಾರತದಲ್ಲಿ ಮೋದಿ ಅವರ ನಾಯಕತ್ವದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬಂದಿದೆ. ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ. ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಹೇಳಿದರು.

1980-90 ರ ದಶಕದಿಂದ ಮಹಿಳಾ ಮೀಸಲಾತಿ ಕೂಗಿತ್ತು. ಹಲವು ಸರ್ಕಾರಗಳು ಪ್ರಯತ್ನಪಟ್ಟವು ಆದರೆ ಸಾಧ್ಯವಾಗಲಿಲ್ಲ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಹಳ ಪ್ರಯತ್ನ ಪಟ್ಟರು, ಸಂಪೂರ್ಣ ಬಹುಮತ ಇರದ ಕಾರಣ ಅವರ ಪ್ರಯತ್ನಕ್ಕೆ ಜಯ ಸಿಗಲಿಲ್ಲ. ಮುಂದೆ ಯುಪಿಎ ಸರ್ಕಾರ ಇದನ್ನು ವೋಟ್ ಬ್ಯಾಂಕ್ ರೀತಿ ನೋಡಿ, ಪ್ರಮಾಣಿಕ‌ ಪ್ರಯತ್ನ ಮಾಡಲಿಲ್ಲ ಎಂದು ವಾಗ್ದಾಳಿ ಮಾಡಿದರು.

ಆದರೆ ಪ್ರಧಾನಿ ಮೋದಿ ಅವರ ಧೃಡ ನಿಶ್ಚಯ, ರಾಜಕೀಯ ಇಚ್ಛಾಶಕ್ತಿ ಕಾರಣದಿಂದ ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಎರಡು ವೋಟ್ ವಿರೋಧದಿಂದ, ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕಾರವಾಗಿದೆ. ಇದು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ಮಹಿಳೆಯರ ಪರವಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು. ದೇಶ ಮಹಿಳೆಯರಿಗೆ ಅಭಿನಂದನೆ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಒಲ್ಲಿ ಕ್ಲಿಕ್​ ಮಾಡಿ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ