ಗಂಗಾದಲ್ಲಿ ಪದಕ ಬಿಸಾಡಲು ಬರುವ ಕುಸ್ತಿಪಟುಗಳನ್ನು ನಾವು ತಡೆಯುವುದಿಲ್ಲ: ಹರಿದ್ವಾರ ಪೊಲೀಸರು

ಜನರು ಚಿನ್ನ, ಬೆಳ್ಳಿ ಮತ್ತು ಚಿತಾಭಸ್ಮವನ್ನು ಗಂಗಾದಲ್ಲಿ ಬಿಡುತ್ತಾರೆ. ಕುಸ್ತಿಪಟುಗಳು ಅವರು ಬಯಸಿದರೆ ತಮ್ಮ ಪದಕಗಳನ್ನು ಬಿಡಬಹುದು. ಗಂಗಾ ದಸರಾ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಸುಮಾರು 15 ಲಕ್ಷ ಯಾತ್ರಿಕರು ಹರಿದ್ವಾರಕ್ಕೆ ಭೇಟಿ ನೀಡುತ್ತಾರೆ. ಕುಸ್ತಿಪಟುಗಳಿಗೂ ಸ್ವಾಗತವಿದೆ ಎಂದು ಸಿಂಗ್ ಹೇಳಿದರು.

ಗಂಗಾದಲ್ಲಿ ಪದಕ ಬಿಸಾಡಲು ಬರುವ ಕುಸ್ತಿಪಟುಗಳನ್ನು ನಾವು ತಡೆಯುವುದಿಲ್ಲ: ಹರಿದ್ವಾರ ಪೊಲೀಸರು
ಕುಸ್ತಿಪಟುಗಳ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on:May 30, 2023 | 5:15 PM

ಡೆಹ್ರಾಡೂನ್/ಹರಿದ್ವಾರ: ಭಾರತದ ಕುಸ್ತಿ ಫೆಡರೇಷನ್ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ದೇಶದ ಅಗ್ರ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ (Ganga) ಬಿಡುವುದಾಗಿ ಘೋಷಿಸಿದ ಗಂಟೆಗಳ ನಂತರ, ಹರಿದ್ವಾರ (Haridwar) ಪೊಲೀಸರು ನಾವು ಅವರನ್ನು ತಡೆಯುವುದಿಲ್ಲ ಎಂದು ಹೇಳಿದ್ದಾರೆ. ಜಿಲ್ಲೆಗೆ ಪ್ರವೇಶಿಸುವುದನ್ನು ತಡೆಯುವುದಾಗಲೀ,ಗಂಗಾದಲ್ಲಿ ಪದಕ ಬಿಡುವುದಕ್ಕೆ ತಡೆಯೊಡ್ಡುವುದಾಗಲೀ ನಾವು ಮಾಡಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕುಸ್ತಿಪಟುಗಳು ಏನು ಬೇಕಾದರೂ ಮಾಡಲು ಸ್ವತಂತ್ರರು. ಅವರು ತಮ್ಮ ಪದಕಗಳನ್ನು ಪವಿತ್ರ ಗಂಗೆಯಲ್ಲಿ ಬಿಸಾಡಲು ಬಂದರೆ ನಾವು ಅವರನ್ನು ತಡೆಯುವುದಿಲ್ಲ. ನನ್ನ ಹಿರಿಯ ಅಧಿಕಾರಿಗಳಿಂದ ನಾನು ಅಂತಹ ಯಾವುದೇ ಸೂಚನೆಗಳನ್ನು ಸ್ವೀಕರಿಸಿಲ್ಲ ಎಂದು ಹರಿದ್ವಾರದ ಹಿರಿಯ ಪೊಲೀಸ್ ಅಧೀಕ್ಷಕ ಅಜಯ್ ಸಿಂಗ್ ಹೇಳಿದ್ದಾರೆ.

ಜನರು ಚಿನ್ನ, ಬೆಳ್ಳಿ ಮತ್ತು ಚಿತಾಭಸ್ಮವನ್ನು ಗಂಗಾದಲ್ಲಿ ಬಿಡುತ್ತಾರೆ. ಕುಸ್ತಿಪಟುಗಳು ಅವರು ಬಯಸಿದರೆ ತಮ್ಮ ಪದಕಗಳನ್ನು ಬಿಡಬಹುದು. ಗಂಗಾ ದಸರಾ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಸುಮಾರು 15 ಲಕ್ಷ ಯಾತ್ರಿಕರು ಹರಿದ್ವಾರಕ್ಕೆ ಭೇಟಿ ನೀಡುತ್ತಾರೆ. ಕುಸ್ತಿಪಟುಗಳಿಗೂ ಸ್ವಾಗತವಿದೆ ಎಂದು ಸಿಂಗ್ ಹೇಳಿದರು.

ಅಪ್ರಾಪ್ತ ವಯಸ್ಕ ಸೇರಿದಂತೆ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23 ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ, ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ಆರಂಭಿಸಿದಾಗ ಪೊಲೀಸರು ಅವರನ್ನು ಬಂಧಿಸಿದ್ದರು. ಪೊಲೀಸರು ಪ್ರತಿಭಟನಾ ಸ್ಥಳದಲ್ಲಿ ಟೆಂಟ್‌ಗಳನ್ನು ಬಲವಂತವಾಗಿ ಕೆಡವಿದ್ದು, ಗಲಭೆ ಮತ್ತು ಕಾನೂನುಬಾಹಿರ ಸಭೆಯ ಆರೋಪದ ಮೇಲೆ ಕುಸ್ತಿಪಟುಗಳ ಪ್ರತಿಭಟನೆಯ ಸಂಘಟಕರ ಮೇಲೆ ಕೇಸು ದಾಖಲಿಸಿದ್ದಾರೆ.

ಮಂಗಳವಾರ ಟ್ವಿಟರ್‌ನಲ್ಲಿ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ತಾವು ಹರಿದ್ವಾರಕ್ಕೆ ಹೋಗಿ ಸಂಜೆ 6 ಗಂಟೆಗೆ ತಮ್ಮ ಪದಕಗಳನ್ನು ಗಂಗಾದಲ್ಲಿ ಬಿಡಲಿದ್ದೇವೆ ಎಂದು ಹೇಳಿದ್ದಾರೆ.

ಈ ಪದಕಗಳು ನಮ್ಮ ಜೀವನ, ನಮ್ಮ ಆತ್ಮಗಳು. ಇಂದು ಅವರನ್ನು ಗಂಗೆಯಲ್ಲಿ ಬಿಟ್ಟ ನಂತರ ಬದುಕಲು ಯಾವುದೇ ಕಾರಣವಿಲ್ಲ. ಹಾಗಾಗಿ ಆ ಬಳಿಕ ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ ಎಂದು ಹೇಳಿಕೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Wrestlers protest: ತಾವು ಗೆದ್ದ ಪದಕಗಳನ್ನು ಗಂಗಾನದಿಯಲ್ಲಿ ಬಿಡಲು ತೀರ್ಮಾನಿಸಿದ ಕುಸ್ತಿಪಟುಗಳು

ಇಂದು ಹರಿದ್ವಾರಕ್ಕೆ ಕುಸ್ತಿಪಟುಗಳು ಬರುತ್ತಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದು ಗಂಗಾ ಸಭಾದ ಅಧ್ಯಕ್ಷ ನಿತಿನ್ ಗೌತಮ್ ಹೇಳಿದ್ದಾರೆ. ಲಕ್ಷ ಯಾತ್ರಿಕರು ಇಂದು ಹರಿದ್ವಾರದಲ್ಲಿದ್ದಾರೆ. ಗಂಗಾ ಸಪ್ತಮಿ ಆಚರಣೆಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ನಮ್ಮ ದೇಶದ ಅಗ್ರ ಕುಸ್ತಿಪಟುಗಳು ತಮ್ಮ ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗೆಯಲ್ಲಿ ಬಲವಂತವಾಗಿ ಬಿಸಾಡಬೇಕಾಗಿ ಬಂದಿರುವುದು ನಮ್ಮ ಪ್ರಜಾಪ್ರಭುತ್ವ ಮತ್ತು ಕ್ರೀಡಾ ಕ್ಷೇತ್ರಕ್ಕೆ ದುರದೃಷ್ಟಕರ ಸಂಗತಿ ಎಂದು ಹರಿದ್ವಾರದ ರಾಧೆ ಕ್ರಿಶನ್ ಆಶ್ರಮದ ಸತ್ಪಾಲ್ ಬ್ರಹ್ಮಚಾರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Tue, 30 May 23

10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ