AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಬಿಸಾಡಲೆತ್ನಿಸಿದ ವಕೀಲ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲರು ಕೋರ್ಟ್​​ನಲ್ಲಿಯೇ ಶೂ ಬಿಸಾಡಲು ಯತ್ನಿಸಿರುವ ಘಟನೆ ನಡೆದಿದೆ. ಪೊಲೀಸರು ತಕ್ಷಣ ಆರೋಪಿ ವಕೀಲರನ್ನು ವಶಕ್ಕೆ ಪಡೆದರು. ಆದರೆ ಮುಖ್ಯ ನ್ಯಾಯಮೂರ್ತಿ ಗವಾಯಿ ಶಾಂತರಾಗಿದ್ದರು ಮತ್ತು ಯಾವುದೇ ಅಡೆತಡೆಯಿಲ್ಲದೆ ವಿಚಾರಣೆಯನ್ನು ಮುಂದುವರೆಸಿದರು. ಸಿಜೆಐ ಮುಂದೆ ಪ್ರಕರಣಗಳ ಪ್ರಸ್ತಾಪದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಸುಪ್ರೀಂ ಕೋರ್ಟ್​ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಬಿಸಾಡಲೆತ್ನಿಸಿದ ವಕೀಲ
Cji Gavai
ಸುಷ್ಮಾ ಚಕ್ರೆ
|

Updated on:Oct 06, 2025 | 1:55 PM

Share

ನವದೆಹಲಿ, ಅಕ್ಟೋಬರ್ 6: ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವಾಗ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ (CJI Gavai) ಅವರ ಮೇಲೆ ತಮ್ಮ ಶೂ ಎಸೆಯಲು ಪ್ರಯತ್ನಿಸಿದ ಘಟನೆ ನಡೆಯಿತು. ಸಿಜೆಐ ಮುಂದೆ ಪ್ರಕರಣಗಳ ಪ್ರಸ್ತಾಪದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯ ಪ್ರವೇಶಿಸಿ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಕರೆದೊಯ್ದರು.

ಪೊಲೀಸರು ಅವರನ್ನು ಹೊರಗೆ ಕರೆದೊಯ್ಯುವಾಗ ವಕೀಲರು “ಸನಾತನ ಕಾ ಅಪ್ಮಾನ್ ನಹಿ ಸಹೇಂಗೆ (ಸನಾತನ ಸಂಸ್ಥೆಗೆ ಯಾವುದೇ ಅವಮಾನವಾದರೆ ನಾವು ಸಹಿಸುವುದಿಲ್ಲ)” ಎಂದು ಕೂಗಿದ್ದಾರೆ.

ಇದನ್ನೂ ಓದಿ: ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

ಇದಕ್ಕೆಲ್ಲ ಹೆದರುವುದಿಲ್ಲ:

ಆದರೆ, ಈ ಆಕಸ್ಮಿಕ ಘಟನೆಯಿಂದ ವಿಚಲಿತರಾಗದ ಸಿಜೆಐ ಗವಾಯಿ ಅವರು ಕೋರ್ಟ್​ನಲ್ಲಿ ಹಾಜರಿದ್ದ ವಕೀಲರಿಗೆ ದಿನದ ಕಲಾಪಗಳನ್ನು ಮುಂದುವರಿಸುವಂತೆ ಸೂಚಿಸಿದರು. “ಇದೆಲ್ಲದರಿಂದ ವಿಚಲಿತರಾಗಬೇಡಿ. ನಾವು ಇದಕ್ಕೆಲ್ಲ ವಿಚಲಿತರಾಗುವುದಿಲ್ಲ. ಇಂತಹ ಘಟನೆಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಅವರು ಹೇಳಿದರು. ಆ ವಕೀಲರನ್ನು ರಾಕೇಶ್ ಕಿಶೋರ್ ಎಂದು ಗುರುತಿಸಲಾಗಿದೆ. ಈ ಹಿಂದೆ ವಿಷ್ಣು ವಿಗ್ರಹದ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ ಸಿಜೆಐ ಗವಾಯಿ ನೀಡಿದ್ದ ಹೇಳಿಕೆಯನ್ನು ಉದ್ದೇಶಿಸಿ ಆ ವಕೀಲ ಈ ರೀತಿಯಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:47 pm, Mon, 6 October 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ