
ನವದೆಹಲಿ, ಅಕ್ಟೋಬರ್ 6: ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವಾಗ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ (CJI Gavai) ಅವರ ಮೇಲೆ ತಮ್ಮ ಶೂ ಎಸೆಯಲು ಪ್ರಯತ್ನಿಸಿದ ಘಟನೆ ನಡೆಯಿತು. ಸಿಜೆಐ ಮುಂದೆ ಪ್ರಕರಣಗಳ ಪ್ರಸ್ತಾಪದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯ ಪ್ರವೇಶಿಸಿ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಕರೆದೊಯ್ದರು.
ಪೊಲೀಸರು ಅವರನ್ನು ಹೊರಗೆ ಕರೆದೊಯ್ಯುವಾಗ ವಕೀಲರು “ಸನಾತನ ಕಾ ಅಪ್ಮಾನ್ ನಹಿ ಸಹೇಂಗೆ (ಸನಾತನ ಸಂಸ್ಥೆಗೆ ಯಾವುದೇ ಅವಮಾನವಾದರೆ ನಾವು ಸಹಿಸುವುದಿಲ್ಲ)” ಎಂದು ಕೂಗಿದ್ದಾರೆ.
ಇದನ್ನೂ ಓದಿ: ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ
ಇದಕ್ಕೆಲ್ಲ ಹೆದರುವುದಿಲ್ಲ:
ಆದರೆ, ಈ ಆಕಸ್ಮಿಕ ಘಟನೆಯಿಂದ ವಿಚಲಿತರಾಗದ ಸಿಜೆಐ ಗವಾಯಿ ಅವರು ಕೋರ್ಟ್‌ನಲ್ಲಿ ಹಾಜರಿದ್ದ ವಕೀಲರಿಗೆ ದಿನದ ಕಲಾಪಗಳನ್ನು ಮುಂದುವರಿಸುವಂತೆ ಸೂಚಿಸಿದರು. “ಇದೆಲ್ಲದರಿಂದ ವಿಚಲಿತರಾಗಬೇಡಿ. ನಾವು ಇದಕ್ಕೆಲ್ಲ ವಿಚಲಿತರಾಗುವುದಿಲ್ಲ. ಇಂತಹ ಘಟನೆಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಅವರು ಹೇಳಿದರು. ಆ ವಕೀಲರನ್ನು ರಾಕೇಶ್ ಕಿಶೋರ್ ಎಂದು ಗುರುತಿಸಲಾಗಿದೆ. ಈ ಹಿಂದೆ ವಿಷ್ಣು ವಿಗ್ರಹದ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ ಸಿಜೆಐ ಗವಾಯಿ ನೀಡಿದ್ದ ಹೇಳಿಕೆಯನ್ನು ಉದ್ದೇಶಿಸಿ ಆ ವಕೀಲ ಈ ರೀತಿಯಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:47 pm, Mon, 6 October 25