AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mizoram Bridge Collapse:ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರು ಸಾವು

ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಐಜ್ವಾಲ್ ಸಮೀಪದ ಸಾಯಿರಾಂಗ್‌ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ ಎನ್ನುವ ಕುರಿತು ಮಾಹಿತಿ ನೀಡಿದ್ದಾರೆ.

ಮಿಜೋರಾಂ Image Credit source: Zoramthanga
ನಯನಾ ರಾಜೀವ್
|

Updated on:Aug 23, 2023 | 12:43 PM

Share

ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಐಜ್ವಾಲ್ ಸಮೀಪದ ಸಾಯಿರಾಂಗ್‌ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ ಎನ್ನುವ ಕುರಿತು ಮಾಹಿತಿ ನೀಡಿದ್ದಾರೆ.

ಐಜ್ವಾಲ್ ಬಳಿಯ ಸಾಯಿರಂಗ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ, ಕನಿಷ್ಠ 15 ಕಾರ್ಮಿಕರು ಮೃತಪಟ್ಟಿದ್ದಾರೆ, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ, ಕುಟುಂಬ ಸದಸ್ಯರನ್ನು ಕಳೆದುಕೊಂಡ ಎಲ್ಲರಿಗೂ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಝೋರಂತಂಗ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಟ್ವೀಟ್

ಝೋರಂತಂಗ ಅವರು ಘಟನೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ, ಅಲ್ಲಿ ಸೇತುವೆ ಕುಸಿತದ ನಂತರದ ಪರಿಸ್ಥಿತಿ ಏನಾಗಿದೆ ಎಂಬುದನ್ನು ಕಾಣಬಹುದು.

ಪಿಎಂಒ ಟ್ವೀಟ್​

ಅವಘಡದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಮಿಜೋರಾಂನಲ್ಲಿ ರೈಲ್ವೆ ಮೇಲ್ಸೇತುವೆ ಕುಸಿದು ಕಾರ್ಮಿಕರು ಮೃತಪಟ್ಟಿರುವುದು ತುಂಬಾ ನೋವಿನ ಸಂಗತಿ, ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪಿಎಂಒ ಟ್ವೀಟ್ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

Published On - 12:17 pm, Wed, 23 August 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ

ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ