Mizoram Bridge Collapse:ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರು ಸಾವು

|

Updated on: Aug 23, 2023 | 12:43 PM

ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಐಜ್ವಾಲ್ ಸಮೀಪದ ಸಾಯಿರಾಂಗ್‌ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ ಎನ್ನುವ ಕುರಿತು ಮಾಹಿತಿ ನೀಡಿದ್ದಾರೆ.

Mizoram Bridge Collapse:ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರು ಸಾವು
ಮಿಜೋರಾಂ
Image Credit source: Zoramthanga
Follow us on

ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಐಜ್ವಾಲ್ ಸಮೀಪದ ಸಾಯಿರಾಂಗ್‌ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ ಎನ್ನುವ ಕುರಿತು ಮಾಹಿತಿ ನೀಡಿದ್ದಾರೆ.

ಐಜ್ವಾಲ್ ಬಳಿಯ ಸಾಯಿರಂಗ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ, ಕನಿಷ್ಠ 15 ಕಾರ್ಮಿಕರು ಮೃತಪಟ್ಟಿದ್ದಾರೆ, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ, ಕುಟುಂಬ ಸದಸ್ಯರನ್ನು ಕಳೆದುಕೊಂಡ ಎಲ್ಲರಿಗೂ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಝೋರಂತಂಗ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಟ್ವೀಟ್

ಝೋರಂತಂಗ ಅವರು ಘಟನೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ, ಅಲ್ಲಿ ಸೇತುವೆ ಕುಸಿತದ ನಂತರದ ಪರಿಸ್ಥಿತಿ ಏನಾಗಿದೆ ಎಂಬುದನ್ನು ಕಾಣಬಹುದು.

ಪಿಎಂಒ ಟ್ವೀಟ್​

ಅವಘಡದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಮಿಜೋರಾಂನಲ್ಲಿ ರೈಲ್ವೆ ಮೇಲ್ಸೇತುವೆ ಕುಸಿದು ಕಾರ್ಮಿಕರು ಮೃತಪಟ್ಟಿರುವುದು ತುಂಬಾ ನೋವಿನ ಸಂಗತಿ, ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪಿಎಂಒ ಟ್ವೀಟ್ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

Published On - 12:17 pm, Wed, 23 August 23