AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ನಿಟ್ಟಿನಲ್ಲಿ ಉತ್ತರ ಪ್ರದೇಶದ ಪ್ರಯತ್ನ ಶ್ಲಾಘನೀಯ; ವಿಶ್ವಬ್ಯಾಂಕ್ ನಿಯೋಗ ಮೆಚ್ಚುಗೆ

ಉತ್ತರ ಪ್ರದೇಶದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ ವಿಶ್ವಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಪರಮೇಶ್ವರನ್ ಅಯ್ಯರ್, ಇದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅಭಿನಂದಿಸಿದ್ದಾರೆ.

ಅಭಿವೃದ್ಧಿ ನಿಟ್ಟಿನಲ್ಲಿ ಉತ್ತರ ಪ್ರದೇಶದ ಪ್ರಯತ್ನ ಶ್ಲಾಘನೀಯ; ವಿಶ್ವಬ್ಯಾಂಕ್ ನಿಯೋಗ ಮೆಚ್ಚುಗೆ
ವಿಶ್ವಬ್ಯಾಂಕ್ ನಿಯೋಗದ ಜತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
Ganapathi Sharma
|

Updated on:Aug 02, 2023 | 11:05 PM

Share

ಲಖನೌ: ಒಟ್ಟಾರೆ ಅಭಿವೃದ್ಧಿಯ ನಿಟ್ಟಿನಲ್ಲಿ ಉತ್ತರ ಪ್ರದೇಶ (Uttar Pradesh) ಪ್ರಯತ್ನಗಳು ಶ್ಲಾಘನೀಯ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಗೆ ಪೂರಕವಾಗಿ ಮೂಲಸೌಕರ್ಯ ಅಭಿವೃದ್ಧಿ, ಕೈಗಾರಿಕೀಕರಣ, ಕಸ ವಿಲೇವಾರಿ, ಬಡತನ ನಿರ್ಮೂಲನೆ, ಯೋಜಿತ ನಗರೀಕರಣ, ಪರಿಸರ ಸಂರಕ್ಷಣೆ ಇತ್ಯಾದಿ ಕ್ಷೇತ್ರಗಳಲ್ಲಿ ಕಳೆದ 6 ವರ್ಷಗಳಲ್ಲಿ ಉತ್ತರ ಪ್ರದೇಶ ಗಮನಾರ್ಹ ಸಾಧನೆ ಮಾಡಿದೆ ಎಂದು ವಿಶ್ವಬ್ಯಾಂಕ್ ನಿಯೋಗ (World Bank Delegation) ಮೆಚ್ಚುಗೆ ವ್ಯಕ್ತಪಡಿಸಿದೆ. ವಿಶ್ವಬ್ಯಾಂಕ್‌ನ 20 ಸದಸ್ಯರನ್ನೊಳಗೊಂಡ ನಿಯೋಗ ಬುಧವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜತೆ ಮಾತುಕತೆ ನಡೆಸಿದೆ.

ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ ವಿಶ್ವಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಪರಮೇಶ್ವರನ್ ಅಯ್ಯರ್, ಇದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅಭಿನಂದಿಸಿದ್ದಾರೆ. ಮಹಾರಾಷ್ಟ್ರ, ಗುಜರಾತ್ ಭೇಟಿಯ ಬಳಿಕ ವಿಶ್ವಬ್ಯಾಂಕ್ ನಿಯೋಗ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದೆ. ಈ ನಿಯೋಗದಲ್ಲಿ 100 ದೇಶಗಳನ್ನು ಪ್ರತಿನಿಧಿಸುವ ಸದಸ್ಯರಿದ್ದಾರೆ.

ದೇಶದಲ್ಲಿ ಕಳೆದ 9 ವರ್ಷಗಳಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಕಳೆದ 6 ವರ್ಷಗಳಲ್ಲಿ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಲಾಗುತ್ತಿದೆ. ವಿಶ್ವಬ್ಯಾಂಕ್‌ನ ಧ್ಯೇಯ ಯಾವಾಗಲೂ ಬಡತನ ನಿರ್ಮೂಲನೆಯಾಗಿದೆ. ಆದರೆ ಈಗ ನಾವು ಪರಿಸರ ಕುರಿತ ಕಾಳಜಿಯ ಪ್ರಚಾರಕ್ಕೂ ವಿಶೇಷ ಒತ್ತು ನೀಡಿದ್ದೇವೆ. ಈ ದಿಕ್ಕಿನಲ್ಲಿ ಉತ್ತರ ಪ್ರದೇಶವು ದೊಡ್ಡ ಪಾತ್ರವನ್ನು ವಹಿಸುತ್ತಿದೆ ಎಂದು ಪರಮೇಶ್ವರನ್ ಅಯ್ಯರ್ ಹೇಳಿದರು.

ಯೋಜಿತ ಪ್ರಯತ್ನಗಳಿಂದ ಉತ್ತರ ಪ್ರದೇಶವು ಇಂದು ದೇಶದ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಆರು ವರ್ಷಗಳಲ್ಲಿ ಉತ್ತರ ಪ್ರದೇಶವು ತನ್ನ ಆರ್ಥಿಕತೆಯನ್ನು ಸುಧಾರಿಸುವಲ್ಲಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು. ರಾಜ್ಯದ 5.5 ಕೋಟಿ ಜನ ಬಡತನ ರೇಖೆಯಿಂದ ಹೊರಬಂದಿದ್ದಾರೆ. ಉತ್ತರ ಪ್ರದೇಶವನ್ನು ರಫ್ತು ಕೇಂದ್ರವನ್ನಾಗಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಬಡ ಮಕ್ಕಳ ಶಿಕ್ಷಣಕ್ಕಾಗಿ ಉತ್ತಮ ಸೌಲಭ್ಯಗಳಿರುವ ಅಟಲ್ ವಸತಿ ಶಾಲೆ; ಯೋಗಿ ಆದಿತ್ಯನಾಥ್ ಸರ್ಕಾರದ ಮಹತ್ತರ ಯೋಜನೆ

ಕಳೆದ ಫೆಬ್ರವರಿಯಲ್ಲಿ ಉತ್ತರ ಪ್ರದೇಶವು ಜಾಗತಿಕ ಹೂಡಿಕೆದಾರರ ಶೃಂಗಸಭೆ ಆಯೋಜಿಸಿತ್ತು. ಇದರಲ್ಲಿ ರಾಜ್ಯವು 36 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಿನ ಹೂಡಿಕೆಯ ಪ್ರಸ್ತಾಪಗಳನ್ನು ಸ್ವೀಕರಿಸಿದೆ. ಕೆಲವೇ ತಿಂಗಳುಗಳಲ್ಲಿ ಹೂಡಿಕೆ ಪ್ರಸ್ತಾಪಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಆದಿತ್ಯನಾಥ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಂತೆ ದೇಶವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಸಾಗುತ್ತಿದೆ. ಉತ್ತರ ಪ್ರದೇಶವು ರಾಜ್ಯದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ಮಾಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:01 pm, Wed, 2 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ