AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ನೀಡಲಿದ್ದಾರೆ ಆಗ್ರಾದ ವಕೀಲರು

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಳೆದ ಒಂದು ವಾರದಿಂದ ಕುಸ್ತಿಪಟುಗಳು ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ನೀಡಲಿದ್ದಾರೆ ಆಗ್ರಾದ ವಕೀಲರು
ಕುಸ್ತಿಪಟುಗಳ ಪ್ರತಿಭಟನೆImage Credit source: BBC
Follow us
ನಯನಾ ರಾಜೀವ್
|

Updated on: May 08, 2023 | 8:17 AM

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಳೆದ ಒಂದು ವಾರದಿಂದ ಕುಸ್ತಿಪಟುಗಳು ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ರಿಜ್ ಭೂಷಣ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ, ಅವರ ಪ್ರತಿಭಟನೆಗೆ ಭಾನುವಾರ ರೈತರು ಬೆಂಬಲ ಸೂಚಿಸಿದ್ದು, ಇಂದು ಆಗ್ರಾ ವಕೀಲರು ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಕುಸ್ತಿಪಟುಗಳ ಪರ ವಕಾಲತ್ತು ವಹಿಸಲು ಆಗ್ರಾದ ನೂರಾರು ವಕೀಲರು ಈಗ ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವವರೆಗೂ ತಾವು ಪ್ರತಿಭಟನಾ ಸ್ಥಳದಿಂದ ಹೊರಬರುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಆಗ್ರಾದಲ್ಲಿ ಪಶ್ಚಿಮ ಉತ್ತರ ಪ್ರದೇಶ ರಾಜ್ಯ ನಿರ್ಮಾಣ ಜನಮಂಚ್ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ ನಂತರ ಹಿರಿಯ ವಕೀಲರು ಕುಸ್ತಿಪಟುಗಳಿಗೆ ತಮ್ಮ ಬೆಂಬಲವನ್ನು ನೀಡಲು ನಿರ್ಧರಿಸಿದ್ದಾರೆ. ದೇಶದ ಕುಸ್ತಿಪಟು ಹೆಣ್ಣು ಮಕ್ಕಳು ನಮ್ಮ ರಾಷ್ಟ್ರದ ಹೆಮ್ಮೆಯನ್ನು ಹೆಚ್ಚಿಸಿದವರು, ದೇಶದ ಕೀರ್ತಿ ಹೆಚ್ಚಿಸಿದವರು, ಇಂಥವರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: Wrestlers Protest: ಜಂತರ್​ ಮಂತರ್​ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ರೈತರ ಬೆಂಬಲ

ಶುಕ್ರವಾರ, ಹರಿಯಾಣ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್ ಜಂತರ್ ಮಂತರ್ ಬಳಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಬೆಂಬಲ ನೀಡಿದರು. ಬಳಿಕ ಮಾತನಾಡಿ, ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಸಂಪೂರ್ಣ ಸಹಾನುಭೂತಿ ಮತ್ತು ಬೆಂಬಲವಿದೆ. ಕುಸ್ತಿಪಟುಗಳ ಪರವಾಗಿ ಮಧ್ಯಸ್ಥಿಕೆ ವಹಿಸಲು ಮತ್ತು ಅವರ ಪರವಾಗಿ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಸಿದ್ಧರಿದ್ದಾರೆ ಎಂದು ಭರವಸೆ ನೀಡಿದ್ದಾರೆ.

ಕುಸ್ತಿ ಫೆಡರೇಶನ್ ಮುಖ್ಯಸ್ಥರ ವಿರುದ್ಧ ದೆಹಲಿ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ ಮತ್ತು ಪ್ರತಿಭಟನಾ ನಿರತ ಗ್ರಾಪ್ಲರ್‌ಗಳ ಬೇಡಿಕೆಗಳನ್ನು ಈಡೇರಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ