Wrestlers Protest: ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ಮುಂಬರುವ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದ ಕುಸ್ತಿಪಟುಗಳು

|

Updated on: Jun 11, 2023 | 8:27 AM

ಒಂದೊಮ್ಮೆ ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ಮುಂಬರುವ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದಾರೆ. ಭಾರತೀಯ ಕುಸ್ತಿ ಪೇಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿ ಪಟುಗಳು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

Wrestlers Protest: ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ಮುಂಬರುವ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದ ಕುಸ್ತಿಪಟುಗಳು
ಕುಸ್ತಿಪಟುಗಳು
Image Credit source: The Economic Times
Follow us on

ಒಂದೊಮ್ಮೆ ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ಮುಂಬರುವ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದಾರೆ.
ಭಾರತೀಯ ಕುಸ್ತಿ ಪೇಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿ ಪಟುಗಳು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ರಿಜ್​ ಭೂಷಣ್​ರನ್ನು ಬಂಧಿಸಬೇಕು ಹಾಗೂ ಕುಸ್ತಿ ಫೆಡರೇಷನ್​ ಅಲ್ಲಿ ಬ್ರಿಜ್​ ಭೂಷಣ್​ ಆಗಲಿ ಹಾಗೂ ಅವರ ಕುಟುಂಬದ ಯಾರೂ ಕೂಡ ಮುಖ್ಯಸ್ಥರಾಗುವಂತಿಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಡಳಿತದ ಸರ್ಕಾರವು 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಗೊಂಡಾದಲ್ಲಿ ಬ್ರಿಜ್​ ಭೂಷಣ್ ಜಾಥಾ ಹಮ್ಮಿಕೊಂಡಿದ್ದಾರೆ.

ಹಾಗೆಯೇ ಪ್ರತಿಭಟನೆಯಲ್ಲಿ ತೊಡಗಿರುವವರು ಸೇರಿದಂತೆ ಎಲ್ಲಾ ಕುಸ್ತಿಪಟುಗಳು ಟ್ರಯಲ್ಸ್‌ನಲ್ಲಿ ಸ್ಪರ್ಧಿಸಬೇಕು ಮತ್ತು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8, 2023 ರವರೆಗೆ ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗಾಗಿ ಭಾರತ ತಂಡದಲ್ಲಿ ತಮ್ಮ ಸ್ಥಾನವನ್ನು ಗಳಿಸಬೇಕಾಗಿದೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರು ಇಂದು ಗೊಂಡಾದಲ್ಲಿ ತಮ್ಮ ಬೆಂಬಲಿಗರು, ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದಂತೆ ಇತರರ ರ್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಹೇಳಿದ್ದಾರೆ. ಈ ಕಾರ್ಯಕ್ರಮಕ್ಕೆ ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಮೋಹನ್ ಯಾದವ್ ಮುಖ್ಯ ಅತಿಥಿಯಾಗಲಿದ್ದಾರೆ.

ಮತ್ತಷ್ಟು ಓದಿ: Wrestlers Protest: ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾದ ಕುಸ್ತಿಪಟುಗಳು

ರಾಜಿ ಮಾಡಿಕೊಳ್ಳಲು ಪ್ರತಿಭಟನಾ ನಿರತ ಕುಸ್ತಿಪಟುವಿನ ಮೇಲೆ ಒತ್ತಡ ಹೇರಲಾಗುತ್ತಿದೆ ಮತ್ತು ಬ್ರಿಜ್ ಭೂಷಣ್ ಶರಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಹೊರಿಸಿದ ಅಪ್ರಾಪ್ತ ಕುಸ್ತಿಪಟು ತನ್ನ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ಮಲಿಕ್ ಹೇಳಿಕೊಂಡಿದ್ದಾರೆ.

ರಾಜಿ ಮಾಡಿಕೊಳ್ಳಲು ನಮ್ಮ ಮೇಲೆ ಭಾರಿ ಒತ್ತಡವಿದೆ” ಎಂದು ಬ್ರಿಜ್ ಭೂಷಣ್ ಅವರ ನಿಕಟವರ್ತಿಗಳು ತಮಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಾಕ್ಷಿ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ