Wrestlers Protest: ಬ್ರಿಜ್​ ಭೂಷಣ್ ನನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿಲ್ಲ: ಅಪ್ರಾಪ್ತ ಕುಸ್ತಿಪಟುವಿನ ತಂದೆಯ ಹೇಳಿಕೆ

|

Updated on: Jun 08, 2023 | 9:20 AM

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್​ ಭೂಷಣ್ ನನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿಲ್ಲ ಎಂದು ಅಪ್ರಾಪ್ತ ಕುಸ್ತಿಪಟುವಿನ ತಂದೆ ಹೇಳಿಕೆ ನೀಡಿದ್ದಾರೆ.

Wrestlers Protest: ಬ್ರಿಜ್​ ಭೂಷಣ್ ನನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿಲ್ಲ: ಅಪ್ರಾಪ್ತ ಕುಸ್ತಿಪಟುವಿನ ತಂದೆಯ ಹೇಳಿಕೆ
ಬ್ರಿಜ್ ಭೂಷಣ್
Image Credit source: India Today
Follow us on

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್​ ಭೂಷಣ್ ನನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿಲ್ಲ ಎಂದು ಅಪ್ರಾಪ್ತ ಕುಸ್ತಿಪಟುವಿನ ತಂದೆ ಹೇಳಿಕೆ ನೀಡಿದ್ದಾರೆ. ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿತ್ತು. ಇದೀಗ ಅಪ್ರಾಪ್ತ ಬಾಲಕಿಯ ತಂದೆ ತಮ್ಮ ಮಗಳಿಗೆ ಬ್ರಿಜ್ ಭೂಷಣ್ ಲೈಂಗಿಕ ಕಿರುಕುಳ ನೀಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಹಿಂದಿನ ದೂರನ್ನು ಹಿಂಪಡೆದಿಲ್ಲ ಆದರೆ ಹೊಸ ಹೇಳಿಕೆಗಳನ್ನು ದಾಖಲಿಸಿದ್ದೇವೆ ಎಂದು ತಂದೆ ಸ್ಪಷ್ಟಪಡಿಸಿದ್ದಾರೆ.

ನನ್ನ ಮಗಳಿಗೆ ಪಕ್ಷಪಾತ ಮಾಡಿದ್ದರು, ಕಳೆದ ಬಾರಿ ಏಷ್ಯನ್ ಚಾಂಪಿಯನ್​ಶಿಪ್​ನಲ್ಲಿ ಮಗಳು ಸೋತಿದ್ದರಿಂದ ಕೋಪಗೊಂಡು ಆರೋಪ ಹೊರಿಸಲಾಗಿದೆ. ಮಗಳ ಖರ್ಚು ಭರಿಸಲು ಮನೆಯನ್ನು ಕೂಡ ಮಾರಿದ್ದೆ , ಯಾರ ಪ್ರಭಾವಕ್ಕೂ ಒಳಗಾಗದೆ ನನ್ನ ಹೇಳಿಕೆಯನ್ನು ಮರು ದಾಖಲು ಮಾಡಿದ್ದೇನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ನಾವು ಕೆಲವು ಸುಳ್ಳು ಆರೋಪಗಳನ್ನು ಮಾಡಿದ್ದೇವೆ,ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಮಗೆ ಯಾವುದೇ ದ್ವೇಷವಿಲ್ಲ ಎಂದು ಹೇಳಿದರು.
ಬ್ರಿಜ್​ ಭೂಷಣ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಳೆದ ಕೆಲವು ದಿನಗಳಿಂದ ಕುಸ್ತಿಪಟುಗಳು ದೆಹಲಿಯ ಜಂತರ್​ ಮಂತರ್ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈಗ ಅಲ್ಲಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡಿಲ್ಲ.

ಮತ್ತಷ್ಟು ಓದಿ: ಜೂನ್ 15ರವರೆಗೆ ಪ್ರತಿಭಟನೆ ಮಾಡುವುದಿಲ್ಲ: ಅನುರಾಗ್ ಠಾಕೂರ್ ಭೇಟಿ ಬಳಿಕ ಹೇಳಿಕೆ ನೀಡಿದ ಸಾಕ್ಷಿ ಮಲಿಕ್

ವಿಚಾರದ ಬಗ್ಗೆ ಮಾತುಕತೆ ನಡೆಸಲು ಗೃಹ ಸಚಿವ ಅಮಿತ್ ಶಾ ಹಾಗೂ ಅನುರಾಗ್ ಠಾಕೂರ್ ಕುಸ್ತಿಪಟುಗಳನ್ನು ಆಹ್ವಾನಿಸಿದ್ದರು. ಅಮಿತ್ ಶಾ ಜತೆಗಿನ ಮಾತುಕತೆ ವಿಫಲವಾಗಿತ್ತು. ಅನುರಾಗ್​ ಜತೆ ಮಾತನಾಡಿ ತಾವು ಜೂನ್ 15ರವೆಗೂ ಪ್ರತಿಭಟನೆ ನಡೆಸದಿರಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಹಾಗೆಯೇ ಕೆಲವು ಬೇಡಿಕೆಗಳನ್ನು ಮುಂದಿಟಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ