ಆದಷ್ಟು ಬೇಗ ಪರಿಹಾರಕ್ಕಾಗಿ ಆಶಿಸುತ್ತೇನೆ: ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ನೀಡಿದ ಅನಿಲ್ ಕುಂಬ್ಳೆ
ಮೇ 28 ರಂದು ನಮ್ಮ ಕುಸ್ತಿಪಟುಗಳ ಜತೆ ನಡೆದಿರುವ ವಿಷಯ ಕೇಳಿ ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆಯ ಮೂಲಕ ಯಾವುದೇ ವಿಷಯವನ್ನೂ ಪರಿಹರಿಸಬಹುದು. ಆದಷ್ಟು ಬೇಗ ಸಮಸ್ಯೆ ಪರಿಹಾರವಾಗಲಿ ಎಂದು ಆಶಿಸುತ್ತಿರುವುದಾಗಿ ಎಂದು ಅನಿಲ್ ಕುಂಬ್ಳೆ ಟ್ವೀಟ್.
ಮೇ 28 ರಂದು ದೆಹಲಿ ಪೊಲೀಸರು ಜಂತರ್ ಮಂತರ್ ಪ್ರತಿಭಟನಾ ಸ್ಥಳದಿಂದ ಕುಸ್ತಿಪಟುಗಳನ್ನು (Wrestlers Protest) ಬಲವಂತವಾಗಿ ತೆರವು ಮಾಡಿದ ರೀತಿಯಿಂದ ನನಗೆ ಬೇಸರವಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ (Anil Kumble) ಮಂಗಳವಾರ ಹೇಳಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮೇ 28 ರಂದು ನಮ್ಮ ಕುಸ್ತಿಪಟುಗಳ ಜತೆ ನಡೆದಿರುವ ವಿಷಯ ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆಯ ಮೂಲಕ ಯಾವುದೇ ವಿಷಯವನ್ನೂ ಪರಿಹರಿಸಬಹುದು. ಆದಷ್ಟು ಬೇಗ ಸಮಸ್ಯೆ ಪರಿಹಾರವಾಗಲಿ ಎಂದು ಆಶಿಸುತ್ತಿರುವುದಾಗಿ ಎಂದು ಅನಿಲ್ ಕುಂಬ್ಳೆ ಟ್ವೀಟ್ ಮಾಡಿದ್ದಾರೆ.
Dismayed to hear about what transpired on the 28th of May with our wrestlers being manhandled. Anything can be resolved through proper dialogue. Hoping for a resolution at the earliest.
— Anil Kumble (@anilkumble1074) May 30, 2023
ಮಂಗಳವಾರ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ನಿರ್ಧರಿಸಿದ್ದರು. ಇದಕ್ಕಾಗಿ ತಾವು ಗೆದ್ದ ಪದಕಗಳನ್ನು ತೆಗೆದುಕೊಂಡು ಕುಸ್ತಿಪಟುಗಳು ಹರಿದ್ವಾರಕ್ಕೆ ಬಂದಿದ್ದರು. ಈ ಹೊತ್ತಲ್ಲಿ ರೈತರ ನಾಯಕ ನರೇಶ್ ಟಿಕಾಯತ್ (Naresh Tikait) ಅವರು ಹರಿದ್ವಾರದ ಹರ್ ಕಿ ಪೌರಿ ಘಾಟ್‌ಗೆ ಆಗಮಿಸಿದ್ದಾರೆ. ಅಲ್ಲಿ ಕುಸ್ತಿಪಟುಗಳೊಂದಿಗೆ ಮಾತನಾಡಿ ಅವರು ನೀವು ಕಷ್ಟಪಟ್ಟು ಸಂಪಾದಿಸಿದ ಪದಕಗಳನ್ನು ಪವಿತ್ರ ನದಿಯಾದ ಗಂಗಾದಲ್ಲಿ ಬಿಸಾಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ ನಂತರ ಕುಸ್ತಿಪಟುಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಕುಸ್ತಿಪಟುಗಳು ತಮ್ಮ ಪದಕಗಳನ್ನು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ನರೇಶ್ ಟಿಕಾಯತ್ ಅವರಿಗೆ ಹಸ್ತಾಂತರಿಸಿದ್ದಾರೆ. ಐದು ದಿನಗಳಲ್ಲಿ ನ್ಯಾಯ ದೊರಕಿಸಿಕೊಡಲು ಟಿಕಾಯತ್ ಸಹಾಯ ಮಾಡಬೇಕೆಂಬ ಷರತ್ತಿನೊಂದಿಗೆ ಕುಸ್ತಿಪಟುಗಳು ತಮ್ಮ ಪದಕಗಳನ್ನು ಹಸ್ತಾಂತರಿಸಿದ್ದಾರೆ.
#WATCH | Protesting wrestlers return from Haridwar after Farmer leader Naresh Tikait intervened and sought five days time from them. pic.twitter.com/JQpweCitHv
— ANI (@ANI) May 30, 2023
ಟಿಕಾಯತ್ ಘಾಟ್‌ಗೆ ಆಗಮಿಸುವ ಮೊದಲು, ಪವಿತ್ರ ನದಿಯ ವ್ಯವಹಾರಗಳನ್ನು ನೋಡಿಕೊಳ್ಳುವ ಗಂಗಾ ಸಭೆಯು ಪದಕಗಳನ್ನು ಬಿಸಾಡುವುದಕ್ಕೆ ನಿಷೇಧಿಸುವ ಆದೇಶವನ್ನು ಸಂಜೆ ಹೊರಡಿಸಿತ್ತು. ಕುಸ್ತಿಪಟುಗಳು ತಮ್ಮ ಪದಕಗಳನ್ನು ಬಿಸಾಡಲು ಹರಿದ್ವಾರದ ಗಂಗಾ ತೀರದಲ್ಲಿರುವ ಪೂಜ್ಯ ಸ್ಥಳವಾದ ಹರ್ ಕಿ ಪೌರಿಯನ್ನು ಆಯ್ಕೆ ಮಾಡಿಕೊಂಡಿದ್ದರು.
ಇದನ್ನೂ ಓದಿ: Wrestlers Protest: ಪ್ರತಿಭಟನಾನಿರತ ಕುಸ್ತಿಪಟುಗಳು ಇಲ್ಲಿಯವರೆಗೆ ಗೆದ್ದ ಪದಕಗಳೆಷ್ಟು?
ಇದಕ್ಕೂ ಮುನ್ನ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹೇಳಿಕೆಯನ್ನು ಹಂಚಿಕೊಂಡ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಈ ಪದಕಗಳು ನಮ್ಮ ಜೀವನ ಮತ್ತು ಆತ್ಮ. ನಾವು ಅವುಗಳನ್ನು ಗಂಗೆಯಲ್ಲಿ ಬಿಸಾಡಲಿದ್ದೇವೆ,ಏಕೆಂದರೆ ಅವಳು ಮಾ ಗಂಗಾ. ಅದರ ನಂತರ, ಬದುಕುವುದರಲ್ಲಿ ಅರ್ಥವಿಲ್ಲ, ಹಾಗಾಗಿ ನಾವು ಇಂಡಿಯಾ ಗೇಟ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ