AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers protest: ತಾವು ಗೆದ್ದ ಪದಕಗಳನ್ನು ಗಂಗಾನದಿಯಲ್ಲಿ ಬಿಡಲು ತೀರ್ಮಾನಿಸಿದ ಕುಸ್ತಿಪಟುಗಳು

ಡಬ್ಲ್ಯುಎಫ್ ಮುಖ್ಯಸ್ಥರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ತಿಂಗಳಿನಿಂದ ಜಂತರ್ ಮಂತರ್​​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪೈಲ್ವಾನರನ್ನು  ವಶಕ್ಕೆ ತೆಗೆದುಕೊಂಡ ಪೊಲೀಸರು, ಪ್ರತಿಭಟನಾ ನಿರತರ ವಸ್ತುಗಳನ್ನು ಅಲ್ಲಿಂದ ಖಾಲಿ ಮಾಡಿದ್ದರು.

Wrestlers protest: ತಾವು ಗೆದ್ದ ಪದಕಗಳನ್ನು ಗಂಗಾನದಿಯಲ್ಲಿ ಬಿಡಲು ತೀರ್ಮಾನಿಸಿದ ಕುಸ್ತಿಪಟುಗಳು
ಪ್ರತಿಭಟನಾನಿರತ ಕುಸ್ತಿಪಟುಗಳನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು
ರಶ್ಮಿ ಕಲ್ಲಕಟ್ಟ
| Updated By: ಝಾಹಿರ್ ಯೂಸುಫ್|

Updated on:May 30, 2023 | 2:04 PM

Share

ದೆಹಲಿ: ಭಾರತೀಯ ಕುಸ್ತಿಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್  (Brij Bhushan Sharan Singh)ವಿರುದ್ಧ ಪ್ರತಿಭಟನೆ ನಡೆಸಿತ್ತಿರುವ ಕುಸ್ತಿಪಟುಗಳು (Wrestlers Protest) ನಮ್ಮ ಬೇಡಿಕೆ ಈಡೇರಿಸದೇ ಇದ್ದರೆ ಇಂದು(ಮಂಗಳವಾರ) ಸಂಜೆ 6 ಗಂಟೆಗೆ ತಾವು ಗೆದ್ದ ಪದಕಗಳನ್ನು ಗಂಗಾ ನದಿಯಲ್ಲಿ (Ganga River) ಬಿಡುವುದಾಗಿ ಹೇಳಿದ್ದಾರೆ. ಡಬ್ಲ್ಯುಎಫ್‌ಐ ಮುಖ್ಯಸ್ಥರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ತಿಂಗಳಿನಿಂದ ಜಂತರ್ ಮಂತರ್​​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪೈಲ್ವಾನರನ್ನು  ವಶಕ್ಕೆ ತೆಗೆದುಕೊಂಡ ಪೊಲೀಸರು, ಪ್ರತಿಭಟನಾ ನಿರತರ ವಸ್ತುಗಳನ್ನು ಅಲ್ಲಿಂದ ಖಾಲಿ ಮಾಡಿದ್ದರು. ಭಾನುವಾರದ ಘಟನೆ ನಂತರ ತೀವ್ರವಾಗಿ ನೊಂದಿರುವ ಕುಸ್ತಿಪಟುಗಳು ಈಗ ಪದಕಗಳನ್ನು ಗಂಗಾದಲ್ಲಿ ಬಿಡಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಸಾಕ್ಷಿ ಮಲಿಕ್ ಟ್ವೀಟ್ ಮಾಡಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಭಾನುವಾರ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದರು. ಅಲ್ಲಿಂದ ಅವರನ್ನು ಬಲವಂತವಾಗಿ ತೆರವು ಮಾಡಿಸಿದ್ದಲ್ಲದೆ, ಅವರ ಸಾಮಾನು ಸರಂಜಾಮುಗಳನ್ನು ಪೊಲೀಸರು ಅಲ್ಲಿಂದ ಖಾಲಿ ಮಾಡಿದ್ದರು. ಈ ಘಟನೆಯಿಂದ ತೀವ್ರ ವಾಗಿ ನೊಂದಿರುವ ಕುಸ್ತಿಪಟುಗಳು ಮಂಗಳವಾರ ಸಂಜೆ 6 ಗಂಟೆಗೆ ಗಂಗಾ ನದಿಯಲ್ಲಿ ತಮ್ಮ ಪದಕಗಳನ್ನು ಬಿಟ್ಟು, ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.

ಕುಸ್ತಿಪಟು ಸಾಕ್ಷಿ ಮಲಿಕ್ ಟ್ವಿಟ್ಟರ್‌ನಲ್ಲಿ ಹೇಳಿಕೆ ನೀಡಿದ್ದು, ಕುಸ್ತಿಪಟುಗಳು ಹರಿದ್ವಾರಕ್ಕೆ ಹೋಗಿ  ಸಂಜೆ 6 ಗಂಟೆಗೆ ಗಂಗಾ ನದಿಯಲ್ಲಿ ಪದಕಗಳನ್ನು ಮುಳುಗಿಸಲಿದ್ದಾರೆ ಎಂದು ಹೇಳಿದ್ದಾರೆ. ಈ ಪದಕಗಳು ನಮ್ಮ ಜೀವನ, ನಮ್ಮ ಆತ್ಮಗಳು, ಇಂದು ಅವುಗಳನ್ನು ಗಂಗಾದಲ್ಲಿ ಎಸೆದ ನಂತರ ಬದುಕಲು ಯಾವುದೇ ಕಾರಣವಿಲ್ಲ. ಇದಾದ ನಂತರ ನಾವು ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಹೇಳಿದ್ದಾರೆ.

ನಮ್ಮನ್ನು ಅವರ ಹೆಣ್ಣುಮಕ್ಕಳ ಎಂದು ಕರೆಯುವ ಪ್ರಧಾನಿ ಒಮ್ಮೆಯೂ ನಮ್ಮ ಬಗ್ಗೆ ಕಾಳಜಿಯನ್ನು ತೋರಿಸಲಿಲ್ಲ. ಬದಲಾಗಿ, ಅವರು ಬ್ರಿಜ್ ಭೂಷಣ್ ಸಿಂಗ್ ಅವರನ್ನು ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ಆಹ್ವಾನಿಸಿದರು. ಅವರು ಶುಭ್ರ ಬಿಳಿ ಬಟ್ಟೆಯಲ್ಲಿ ಫೋಟೊಗಳಿಗೆ ಪೋಸ್ ನೀಡಿದರು. ಈ ಹೊಳಪು ನಮ್ಮನ್ನು ಕುಟುಕುತ್ತಿದೆ ಎಂದು ಸಾಕ್ಷಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ,.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಉನ್ನತ ಕುಸ್ತಿಪಟುಗಳು, ಅಪ್ರಾಪ್ತ ವಯಸ್ಕ ಸೇರಿದಂತೆ ಮಹಿಳಾ ಅಥ್ಲೀಟ್‌ಗಳ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳವೆಸಗಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಏಪ್ರಿಲ್ 23 ರಂದು ಜಂತರ್ ಮಂತರ್‌ನಲ್ಲಿ ಪ್ರಾರಂಭವಾದ ಪ್ರತಿಭಟನೆಯು ಹೊಸ ಸಂಸತ್ ಭವನದ ಉದ್ಘಾಟನೆಯ ದಿನದಂದು ಹೃದಯ ವಿದ್ರಾವಕ ದೃಶ್ಯಗಳನ್ನು ಕಂಡಿತು. ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಕುಸ್ತಿಪಟುಗಳನ್ನು ಪೊಲೀಸರು ಹಿಡಿದು ಎಳೆದಾಡಿ ಪೊಲೀಸ್ ವ್ಯಾನ್​​ಗೆ ತಳ್ಳಿದ್ದರು.

ಇದನ್ನೂ ಓದಿ: Wrestlers Protest: ಮಾನವೀಯತೆ ಮರೆತು ಮಹಿಳಾ ಕುಸ್ತಿಪಟುಗಳನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸರು ಜಗತ್ತು ನೋಡುತ್ತಿದೆ ಎಂದ ಅಥ್ಲೀಟ್​ಗಳು

ಕಾಂಗ್ರೆಸ್‌ನ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಪ್ರತಿಪಕ್ಷಗಳ ಉನ್ನತ ನಾಯಕರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕೇಂದ್ರ ಸರ್ಕಾರ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Tue, 30 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?