Wrestlers Protest: ಬಿಜೆಪಿ ಸಂಸದನ ವಿರುದ್ಧ MeToo ಆರೋಪ, ರ್ಯಾಲಿ ಮುಂದೂಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್

|

Updated on: Jun 02, 2023 | 12:21 PM

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಇಂದು ಅಯೋಧ್ಯೆಯಲ್ಲಿ ರ್ಯಾಲಿಯನ್ನು ನಡೆಸುವುದಾಗಿ ಹೇಳಿದರು, ಆದರೆ ಇದೀಗ ಕೆಲವು ದಿನಗಳ ಕಾಲ ಈ ರ್ಯಾಲಿಯನ್ನು ಮುಂದೂಡಲಾಗಿದೆ

Wrestlers Protest: ಬಿಜೆಪಿ ಸಂಸದನ ವಿರುದ್ಧ MeToo ಆರೋಪ, ರ್ಯಾಲಿ ಮುಂದೂಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್
ಬ್ರಿಜ್ ಭೂಷಣ್ ಶರಣ್ ಸಿಂಗ್
Follow us on

ದೆಹಲಿ: ಮಹಿಳಾ ಕುಸ್ತಿಪಟುಗಳಿಗೆ (Wrestlers Protest) ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರು ಇಂದು ಅಯೋಧ್ಯೆಯಲ್ಲಿ ರ್ಯಾಲಿಯನ್ನು ನಡೆಸುವುದಾಗಿ ಹೇಳಿದರು, ಆದರೆ ಇದೀಗ ಕೆಲವು ದಿನಗಳ ಕಾಲ ಈ ರ್ಯಾಲಿಯನ್ನು ಮುಂದೂಡಲಾಗಿದೆ, ಪೊಲೀಸರು ತಮ್ಮ ವಿರುದ್ಧದ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಸೋಮವಾರ “ಸಾಧುಗಳ ಆಶೀರ್ವಾದದೊಂದಿಗೆ” ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವುದಾಗಿ ಹೇಳಿದರು. ಈಗಾಗಲೇ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ವಿರುದ್ಧ ಮಹಿಳಾ ಕುಸ್ತಿಪಟುಗಳು ದೂರು ನೀಡಿದ್ದು, ಅವರನ್ನು ಕುಸ್ತಿ ಸಂಸ್ಥೆಯ ಮುಖ್ಯಸ್ಥ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ನಾನು 28 ವರ್ಷಗಳಿಂದ ನಿಮ್ಮ ಸೇವೆಯನ್ನು ಮಾಡುತ್ತಿದ್ದಾನೆ. ರಾಜಕೀಯ ಉದ್ದೇಶಕ್ಕಾಗಿ ನನ್ನ ಮೇಲೆ ಇಂತಹ ಆರೋಪ ಮಾಡಲಾಗುತ್ತಿದೆ. ನನ್ನ ಪಕ್ಷವನ್ನು ಈ ವಿಚಾರದಲ್ಲಿ ದೂರುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Wrestlers Protest: ಬ್ರಿಜ್​ ಭೂಷಣ್​ರನ್ನು ಬಂಧಿಸಲು ಸಾಕಷ್ಟು ಸಾಕ್ಷ್ಯಗಳಿಲ್ಲ: ಪೊಲೀಸ್ ಮೂಲಗಳು

ಪ್ರಸ್ತುತ ಪರಿಸ್ಥಿತಿಯಲ್ಲಿ ಕೆಲವು ರಾಜಕೀಯ ಪಕ್ಷಗಳು ಪ್ರಾಂತೀಯತೆ, ಪ್ರಾದೇಶಿಕತೆ ಮತ್ತು ಜನಾಂಗೀಯ ಸಂಘರ್ಷವನ್ನು ಉತ್ತೇಜಿಸುವ ಮೂಲಕ ಸಾಮಾಜಿಕ ಸೌಹಾರ್ದತೆ ಕದಡಲು ಯತ್ನಿಸುತ್ತಿದ್ದು, ಈ ಕಾರಣದಿಂದ ಜೂನ್ 5 ರಂದು ಅಯೋಧ್ಯೆಯಲ್ಲಿ ಸಂತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿರುವಾಗ, ಜತೆಗೆ ಸುಪ್ರೀಂ ಕೋರ್ಟ್​​ನಲ್ಲಿ ಈ ಬಗ್ಗೆ ವಿಚಾರಣೆ ಇರುವಾಗ ಈ ರ್ಯಾಲಿ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು “ಎಲ್ಲಾ ಧರ್ಮಗಳು, ಜಾತಿಗಳು ಮತ್ತು ಕ್ಷೇತ್ರಗಳ ಲಕ್ಷಾಂತರ ಬೆಂಬಲಿಗರು ಮತ್ತು ಹಿತೈಷಿಗಳು ನನ್ನನ್ನು ಬೆಂಬಲಿಸಿದ್ದಾರೆ” ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ