Wrestlers Protest: ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಕುಸ್ತಿಪಟುಗಳು
ಕಳೆದ ಒಂದು ತಿಂಗಳಿನಿಂದ ಭಾರತೀಯ ಕುಸ್ತಿ ಫೆಡರೇಷನ್ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರವಾಗಿ ಶನಿವಾರ ಗೃಹ ಸಚಿವ ಅಮಿತ್ ಶಾ(Amit Shah) ರನ್ನು ಭೇಟಿಯಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಭಾರತೀಯ ಕುಸ್ತಿ ಫೆಡರೇಷನ್ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರವಾಗಿ ಶನಿವಾರ ಗೃಹ ಸಚಿವ ಅಮಿತ್ ಶಾ(Amit Shah) ರನ್ನು ಭೇಟಿಯಾಗಿದ್ದಾರೆ. ಕುಸ್ತಿಪಟುಗಳಾದ ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಹಾಗೂ ವಿನೇಶ್ ಫೋಗಟ್ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ ಮಧ್ಯರಾತ್ರಿವರೆಗೂ ಮಾತುಕತೆ ನಡೆಸಿದರು. ಬ್ರಿಜ್ ಭೂಷಣ್ ವಿರುದ್ಧ ಶೀಘ್ರ ಚಾರ್ಜ್ಶೀಟ್ಗೆ ಒತ್ತಾಯಿಸಿದರು. ಬ್ರಿಜ್ ಭೂಷಣ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಂತರ್ ಮಂತರ್ ಎದುರು ಒಂದು ತಿಂಗಳಿನಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಲ್ಲಿ ಪೊಲೀಸರು ಜಂತರ್ ಮಂತರ್ನಲ್ಲಿ ಪ್ರತಿಭಟನೆ ಅವಕಾಶ ನೀಡಲಿಲ್ಲ.
ಕುಸ್ತಿಪಟುಗಳ ಜತೆ ಮಾತನಾಡಿದ ಅಮಿತ್ ಶಾ ಆರೋಪಗಳ ಬಗ್ಗೆ ನ್ಯಾಯಯುತ ತನಿಖೆ ನಡೆಸುವುದಾಗಿ ಭರವಸೆ ನೀಡಿದರು. ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಸಂಸ್ಥೆ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಾದ ಎಫ್‌ಐಆರ್‌ನಲ್ಲಿ ನಮೂದಿಸಿರುವ ಆರೋಪಗಳು ಬಯಲಾಗಿವೆ.
ಮಹಿಳಾ ಅಥ್ಲೀಟ್‌ಗಳ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಅವರನ್ನು ಅಸಮರ್ಪಕವಾಗಿ ಸ್ಪರ್ಶಿಸಿದ, ಮೈ ಸವರಿದ, ಮುಜುಗರ ಉಂಟುಮಾಡುವ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿದ, ಟೂರ್ನಮೆಂಟ್ ಸಂದರ್ಭದಲ್ಲಿ ಗಾಯಗೊಂಡರೆ ಸಂಸ್ಥೆಯೇ ಚಿಕಿತ್ಸೆ ವೆಚ್ಚ ಭರಿಸುವುದಕ್ಕೆ ಪ್ರತಿಯಾಗಿ ಲೈಂಗಿಕ ಸುಖದ ಬೇಡಿಕೆ ಇರಿಸಿದ ಆರೋಪಗಳನ್ನು ದಾಖಲಿಸಲಾಗಿದೆ.
ಮತ್ತಷ್ಟು ಓದಿ: ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ 1983ರ ವಿಶ್ವಕಪ್ ವಿಜೇತರ ಹೇಳಿಕೆ; ನನಗೂ ಅದಕ್ಕೂ ಸಂಬಂಧವಿಲ್ಲ: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ
ಡಯಟೀಷಿಯನ್ ಅಥವಾ ಕೋಚ್ ಅನುಮೋದನೆ ನೀಡದ ಅಪರಿಚಿತ ಖಾದ್ಯವನ್ನು ತಿನ್ನಲು ನೀಡಿದ್ದರು, ಅಪ್ರಾಪ್ತ ವಯಸ್ಸಿನ ಆಟಗಾರ್ತಿಯ ಎದೆ ಸುತ್ತಲೂ ಕೈಗಳನ್ನು ಆಡಿಸಿದ್ದರು ಮತ್ತು ಆಕೆಯನ್ನು ದುರುಗುಟ್ಟಿ ನೋಡುತ್ತಿದ್ದರು ಎಂದು ಕೂಡ ಎಫ್ಐಆರ್ ಹೇಳಿದೆ.
ಕಳೆದ ಏಪ್ರಿಲ್ 21ರಂದು ದಿಲ್ಲಿಯ ಕನ್ನೌಟ್ ಪ್ಲೇಸ್ ಪೊಲೀಸ್ ಠಾಣೆಗೆ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಆಧಾರದಲ್ಲಿ ಈ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಕುಸ್ತಿಪಟುವಿನ ತಂದೆ ಕೂಡ ಏಪ್ರಿಲ್ 28ರಂದು ಪ್ರತ್ಯೇಕ ದೂರು ನೀಡಿದ್ದು, ಎರಡೂ ಎಫ್‌ಐಆರ್‌ಗಳಿಂದ ಒಟ್ಟು ಏಳು ಕುಸ್ತಿಪಟುಗಳ ಆರೋಪ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ