Wrestlers Protest: ನನ್ನ ಮೇಲಿರುವ ಆರೋಪಗಳಲ್ಲಿ ಒಂದು ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್

ನನ್ನ ಮೇಲಿರುವ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣೆ ಹೇಳಿದ್ದಾರೆ.

Wrestlers Protest: ನನ್ನ ಮೇಲಿರುವ ಆರೋಪಗಳಲ್ಲಿ ಒಂದು ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್
ಬ್ರಿಜ್ ಭೂಷಣ್
Follow us
ನಯನಾ ರಾಜೀವ್
|

Updated on:May 07, 2023 | 12:28 PM

ನನ್ನ ಮೇಲಿರುವ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣೆ ಹೇಳಿದ್ದಾರೆ. ಕುಸ್ತಿಪಟುಗಳ ಪ್ರತಿಭಟನೆ ವಾರದ ನಂತರವೂ ಮುಂದುವರೆದಿದೆ, ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು  ಜಂತರ್​-ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕುಸ್ತಿಪಟುಗಳ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದು ರೈತರು ಕುಸ್ತಿ ಪಟುಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಜಂತರ್ ಮಂತರ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆರ್ ಎಎಫ್, ಸಿಆರ್ ಪಿಎಫ್ ಮತ್ತು ದೆಹಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾರಿಕೇಡ್‌ ಹಾಕಲಾಗಿದೆ. ಇದರೊಂದಿಗೆ ದೆಹಲಿಯ ಗಡಿ ಪ್ರದೇಶಗಳಲ್ಲಿ ಭದ್ರತಾ ತಪಾಸಣೆ ಮತ್ತು ಗಸ್ತು ಕೂಡ ಹೆಚ್ಚಿಸಲಾಗಿದೆ.

ಮತ್ತಷ್ಟು ಓದಿ: Wrestlers Protest: ಜಂತರ್​ ಮಂತರ್​ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ರೈತರ ಬೆಂಬಲ

ದೆಹಲಿ ಪೊಲೀಸರ ಪ್ರಕಾರ, ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಸಂಪೂರ್ಣ ಸಿದ್ಧತೆಗಳನ್ನು ಮಾಡಲಾಗಿದೆ. ಈ ರೀತಿ ಮಾಡುವವರನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು. ಗಡಿಭಾಗದಲ್ಲಿ ವಾಹನಗಳನ್ನು ತಪಾಸಣೆ ನಡೆಸಿ ಅದರಲ್ಲಿ ಟೆಂಟ್ ಅಥವಾ ಅಂತಹ ವಸ್ತು ಕಂಡುಬಂದಲ್ಲಿ ವಶಪಡಿಸಿಕೊಳ್ಳಲಾಗುವುದು. ಇದರೊಂದಿಗೆ ವಾಹನವನ್ನು ದೆಹಲಿ ಪ್ರವೇಶಿಸಲು ಸಹ ಅನುಮತಿಸಲಾಗುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸರನ್ನೂ ನಿಯೋಜಿಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Sun, 7 May 23