Wrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ
ನೂತನ ಸಂಸತ್(New Parliament)ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿನೇಶ್ ಫೋಗಟ್,ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಕೆಲವು ಕುಸ್ತಿಪಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೂತನ ಸಂಸತ್(New Parliament)ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿನೇಶ್ ಫೋಗಟ್,ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಕೆಲವು ಕುಸ್ತಿಪಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಅಥ್ಲೀಟ್‌ಗಳು ಮಹಿಳಾ ಸಮ್ಮಾನ್ ಮಹಾಪಂಚಾಯತ್ ಆಯೋಜಿಸಿದ್ದರು. ಬ್ರಿಜ್ ಭೂಷಣ್ ಸಿಂಗ್ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಅವರ ಬಂಧನಕ್ಕೆ ಒತ್ತಾಯಿಸಿ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಆರೋಪಗಳು ರಾಷ್ಟ್ರವ್ಯಾಪಿ ವಿವಾದವನ್ನು ಎಬ್ಬಿಸಿದ್ದು, ಅವರ ಬಂಧನಕ್ಕೆ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಯಿತು.
ಪೊಲೀಸರು ಕುಸ್ತಿಪಟುಗಳ ಮುಷ್ಕರವನ್ನು ಅಂತ್ಯಗೊಳಿಸಿದರು, ಜಂತರ್ ಮಂತರ್‌ನಿಂದ ಟೆಂಟ್‌ಗಳನ್ನು ತೆಗೆದುಹಾಕಿದರು. ಇಂದು ನೂತನ ಸಂಸತ್ ಕಟ್ಟಡದ ಎದುರು ಮಹಿಳಾ ಮಹಾ ಪಂಚಾಯತ್ ನಡೆಸಲು ಕುಸ್ತಿಪಟುಗಳು ನಿರ್ಧರಿಸಿದ್ದು ಮೆರವಣಿಗೆಗೆ ಸಿದ್ದತೆ ನಡೆಸಿದ್ದಾರೆ. ಆದರೆ ಇದಕ್ಕೆ ಒಪ್ಪದ ದೆಹಲಿ ಪೊಲೀಸರು ಮಾರ್ಗದುದ್ದಕ್ಕೂ ಬ್ಯಾರಿಕೇಡ್‌ಗಳನ್ನು ಹಾಕಿ ಅಡ್ಡಗಟ್ಟಿದ್ದಾರೆ.
ಮತ್ತಷ್ಟು ಓದಿ: ದೇವರು ನಮ್ಮನ್ನು ಪರೀಕ್ಷಿಸುತ್ತಿದ್ದಾರೆ; ಜಡಿ ಮಳೆ,ಸುಡು ಬಿಸಿಲು ಏನೇ ಬರಲಿ ನಾವು ಹಿಂದೆ ಸರಿಯುವುದಿಲ್ಲ: ಬಜರಂಗ್ ಪುನಿಯಾ
ಕಳೆದ 35 ದಿನಗಳಿಂದ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳು ಕೇಂದ್ರದ ಮಧ್ಯಸ್ತಿಕೆ ಪ್ರಸ್ತಾಪಗಳಿಗೆ ಒಪ್ಪದೇ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ. ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಕುಸ್ತಿ ಫಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಬಂಧಸಿಬೇಕೆಂದು ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.
#WATCH | Delhi: Security personnel stop & detain protesting wrestlers as they try to march towards the new Parliament from their site of protest at Jantar Mantar.
Wrestlers are trying to march towards the new Parliament as they want to hold a women’s Maha Panchayat in front of… pic.twitter.com/3vfTNi0rXl
— ANI (@ANI) May 28, 2023
ಇಂದಿನ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ರೈತರು ಮತ್ತು ವಿದ್ಯಾರ್ಥಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಖಾಪ್ ಪಂಚಾಯತ್ ಸದಸ್ಯರು ಮಹಿಳಾ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಆಗಮಿಸುತ್ತಿದ್ದು, ದೆಹಲಿ ಪೊಲೀಸರು ಹೀಗಾಗಲೇ ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ತಡರಾತ್ರಿ ಸಭೆ ಬಳಿಕ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಎರಡು ಬಾರಿಯ ವಿಶ್ವಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತ ವಿನೇಶ್ ಫೋಗತ್, ಆರೋಪಿಯನ್ನು ಬಂಧಿಸಬೇಕು ಎಂಬ ನಮ್ಮ ಪುಮುಖ ಬೇಡಿಕೆಗೆ ಸರ್ಕಾರ ಒಪ್ಪಿಕೊಳ್ಳದ ಕಾರಣ ಮಾತುಕತೆ ವಿಫಲವಾಗಿದೆ. ಧರಣಿ ನಿಲ್ಲಿಸುವಂತೆ ನಮ್ಮ ಮೇಲೆ ಭಾರಿ ಒತ್ತಡ ಇದೆ. ಆದರೆ ತಾತ್ವಿಕ ಅಂತ್ಯ ಕಾಣಿಸುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ. ಅವರೊಟ್ಟಿಗೆ ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸಹ ಇದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ