Wrestlers Protest: ಬ್ರಿಜ್​ ಭೂಷಣ್​ರನ್ನು ಬಂಧಿಸಲು ಸಾಕಷ್ಟು ಸಾಕ್ಷ್ಯಗಳಿಲ್ಲ: ಪೊಲೀಸ್ ಮೂಲಗಳು

|

Updated on: May 31, 2023 | 2:32 PM

ಡಬ್ಲ್ಯೂಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಲು ತಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿಲ್ಲ ಮತ್ತು ಅವರ ವಿರುದ್ಧ ಸಾಕ್ಷ್ಯ ಸಂಗ್ರಹಿಸಲು ಸಾಧ್ಯವಾಗದಿದ್ದರೆ 15 ದಿನಗಳಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸುವುದಾಗಿ ಪೊಲೀಸ್ ಮೂಲಗಳು ಬುಧವಾರ ಹೇಳಿದ್ದಾರೆ.

Wrestlers Protest: ಬ್ರಿಜ್​ ಭೂಷಣ್​ರನ್ನು ಬಂಧಿಸಲು ಸಾಕಷ್ಟು ಸಾಕ್ಷ್ಯಗಳಿಲ್ಲ: ಪೊಲೀಸ್ ಮೂಲಗಳು
ಬ್ರಿಜ್ ಭೂಷಣ್
Follow us on

ಡಬ್ಲ್ಯೂಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಲು ತಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿಲ್ಲ ಮತ್ತು ಅವರ ವಿರುದ್ಧ ಸಾಕ್ಷ್ಯ ಸಂಗ್ರಹಿಸಲು ಸಾಧ್ಯವಾಗದಿದ್ದರೆ 15 ದಿನಗಳಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸುವುದಾಗಿ ಪೊಲೀಸ್ ಮೂಲಗಳು ಬುಧವಾರ ಹೇಳಿದ್ದಾರೆ. ಬ್ರಿಜ್​ ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಪ್ರತಿಭಟನೆಯಲ್ಲಿ ಪ್ರಮುಖರಾಗಿದ್ದಾರೆ. ದೆಹಲಿ ಪೊಲೀಸರು ತನ್ನ ವರದಿಯನ್ನು ವರದಿ ಅಥವಾ ಚಾರ್ಜ್‌ಶೀಟ್ ರೂಪದಲ್ಲಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಕುಸ್ತಿಪಟುಗಳು ಸರ್ಕಾರಕ್ಕೆ 5 ದಿನಗಳ ಗಡುವು ನೀಡಿದ್ದಾರೆ ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮತ್ತು ಸಿಂಗ್ ಅವರನ್ನು ಡಬ್ಲ್ಯುಎಫ್‌ಐ ಮುಖ್ಯಸ್ಥ ಸ್ಥಾನದಿಂದ ವಜಾಗೊಳಿಸದಿದ್ದರೆ ತಮ್ಮ ಪದಕಗಳನ್ನು ಗಂಗಾನದಿಯಲ್ಲಿ ತೇಲಿಬಿಡುವುದಾಗಿ ಹೇಳಿದ್ದಾರೆ.

ವಾಸ್ತವವಾಗಿ ಅವರು ಮಂಗಳವಾರವೇ ತಮ್ಮ ಪದಕಗಳನ್ನು ನೀರಿಗೆ ಹಾಕಲು ಹರಿದ್ವಾರಕ್ಕೆ ಹೋಗಿದ್ದರು, ಈ ನಿರ್ಧಾರವನ್ನು ಮುಂದೂಡಿದ್ದಾರೆ.
ಕುಸ್ತಿಪಟುಗಳ ಹೇಳಿಕೆಯನ್ನು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ರೈತರ ಬೆಂಬಲ, ಜೂನ್​ 1 ರಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ದೇಶವ್ಯಾಪಿ ಪ್ರತಿಭಟನೆ

ಸಿಂಗ್ ಸಾಕ್ಷಿಯ ಮೇಲೆ ಪ್ರಭಾವ ಬೀರುತ್ತಿಲ್ಲ ಅಥವಾ ಸಾಕ್ಷ್ಯವನ್ನು ನಾಶಪಡಿಸಲು ಪ್ರಯತ್ನಿಸುತ್ತಿಲ್ಲ, ಆದ್ದರಿಂದ ಅವರ ಬಂಧನಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಡಿ 

Published On - 2:22 pm, Wed, 31 May 23