ಮೀಟೂ ಪ್ರತಿಭಟನೆ: ನಮಗೆ ಬೆಂಬಲ ನೀಡಿ ಎಂದು ಕುಸ್ತಿಪಟುಗಳಿಂದ ರಾಜಕೀಯ ಪಕ್ಷಗಳಿಗೆ ಕರೆ

#MeToo Protest ಈ ಬಾರಿ ಯಾರನ್ನೂ ತಿರಸ್ಕರಿಸುವುದಿಲ್ಲ. ನಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು ಎಂದಿದ್ದಾರೆ ಕುಸ್ತಿಪಟುಗಳು. ಜನವರಿಯಲ್ಲಿಪ್ರತಿಭಟನಾಕಾರರು ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರನ್ನು ಕ್ರೀಡಾಪಟುಗಳ ಪ್ರತಿಭಟನೆ ವೇದಿಕೆಯಿಂದ ಹೊರ ಹೋಗಲು ಹೇಳಿದ್ದರು.

ಮೀಟೂ ಪ್ರತಿಭಟನೆ: ನಮಗೆ ಬೆಂಬಲ ನೀಡಿ ಎಂದು ಕುಸ್ತಿಪಟುಗಳಿಂದ ರಾಜಕೀಯ ಪಕ್ಷಗಳಿಗೆ ಕರೆ
ಜಂತರ್ ಮಂತರ್​​ನಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು
Follow us
ರಶ್ಮಿ ಕಲ್ಲಕಟ್ಟ
|

Updated on:Apr 24, 2023 | 1:44 PM

ದೆಹಲಿ:ಭಾರತದ ಕುಸ್ತಿ ಒಕ್ಕೂಟದ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರತದ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಮೀಟೂ ಪ್ರತಿಭಟನೆಯನ್ನು(#MeToo Protest) ಪುನರಾರಂಭಿಸಿದ್ದಾರೆ. ಆರೋಪಗಳ ಕುರಿತು ಸಮಿತಿಯು ತನಿಖೆ ನಡೆಸುವುದಾಗಿ ಭರವಸೆ ನೀಡಿದ ನಂತರ ಈ ವರ್ಷದ ಆರಂಭದಲ್ಲಿ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡ ಕುಸ್ತಿಪಟುಗಳು ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಲ್ಲಿ ಇರುವುದಾಗಿ ಪಟ್ಟು ಹಿಡಿದಿದ್ದಾರೆ.ನಾವು ಯಾರನ್ನೂ ಕಣ್ಣು ಮುಚ್ಚಿ ನಂಬುವುದಿಲ್ಲ. ಕಳೆದ ಬಾರಿ ನಮ್ಮ ದಾರಿ ತಪ್ಪಿಸಲಾಗಿತ್ತು. ಈ ಬಾರಿ ಈ ಪ್ರಕರಣದಲ್ಲಿ ರಾಜಕೀಯವಿಲ್ಲ ಎಂದ  ನಾವು ಭಾವಿಸುತ್ತೇವೆಎಂದು ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.

ಈ ಬಾರಿ ಯಾರನ್ನೂ ತಿರಸ್ಕರಿಸುವುದಿಲ್ಲ. ನಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು ಎಂದಿದ್ದಾರೆ ಕುಸ್ತಿಪಟುಗಳು. ಜನವರಿಯಲ್ಲಿಪ್ರತಿಭಟನಾಕಾರರು ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರನ್ನು ಕ್ರೀಡಾಪಟುಗಳ ಪ್ರತಿಭಟನೆ ವೇದಿಕೆಯಿಂದ ಹೊರ ಹೋಗಲು ಹೇಳಿದ್ದರು.

ಈ ಬಾರಿ, ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ. ಆಶ್ವಾಸನೆ ನೀಡಿದ್ದರಿಂದ ನಾವು ಜನವರಿಯಲ್ಲಿ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೆವು. ಅದು ಸುಳ್ಳು ಆಶ್ವಾಸನೆಯಾಗಿತ್ತು ಎಂದು ಅವರು ಹೇಳಿದ್ದಾರೆ.

“ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ ಎಂದು ಫುಟ್‌ಪಾತ್‌ನಲ್ಲಿಯೇ ಇಡೀ ರಾತ್ರಿ ಕಳೆದ ಫೋಗಟ್ ಹೇಳಿದ್ದಾರೆ.

ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ ಎಂದಿದ್ದಾರೆ ಫೋಗಟ್.

ಜನವರಿಯಲ್ಲಿ, ಕ್ರೀಡಾ ಸಚಿವಾಲಯವು ದೂರುಗಳ ತನಿಖೆಗಾಗಿ ಒಲಿಂಪಿಕ್ ಪದಕ ವಿಜೇತ ಬಾಕ್ಸರ್  ಮೇರಿ ಕೋಮ್ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ರಚಿಸಿತು. ಒಂದು ತಿಂಗಳೊಳಗೆ ಈ ಬಗ್ಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿತ್ತು. ಸಮಿತಿಯು ನೀಡಿದ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸದಿರುವ ಬಗ್ಗೆ ಕುಸ್ತಿಪಟು ಸಾಕ್ಷಿ ಮಲಿಕ್ ಬೇಸರ ವ್ಯಕ್ತಪಡಿಸಿದರು.

ಮಹಿಳಾ ಕುಸ್ತಿಪಟುಗಳ ಹೇಳಿಕೆಗಳನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ಇದು ಸೂಕ್ಷ್ಮ ವಿಷಯವಾಗಿದೆ, ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ. ದೂರುದಾರರ ಹೆಸರುಗಳನ್ನು ಸೋರಿಕೆ ಮಾಡಬಾರದು ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಸರ್ಕಾರದ ಸಮಿತಿಯು ತನ್ನ ವರದಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಸಲ್ಲಿಸಿದೆ. ಆದರೆ ಸಚಿವಾಲಯವು ಇದನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಿಲ್ಲ. ಆದಾಗ್ಯೂ, ಹಲವಾರು ವಿಚಾರಣೆಗಳ ನಂತರ ಕುಸ್ತಿಪಟುಗಳು WFI ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:  Tamil Nadu: ಮದುವೆ ಹಾಲ್​ನಿಂದ ಕ್ರೀಡಾಂಗಣದವರೆಗೆ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಪೂರೈಕೆಗೆ ಸ್ಟಾಲಿನ್ ಸರ್ಕಾರ ಅನುಮತಿ

ಹಲವಾರು ಕುಸ್ತಿಪಟುಗಳು ಜನವರಿ 18 ರಂದು ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳನ್ನು ಮಾಡಿ ಪ್ರತಿಭಟನೆ ನಡೆಸಿದ್ದರು. ಗಣ್ಯ ಕುಸ್ತಿಪಟುಗಳು ಸರ್ಕಾರದೊಂದಿಗಿನ ನಡೆಸಿದ ಮಾತುಕತೆಯಿಂದ ತೃಪ್ತರಾಗಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ತಾವು ಕುಸ್ತಿ ಕಣಕ್ಕಿಳಿಯುವುದಿಲ್ಲ ಎಂದು ಅವರು ಹೇಳಿದ್ದರು.

ಮೇ 7 ರಂದು ನಡೆಯಲಿರುವ ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ.ಸಿಂಗ್ ಸತತವಾಗಿ ಮೂರು ನಾಲ್ಕು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಸ್ಪೋರ್ಟ್ಸ್ ಕೋಡ್ ಪ್ರಕಾರ WFI ಮುಖ್ಯಸ್ಥರಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ಅವರು ಉನ್ನತ ಹುದ್ದೆಗೆ ಸ್ಪರ್ಧಿಸಲು ಅನರ್ಹರಾಗಿದ್ದಾರೆ.

ಡಬ್ಲ್ಯುಎಫ್‌ ಅಧ್ಯಕ್ಷರ ವಿರುದ್ಧ ದೆಹಲಿ ಪೊಲೀಸರು ಏಳು ದೂರುಗಳನ್ನು ದಾಖಲಿಸಿದ್ದಾರೆ, ಆದರೆ ಎಫ್‌ಐಆರ್ ದಾಖಲಾಗಿಲ್ಲ. ಖಚಿತವಾದ ಸಾಕ್ಷ್ಯಾಧಾರಗಳು ಬೆಳಕಿಗೆ ಬಂದ ನಂತರ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹಿರಿಯ ಪೋಲೀಸ್ ತಿಳಿಸಿದ್ದಾರೆ. ವಿಚಾರಣೆಯ ಭಾಗವಾಗಿ, ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳ ಬಗ್ಗೆ ಪರಿಶೀಲಿಸಲು ನಾವು ಕ್ರೀಡಾ ಸಚಿವಾಲಯ ರಚಿಸಿರುವ ತನಿಖಾ ಸಮಿತಿಯಿಂದ ವರದಿಯನ್ನು ಕೇಳಿದ್ದೇವೆ ಎಂದು ಅವರು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Mon, 24 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್