Wrestlers Protest: ಇನ್ಮುಂದೆ ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ ಏನಿದ್ರೂ ಕೋರ್ಟ್​ನಲ್ಲಿ ಹೋರಾಟ ಎಂದ ಕುಸ್ತಿಪಟುಗಳು

ಇನ್ನುಮುಂದೆ ಬೀದಿಗಳಿದು ಪ್ರತಿಭಟನೆ ಮಾಡುವುದಿಲ್ಲ, ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕುಸ್ತಿಪಟುಗಳು(Wrestlers) ಹೇಳಿಕೆ ನೀಡಿದ್ದಾರೆ.

Wrestlers Protest: ಇನ್ಮುಂದೆ ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ ಏನಿದ್ರೂ ಕೋರ್ಟ್​ನಲ್ಲಿ ಹೋರಾಟ ಎಂದ ಕುಸ್ತಿಪಟುಗಳು
ಕುಸ್ತಿಪಟುಗಳುImage Credit source: Outlook
Follow us
ನಯನಾ ರಾಜೀವ್
|

Updated on: Jun 26, 2023 | 8:19 AM

ಇನ್ನುಮುಂದೆ ಬೀದಿಗಳಿದು ಪ್ರತಿಭಟನೆ ಮಾಡುವುದಿಲ್ಲ, ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕುಸ್ತಿಪಟುಗಳು(Wrestlers) ಹೇಳಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಹಾಗೂ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಒಂದು ತಿಂಗಳುಗಳ ಕಾಲ ದೆಹಲಿಯ ಜಂತರ್ ಮಂತರ್ ಎದುರು ಪ್ರತಿಭಟನೆ ನಡೆಸಿದ್ದರು.

ಇದಾದ ಬಳಿಕ ಪೊಲೀಸರು ಅಲ್ಲಿ ಪ್ರತಿಭಟನೆ ಮಾಡಲು ಅನುಮತಿಯನ್ನು ನಿರಾಕರಿಸಿದ್ದರು. ಅಮಿತ್ ಶಾ ಅವರೊಂದಿಗೆ ಎರಡು ಸಭೆಗಳನ್ನು ನಡೆಸಿ ಅದು ವಿಫಲವಾಗಿತ್ತು. ಜತೆಗೆ ಸಚಿವ ಅನುರಾಗ್ ಠಾಕೂರ್ ಅವರ ಜತೆಯೂ ಸಭೆ ನಡೆಸಿದ್ದರು. ಇದೀಗ ತಮ್ಮ ಚಳವಳಿಯನ್ನು ನ್ಯಾಯಾಲಯದಲ್ಲಿ ಮಾಡುವುದಾಗಿ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಒಂದೇ ರೀತಿಯ ಟ್ವೀಟ್​ಗಳನ್ನು ಮಾಡಿದ್ದಾರೆ.

ಮತ್ತಷ್ಟು ಓದಿ: Wrestlers Protest: ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾದ ಕುಸ್ತಿಪಟುಗಳು

ಈ ಪ್ರಕರಣದಲ್ಲಿ ನಮಗೆ ನ್ಯಾಯ ಸಿಗುವವರೆಗೂ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆಯುತ್ತದೆ ಆದರೆ ಹೋರಾಟ ರಸ್ತೆಯಲ್ಲಲ್ಲ, ನ್ಯಾಯಾಲಯದಲ್ಲಿ ಎಂದು ಹೇಳಿದ್ದಾರೆ.

ಸರ್ಕಾರ ಭಾರತೀಯ ಕುಸ್ತಿ ಒಕ್ಕೂಟದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ, ಸರ್ಕಾರ ನೀಡಿದ ಭರವಸೆಯಂತೆ ಪ್ರಕ್ರಿಯೆ ಆರಂಭಗೊಂಡಿದೆ.

ಜುಲೈ 11ರಂದು ಚುನಾವಣೆ ನಡೆಯಲಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಈ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ವಿನೇಶ್‌ ಫೋಘಟ್ ಮತ್ತು ಸಾಕ್ಷಿ ಮಲ್ಲಿಕ್ ನಾವು ಸಾಮಾಜಿಕ ಜಾಲತಾಣಗಳಿಂದ ಬಿಡುವು ಪಡೆಯುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ