Delhi Court: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್​​ಗೆ ಜಾಮೀನು

|

Updated on: Jul 20, 2023 | 5:20 PM

ಡಬ್ಲ್ಯುಎಫ್‌ಐ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಇಂದು ದೆಹಲಿ ಕೋರ್ಟ್​ ಜಾಮೀನು ನೀಡಿದೆ.

Delhi Court: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್​​ಗೆ ಜಾಮೀನು
ಬ್ರಿಜ್ ಭೂಷಣ್ ಶರಣ್ ಸಿಂಗ್
Follow us on

ದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ)  ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಇಂದು (ಜು.20) ದೆಹಲಿ ಕೋರ್ಟ್​ ಜಾಮೀನು ನೀಡಿದೆ. ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಮಾಜಿ WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ವಿನೋದ್ ತೋಮರ್ ಅವರಿಗೆ 25 ಸಾವಿರ ರೂ. ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ತೊರೆಯಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಮತ್ತು ಸಾಕ್ಷ್ಯಗಳನ್ನು ನಾಶ ಮಾಡಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.28ಕ್ಕೆ ವಿಚಾರಣೆ ನಡೆಸಲಿದೆ.

ಜುಲೈ.18ರಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ನ್ಯಾಯಲಯ 25 ಸಾವಿರ ರೂ ವೈಯಕ್ತಿಕ ಬಾಂಡ್ ಮೇಲೆ 2 ದಿನದ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.  ಇದೀಗ ಅವರಿಗೆ ಮುಂದಿನ ವಿಚಾರಣೆ ವರೆಗೆ ಜಾಮೀನು ನೀಡಲಾಗಿದೆ. 66 ವರ್ಷದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಬಿಜೆಪಿಯಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದು ಮತ್ತು 12 ವರ್ಷಗಳ ಕಾಲ ಕುಸ್ತಿ ಸಂಸ್ಥೆಯ ಅಧ್ಯಕ್ಷರಾಗಿಯು ಕೆಲಸ ಮಾಡಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2 ತಿಂಗಳನಿಂದ ಪ್ರತಿಭಟನೆ ನಡೆಯುತ್ತಲೇ ಇತ್ತು. ಕೊನೆಗೆ ದೆಹಲಿ ಪೊಲೀಸ್​​ ಪ್ರಕರಣ ದಾಖಲಿಸಿಕೊಂಡು, ದೆಹಲಿ ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ,​ ಇನ್ನೂ ಜಾಮೀನು ಮಂಜೂರು ಮಾಡುದಕ್ಕೂ ಮುನ್ನ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ವಿನೋದ್​​ ತೋಮರ್ ಪರ ವಾದ ಮಂಡಿಸಿದ ವಕೀಲ ರಾಜೀವ್ ಮೋಹನ್ ಹಾಗೂ ವಕೀಲ ರೆಹಾನ್ ಖಾನ್ ಅವರು, ಬಂಧನವಿಲ್ಲದೆ ಚಾರ್ಜ್ ಶೀಟ್ ಸಲ್ಲಿಸಿದ್ದು, ತನಿಖೆಗೆ ಸಹಕಾರ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್ ಬಗ್ಗೆ ದೆಹಲಿ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಹೇಳಿರುವುದೇನು?

ಈ ಬಗ್ಗೆ ದೆಹಲಿ ಪೊಲೀಸರು ಕೂಡ ಆರೋಪಿಗಳ ಬಗ್ಗೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ತನಿಖೆಗೆ ಸಹಕಾರ ನೀಡುತ್ತಿದ್ದು, ಸಮನ್ಸ್​​​​ ನೀಡಿದ ನಂತರ ಕೋರ್ಟ್​ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Thu, 20 July 23