
ದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಬ್ಲ್ಯುಎಫ್ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (brij bhushan sharan singh) ಅವರಿಗೆ ದೆಹಲಿ ಕೋರ್ಟ್ ಇಂದು (ಜು.18) ಮಧ್ಯಂತರ ಜಾಮೀನು ನೀಡಿದೆ. ತಲಾ 25,000 ರೂಪಾಯಿ ಬಾಂಡ್ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಬ್ರಿಜ್ ಭೂಷಣ್ ಅವರ ವಿರುದ್ಧ ಸಲ್ಲಿಸಲಾಗಿದ್ದ ಚಾರ್ಜ್ಶೀಟ್ನಲ್ಲಿ ಮೌಖಿಕ ವರದಿ ನೀಡಿದ್ದಾರೆ. ಮತ್ತು ಕುಸ್ತಿಪಟುಗಳು ನ್ಯಾಯಾಲಯದಲ್ಲಿ ಮಾಧ್ಯಮ ವಿಚಾರಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯವು ಇದಕ್ಕೆ ಸಂಬಂಧಿಸಿದಂತೆ ಸೂಕ್ತ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.
ಇನ್ನೂ ಡಬ್ಲ್ಯುಎಫ್ಐನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ಗೂ ಮಧ್ಯಂತರ ಜಾಮೀನು ನೀಡಲಾಗಿದೆ. ಈ ಜಾಮೀನು ಕುರಿತು ನ್ಯಾಯಾಲಯವು ಗುರುವಾರ ವಿಚಾರಣೆ ನಡೆಸಲಿದೆ. ಕೋರ್ಟ್ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಪರ ವಾದ ಮಾಡಿದ ವಕೀಲರು, ಸುಮಾರು ಆರು ಮಹಿಳಾ ಕುಸ್ತಿಪಟುಗಳು ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಜೂನ್ 2 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ಎರಡು ಎಫ್ಐಆರ್ ಮತ್ತು 10 ದೂರುಗಳನ್ನು ದಾಖಲಿಸಿದ್ದಾರೆ. ಈ ದೂರಿನಲ್ಲಿ ಕುಸ್ತಿಪಟುಗಳ ಎದೆಯ ಮೇಲೆ ಕೈ ಹಾಕುವುದು, ಬೆನ್ನು ಸವರುವುದು ಮತ್ತು ಅವರನ್ನು ಹಿಂಬಾಲಿಸುವುದು ಇತ್ಯಾದಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೊಲೆ ಯತ್ನ, ಡಕಾಯಿತಿ..ಹಲವು ಕ್ರಿಮಿನಲ್ ಕೇಸ್…ಕುಸ್ತಿ ಒಕ್ಕೂಟದ ಮುಖ್ಯಸ್ಥನ ವಿರುದ್ಧವೇ ಬೀದಿಗಿಳಿದ ಕುಸ್ತಿಪಟುಗಳು
ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ನಗರ ಪೊಲೀಸರು ಜೂನ್ 15 ರಂದು ಸೆಕ್ಷನ್ 354 (ಹೆಣ್ಣಿನ ನಮ್ರತೆಗೆ ಆಕ್ರೋಶ ವ್ಯಕ್ತಪಡಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ), 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವುದು) ಮತ್ತು ಆರೋಪಪಟ್ಟಿ ಸಲ್ಲಿಸಿದ್ದರು. IPC ಯ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮ್ಮ ಮೇಲಿರುವ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:59 pm, Tue, 18 July 23