AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು

ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ.

ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು
ಬ್ರಿಜ್ ಭೂಷನ್ ಶರಣ್ ಸಿಂಗ್
ನಯನಾ ರಾಜೀವ್
|

Updated on:Aug 24, 2023 | 12:30 PM

Share

ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಕುಸ್ತಿ ಆಟಗಾರರಿಗೆ ದೊಡ್ಡ ಹೊಡೆತ ಎಂದೇ ಹೇಳಬಹುದು, ವಾಸ್ತವವಾಗಿ, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮೇ 30 ರಂದು ಭಾರತೀಯ ಕುಸ್ತಿ ಫೆಡರೇಶನ್‌ಗೆ ಪತ್ರ ಬರೆದಿತ್ತು,.

ಮುಂದಿನ 45 ದಿನಗಳಲ್ಲಿ (ಜುಲೈ 15 ರೊಳಗೆ) ಭಾರತದ ಕುಸ್ತಿ ಫೆಡರೇಶನ್​ಗೆ ಚುನಾವಣೆ ನಡೆಯದಿದ್ದರೆ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು, ಮಹಿಳಾ ಕುಸ್ತಿಪಟುಗಳು ಹಿಂದಿನ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದವು. ಬಳಿಕ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಭಾರತೀಯ ಕುಸ್ತಿ ಫೆಡರೇಷನ್ ಚುನಾವಣೆ ಜುಲೈ 11 ರಂದು ನಡೆಯಬೇಕಿತ್ತು.

ಮತ್ತಷ್ಟು ಓದಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್​ಗೆ ಮಧ್ಯಂತರ ಜಾಮೀನು

ಅಸ್ಸಾಂ ಕುಸ್ತಿ ಫೆಡರೇಷನ್ ಅದರ ಮಾನ್ಯತೆಗೆ ಸಂಬಂಧಿಸಿದಂತೆ ಅಸ್ಸಾಂ ಹೈಕೋರ್ಟ್​ನಿಂದ ಚುನಾವಣೆಗೆ ತಡೆಯಾಜ್ಞೆ ತಂದಿತ್ತು. ಈ ವಿಚಾರದ ಬಳಿಕ ಚುನಾವಣಾಧಿಕಾರಿ ಆಗಸ್ಟ್​ 12ಎಂದು ಭಾರತೀಯ ಕುಸ್ತಿ ಫೆಡರೇಷನ್​ಗೆ ಚುನಾವಣೆ ದಿನಾಂಕವನ್ನು ನಿಗದಿಪಡಿಸಿದ್ದರು. ಆದರೆ ಆಗಸ್ಟ್​ 11ರಂದು ಹರ್ಯಾಣ ಹೈಕೋರ್ಟ್​ ಚುನಾವಣೆಗೆ ತಡೆ ನೀಡಿತ್ತು. ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:16 pm, Thu, 24 August 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!