AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮುನಾ ಎಕ್ಸ್​ಪ್ರೆಸ್​ ವೇ ಮರುನಾಮಕರಣಕ್ಕೆ ಸಿದ್ಧವಾಗಿರುವ ಯೋಗಿ ಸರ್ಕಾರ; ಮಾಜಿ ಪ್ರಧಾನಿಯ ಹೆಸರಿಡಲು ನಿರ್ಧಾರ !

Yamuna Expressway: ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಸ್ಥಾಪನೆ ಮಾಡುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಹಲವು ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ.

ಯಮುನಾ ಎಕ್ಸ್​ಪ್ರೆಸ್​ ವೇ ಮರುನಾಮಕರಣಕ್ಕೆ ಸಿದ್ಧವಾಗಿರುವ ಯೋಗಿ ಸರ್ಕಾರ; ಮಾಜಿ ಪ್ರಧಾನಿಯ ಹೆಸರಿಡಲು ನಿರ್ಧಾರ !
ಯಮುನಾ ಎಕ್ಸ್​ಪ್ರೆಸ್​ ವೇ
TV9 Web
| Edited By: |

Updated on: Nov 23, 2021 | 9:18 AM

Share

ಉತ್ತರಪ್ರದೇಶ ಅದೆಷ್ಟೋ ಪ್ರದೇಶಗಳಿಗೆ ಮರುನಾಮಕರಣ ಮಾಡಿದೆ. ನದಿಗಳ, ಜಿಲ್ಲೆಗಳ ಹೆಸರನ್ನು ಬದಲು ಮಾಡಿದೆ. ಹಾಗೇ ಇದೀಗ ಯಮುನಾ ಎಕ್ಸ್​​ಪ್ರೆಸ್​ ವೇ(Yamuna Expressway) ಗೂ ಕೂಡ ಮರುನಾಮಕರಣವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಎಕ್ಸ್​ಪ್ರೆಸ್​ ವೇಗೆ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಹೆಸರನ್ನು ಇಡಲು ಸರ್ಕಾರ ಮುಂದಾಗಿದೆ. ಅದೂ ಕೂಡ ನವೆಂಬರ್​ 25ರಂದು ಗೌತಮ ಬುದ್ಧ ನಗರದ ಜೇವಾರ್​​ನಲ್ಲಿ ನಡೆಯಲಿರುವ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಡಿಗಲ್ಲು ಸ್ಥಾಪನೆ ಕಾರ್ಯದಲ್ಲಿ ಈ ಘೋಷಣೆಯಾಗಲಿದೆ ಎಂದೂ ತಿಳಿದುಬಂದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. 

ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಸ್ಥಾಪನೆ ಮಾಡುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಹಲವು ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಯಮುನಾ ಎಕ್ಸ್​ಪ್ರೆಸ್​ ವೇ ಹೆಸರನ್ನು ಅಟಲ್​ ಬಿಹಾರಿ ವಾಜಪೇಯಿ ಎಕ್ಸ್​ಪ್ರೆಸ್ ವೇ ಎಂದು ಬದಲಿಸಿ, ಅಧಿಕೃತವಾಗಿ ಘೋಷಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಹೆಸರು ಹೇಳಲು ಇಚ್ಛಿಸದ ಬಿಜೆಪಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆಂದು ಇಂಡಿಯಾ ಟುಡೆ ಹೇಳಿದೆ. ಭಾರತದಲ್ಲಿ ಅತ್ಯಂತ ಪ್ರೀತಿಸಲ್ಪಟ್ಟ ರಾಜಕಾರಣಿ ಅಟಲ್​ ಬಿಹಾರಿ ವಾಜಪೇಯಿ. ಅವರನ್ನು ಪಕ್ಷಾತೀತವಾಗಿ ಎಲ್ಲರೂ ಗೌರವಿಸುತ್ತಾರೆ. ಆದರಿಸುತ್ತಾರೆ. ಮುಂದಿನ ಪೀಳಿಗೆಗೆ ವಾಜಪೇಯಿಯ ಸಾಧನೆ, ಮೌಲ್ಯಗಳನ್ನು ಅರ್ಥ ಮಾಡಿಸುವ ಸದುದ್ದೇಶದಿಂದ ಎಕ್ಸ್​ಪ್ರೆಸ್ ವೇಗೆ ಅವರ ಹೆಸರು ಇಡಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ ಎನ್ನಲಾಗಿದೆ.

ಉತ್ತರಪ್ರದೇಶದಲ್ಲಿ ಚುನಾವಣೆ ಉತ್ತರಪ್ರದೇಶದಲ್ಲಿ 2022ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿಗೆ ಹೇಗಾದರೂ ಸರಿ ಮತ್ತೆ ಅಧಿಕಾರ ಹಿಡಿಯುವ ತವಕ. ಅದರಲ್ಲೂ ಬಿಜೆಪಿ ಸೇರಿ ಬಹುತೇಕ ಪ್ರತಿಪಕ್ಷಗಳು ಬ್ರಾಹ್ಮಣ ಮತವನ್ನು ಬಹುಮುಖ್ಯವೆಂದು ಪರಿಗಣಿಸಿವೆ. ಇದೀಗ ಅಟಲ್​ ಬಿಹಾರಿ ವಾಜಪೇಯಿ ಹೆಸರನ್ನು ಯಮುನಾ ಎಕ್ಸ್​ಪ್ರೆಸ್​ ವೇಗೆ ಇಟ್ಟರೆ ಅವರನ್ನು ಪ್ರೀತಿಸುವ ಅಭಿಮಾನಿಗಳು, ಅದರಲ್ಲೂ ಮುಖ್ಯವಾಗಿ ಬ್ರಾಹ್ಮಣ ಸಮುದಾಯದವರು ತುಂಬ ಖುಷಿಯಾಗುತ್ತಾರೆ ಎಂಬ ಲೆಕ್ಕಾಚಾರವೂ ಇರಬಹುದು. ಇನ್ನೊಂದು ಬದಿ ಯೋಚಿಸುವುದಾರೆ, ಬಿಜೆಪಿಯಲ್ಲಿ ವಾಜಪೇಯಿ ಅವರಿಗೆ ಅಪಾರ ಗೌರವ ಇದೆ. ಅವರ ಹೆಸರನ್ನು ಈಗಾಗಲೇ ಸ್ಥಳಗಳಿಗೆ ಮತ್ತು ಯೋಜನೆಗಳಿಗೆ ಇಟ್ಟಿದೆ.

ಇದನ್ನೂ ಓದಿ: ಜವಹರಲಾಲ್ ನೆಹರು ಸಂಶೋಧನಾ ಕೇಂದ್ರಕ್ಕೆ ನೀರು ನುಗ್ಗಿ ಕೋಟ್ಯಾಂತರ ರೂ. ಬೆಲೆ ಬಾಳುವ ಲ್ಯಾಬ್ ಮಷಿನ್​ ಹಾಳು

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!