Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಮುನಾ ಪ್ರವಾಹದ ನಡುವೆ ರಕ್ಷಣಾ ತಂಡ ರಕ್ಷಿಸಿದ ಈ ಗೂಳಿಯ ಬೆಲೆ ಬರೋಬ್ಬರಿ ₹1 ಕೋಟಿ!

ಯಮುನಾ ನದಿಯ ನೀರು ನೋಯ್ಡಾದಲ್ಲಿ ನದಿಯ ದಡದಲ್ಲಿ ಸುಮಾರು 550 ಹೆಕ್ಟೇರ್ ಭೂಮಿಯನ್ನು ಮುಳುಗಿಸಿದೆ. 5,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ ಮತ್ತು ಎಂಟು ಹಳ್ಳಿಗಳ ಮೇಲೆ ಪರಿಣಾಮ ಬೀರಿದೆ.

ಯುಮುನಾ ಪ್ರವಾಹದ ನಡುವೆ ರಕ್ಷಣಾ ತಂಡ ರಕ್ಷಿಸಿದ ಈ ಗೂಳಿಯ ಬೆಲೆ ಬರೋಬ್ಬರಿ ₹1 ಕೋಟಿ!
ಪ್ರೀತಂ ಎಂಬ ಗೂಳಿ
Follow us
ರಶ್ಮಿ ಕಲ್ಲಕಟ್ಟ
|

Updated on: Jul 15, 2023 | 4:16 PM

ದೆಹಲಿ ಜುಲೈ 15: ಉಕ್ಕಿ ಹರಿಯುತ್ತಿರುವ ಯಮುನಾ ನದಿಯ (Yamuna River)  ಪ್ರವಾಹದಿಂದಾಗಿ ನೋಯ್ಡಾದಲ್ಲಿ (Noida) ಸಿಲುಕಿರುವ ಪ್ರಾಣಿಗಳನ್ನು ವಿಪತ್ತು ನಿರ್ವಹಣಾ ತಂಡಗಳು ರಕ್ಷಿಸಿವೆ. ಹೀಗೆ ರಕ್ಷಿಸಿದ ಪ್ರಾಣಿಗಳ ಪೈಕಿ ಪ್ರೀತಂ ಎಂಬ ಗೂಳಿಯೂ ಒಂದು. ಇದರ ಬೆಲೆ ಬರೋಬ್ಬರಿ 1 ಕೋಟಿ!. ಗಾಜಿಯಾಬಾದ್‌ನಲ್ಲಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) 8 ನೇ ಬೆಟಾಲಿಯನ್, ನಮ್ಮ ತಂಡ ನೋಯ್ಡಾದಿಂದ ಭಾರತದ ನಂ.1 ಗೂಳಿ, 1 ಕೋಟಿ ರೂಪಾಯಿ ಬೆಲೆಬಾಳುವ “ಪ್ರೀತಮ್” ಸೇರಿದಂತೆ 3 ಜಾನುವಾರುಗಳನ್ನು ರಕ್ಷಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜೀವ ಉಳಿಸಲು ನಮ್ಮ ತಂಡಗಳು ಶ್ರಮಿಸುತ್ತಿವೆ ಎಂದು ರಕ್ಷಣಾ ತಂಡ ಜಾನುವಾರು ಮತ್ತು ಮೇಕೆಗಳನ್ನು ರಕ್ಷಿಸುವ ಫೋಟೋಗಳು ಮತ್ತು ವಿಡಿಯೊಗಳನ್ನು ಟ್ವೀಟ್ ಮಾಡಿದೆ.

ಈ ತಂಡ ಪೋಸ್ಟ್ ಮಾಡಿದ ವಿಡಿಯೊಗಳಲ್ಲಿ ಎರಡು ಎಮ್ಮೆಗಳನ್ನು ರಕ್ಷಿಸುತ್ತಿರುವುದು ಕಾಣಿಸುತ್ತದೆ.

ಯಮುನಾ ನದಿಯ ನೀರು ನೋಯ್ಡಾದಲ್ಲಿ ನದಿಯ ದಡದಲ್ಲಿ ಸುಮಾರು 550 ಹೆಕ್ಟೇರ್ ಭೂಮಿಯನ್ನು ಮುಳುಗಿಸಿದೆ. 5,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ ಮತ್ತು ಎಂಟು ಹಳ್ಳಿಗಳ ಮೇಲೆ ಪರಿಣಾಮ ಬೀರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಗುರುವಾರದಿಂದ ದನ, ನಾಯಿ, ಮೊಲ, ಬಾತುಕೋಳಿ, ಹುಂಜ ಮತ್ತು ಗಿನಿಪಿಗ್ ಸೇರಿದಂತೆ ಸುಮಾರು 6,000 ಪ್ರಾಣಿಗಳನ್ನು ಸಹ ಮುಳುಗಿರುವ ಪ್ರದೇಶಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ 45 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿರುವ ಯಮುನಾ ನದಿಯ ನೀರಿನ ಮಟ್ಟವು ಇಂದು 207.68 ಮೀಟರ್‌ಗೆ ಇಳಿದಿದ್ದರೂ ಅಪಾಯದ ಗಡಿಯಿಂದ ಇದು ಇನ್ನೂ ಎರಡು ಮೀಟರ್ ಮೇಲಿದೆ. ನೆರೆಯ ದೆಹಲಿಯಲ್ಲಿ, ಐಟಿಒ ಮತ್ತು ರಾಜ್‌ಘಾಟ್ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದರಿಂದ ನಿನ್ನೆ ಸೇನಾಪಡೆಯನ್ನು ಕರೆಸಲಾಗಿತ್ತು.

ಇದನ್ನೂ ಓದಿ: Delhi Flood: ಯಮುನಾ ನದಿ ನೀರು ಮಟ್ಟ ಸ್ವಲ್ಪ ಇಳಿಕೆ; ಪರಸ್ಪರ ಕಿತ್ತಾಡದೆ ಸಹಕರಿಸಿ: ಅರವಿಂದ ಕೇಜ್ರಿವಾಲ್

ಪ್ರವಾಹದ ನೀರನ್ನು ಹೊರಹಾಕಲು ಯಮುನಾ ಬ್ಯಾರೇಜ್‌ನ ಐದು ಗೇಟ್‌ಗಳನ್ನು ತೆರೆಯುವ ಕೆಲಸ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. “ಐಟಿಒ ಬ್ಯಾರೇಜ್‌ನ ಮೊದಲ ಜಾಮ್ಡ್ ಗೇಟ್ ತೆರೆಯಲಾಗಿದೆ. ಶೀಘ್ರದಲ್ಲೇ ಎಲ್ಲಾ ಐದು ಗೇಟ್‌ಗಳನ್ನು ತೆರೆಯಲಾಗುವುದು.ಯಮುನಾ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದೆ, ಮಳೆಯಾಗದಿದ್ದರೆ ಪರಿಸ್ಥಿತಿ ಶೀಘ್ರದಲ್ಲೇ ಸಾಮಾನ್ಯವಾಗಲಿದೆ, ಮಳೆಯಾದರೆ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ