Sign In

By signing in or creating an account, you agree with Associated Broadcasting Company's Terms & Conditions and Privacy Policy.

Yasin Malik: ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್

ಕಳೆದ 10 ದಿನಗಳಿಂದ ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ.

Yasin Malik: ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್
ಯಾಸಿನ್ ಮಲಿಕ್Image Credit source: Hindustan Times
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 02, 2022 | 8:56 AM

ಶ್ರೀನಗರ: ತಿಹಾರ್ ಜೈಲಿನಲ್ಲಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ (Yasin Malik) ತನ್ನ ಪ್ರಕರಣದಲ್ಲಿ ನ್ಯಾಯಯುತ ವಿಚಾರಣೆಯನ್ನು ಕೋರಿ ದೆಹಲಿಯ ತಿಹಾರ್ ಜೈಲಿನಲ್ಲಿ (Delhi Tihar Jail) ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆ ಉಪವಾಸ ಸತ್ಯಾಗ್ರಹವನ್ನು ಅವರು ಸೋಮವಾರ ಸಂಜೆ ಸ್ಥಗಿತಗೊಳಿಸಿದ್ದಾರೆ. ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್) ಮುಖ್ಯಸ್ಥನಾಗಿರುವ ಯಾಸಿನ್ ಮಲಿಕ್ ಭಯೋತ್ಪಾದನೆಗೆ ಫಂಡಿಂಗ್ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಎರಡು ಪ್ರಕರಣಗಳಲ್ಲಿ ಖುದ್ದು ಹಾಜರಾಗುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು.

ಕಳೆದ 10 ದಿನಗಳಿಂದ ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಸೋಮವಾರ ಸಂಜೆ ತಮ್ಮ ಮನವಿಯನ್ನು ಸಂಬಂಧಿತ ಅಧಿಕಾರಿಗಳಿಗೆ ತಲುಪಿಸಲಾಗಿದೆ ಎಂದು ತಿಳಿಸಿದ ನಂತರ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ರುಬಯ್ಯ ಸಯೀದ್‌ ಅಪಹರಣ ಪ್ರಕರಣದ ವಿಚಾರಣೆ ನಡೆಸುತ್ತಿರುವ ಜಮ್ಮು ನ್ಯಾಯಾಲಯದಲ್ಲಿ ತಾನು ದೈಹಿಕವಾಗಿ ಹಾಜರಾಗಲು ಅನುಮತಿ ನೀಡಬೇಕೆಂಬ ಅವರ ಮನವಿಗೆ ಕೇಂದ್ರ ಸರ್ಕಾರ ಉತ್ತರಿಸಲು ನಿರಾಕರಿಸಿದಾಗ ಯಾಸಿನ್ ಮಲಿಕ್ ಜುಲೈ 22ರಂದು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿದ್ದರು.

ಇದನ್ನೂ ಓದಿ: Breaking Yasin Malik ಭಯೋತ್ಪಾದನೆಗೆ ನಿಧಿ ಪ್ರಕರಣ: ಕಾಶ್ಮೀರಿ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್​​ಗೆ ಜೀವಾವಧಿ ಶಿಕ್ಷೆ

ದೆಹಲಿ ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಸಂದೀಪ್ ಗೋಯೆಲ್ ಮನವಿಯ ಮೇರೆಗೆ ಯಾಸಿನ್ ಮಲಿಕ್ ಕೈಗೊಳ್ಳಲು ನಿರ್ಧರಿಸಿದ್ದ 2 ತಿಂಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ನನ್ನ ಕೋರಿಕೆಯ ಮೇರೆಗೆ, ಜುಲೈ 22ರಿಂದ ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಅಪರಾಧಿ ಯಾಸಿನ್ ಮಲಿಕ್ ಸೋಮವಾರ ಸಂಜೆ ತನ್ನ ಉಪವಾಸವನ್ನು ನಿಲ್ಲಿಸಿದ್ದಾರೆ” ಎಂದು ಗೋಯೆಲ್ ಹೇಳಿದ್ದಾರೆ.

ರಕ್ತದೊತ್ತಡದಲ್ಲಿ ಏರಿಳಿತದ ನಂತರ ಕಳೆದ ವಾರ ಯಾಸಿನ್ ಮಲಿಕ್ ಅವರನ್ನು ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೈಲಿಗೆ ಹಿಂತಿರುಗಿದ ನಂತರವೂ ಅವರು ಏನನ್ನೂ ತಿನ್ನಲು ಒಪ್ಪಲಿಲ್ಲ. 1989ರಲ್ಲಿ ಆಗಿನ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಯ್ಯ ಸಯೀದ್ ಅವರ ಅಪಹರಣ ಮತ್ತು 1990ರಲ್ಲಿ ನಾಲ್ವರು ಭಾರತೀಯ ವಾಯುಪಡೆ (ಐಎಎಫ್) ಅಧಿಕಾರಿಗಳನ್ನು ಕೊಂದ ಪ್ರಕರಣಗಳಲ್ಲಿ ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ವಿಚಾರಣೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: Yasin Malik: ನ್ಯಾಯಯುತ ವಿಚಾರಣೆಗೆ ಒತ್ತಾಯಿಸಿ ತಿಹಾರ್ ಜೈಲಿನಲ್ಲಿ ಯಾಸಿನ್ ಮಲಿಕ್ ಉಪವಾಸ ಸತ್ಯಾಗ್ರಹ

56 ವರ್ಷದ ಯಾಸಿನ್ ಮಲಿಕ್ ವಿಶೇಷ ಭಯೋತ್ಪಾದಕ ಮತ್ತು ಟಾಡಾ (TADA) ಕಾಯ್ದೆಯಡಿ ನ್ಯಾಯಾಲಯದ ಮುಂದೆ ಹಾಜರಾಗಲು ಸರ್ಕಾರಕ್ಕೆ ಪತ್ರ ಬರೆದಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ನ್ಯಾಯಾಲಯವು ಈ ಹಿಂದೆ ಮೇ 19ರಂದು ಭಯೋತ್ಪಾದನೆ ಫಂಡಿಂಗ್ ಪ್ರಕರಣಗಳಲ್ಲಿ ಯಾಸಿನ್ ಮಲಿಕ್ ಅಪರಾಧಿ ಎಂದು ಸಾಬೀತು ಮಾಡಿತ್ತು. ಮೇ 25ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು.

Published On - 8:55 am, Tue, 2 August 22

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್