Yearender 2024: 2024 ಬಿಜೆಪಿ ಪಾಲಿನ ಸುವರ್ಣ ವರ್ಷ, ನರೇಂದ್ರ ಮೋದಿ ರಾಜಕೀಯ ಜೀವನದ ಮೈಲಿಗಲ್ಲು

2024 ಪ್ರಧಾನಿ ನರೇಂದ್ರ ಮೋದಿಯವರ ಪಾಲಿನ ಮಹತ್ವದ ವರ್ಷ. ಈ ವರ್ಷ ಪ್ರಧಾನ ಮಂತ್ರಿ ಮೋದಿ ಅಸಾಧಾರಣ ಮೈಲಿಗಲ್ಲುಗಳನ್ನು ಸಾಧಿಸಿದ್ದಾರೆ. ಇನ್ನೇನು 2024 ಮುಗಿದು 2025ನೇ ವರ್ಷಕ್ಕೆ ಕಾಲಿಡಲಿದ್ದೇವೆ. ರಾಜಕೀಯ ದೃಷ್ಟಿಯಿಂದ ಈ ವರ್ಷ ಬಿಜೆಪಿ ಪಾಲಿಗೆ ಬಹಳ ಮುಖ್ಯವಾದ ವರ್ಷವಾಗಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆದ್ದು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ. ಹಾಗೇ, ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿದ್ದಾರೆ.

Yearender 2024: 2024 ಬಿಜೆಪಿ ಪಾಲಿನ ಸುವರ್ಣ ವರ್ಷ, ನರೇಂದ್ರ ಮೋದಿ ರಾಜಕೀಯ ಜೀವನದ ಮೈಲಿಗಲ್ಲು
Pm Narendra Modi Victory Celebration
Follow us
ಸುಷ್ಮಾ ಚಕ್ರೆ
|

Updated on: Dec 23, 2024 | 5:36 PM

ನವದೆಹಲಿ: 2024ನೇ ವರ್ಷವು ಬಿಜೆಪಿ ಪಾಲಿಗೆ ಸುವರ್ಣ ವರ್ಷ. ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಜೀವನದಲ್ಲಿ ಇದು ಮಹತ್ವದ ಮೈಲುಗಲ್ಲು. ಏಕೆಂದರೆ ನರೇಂದ್ರ ಮೋದಿ 2024ರ ಜೂನ್ 9ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಭಾರತದ ಮೊದಲ ಪ್ರಧಾನಿಯ ಪಂಡಿತ್ ಜವಾಹರಲಾಲ್ ನೆಹರು ಅವರ ಸಮಾನವಾಗಿ ಪ್ರಧಾನಿ ನರೇಂದ್ರ ಮೋದಿ ದಾಖಲೆ ಸೃಷ್ಟಿಸಿದರು. ಈ ಮೂಲಕ ಭಾರತದ ಇತಿಹಾಸದಲ್ಲಿ ಸತತ ಮೂರು ಅವಧಿಗೆ ಪ್ರಧಾನಿಯಾದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 240 ಸ್ಥಾನಗಳನ್ನು ಗೆದ್ದಿತು. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 293 ಸ್ಥಾನಗಳನ್ನು ಗೆದ್ದಿತು.

2024ನೇ ವರ್ಷ ಸದ್ಯದಲ್ಲೇ ಮುಗಿಯಲಿದೆ. ರಾಜಕೀಯ ದೃಷ್ಟಿಯಿಂದ ಈ ವರ್ಷ ಬಿಜೆಪಿಗೆ ಮೈಲಿಗಲ್ಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆದ್ದು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿದ್ದಾರೆ. ಆದರೆ, ಎನ್‌ಡಿಎ 400ರ ಅಂಕಿ-ಅಂಶವನ್ನು ಮುಟ್ಟಲು ಸಾಧ್ಯವಾಗಲಿಲ್ಲ. ಇದರ ಹೊರತಾಗಿ 2024ರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅದ್ಭುತ ಪ್ರದರ್ಶನ ನೀಡಿದೆ. 2024ರಲ್ಲಿ ಲೋಕಸಭೆ ಹೊರತುಪಡಿಸಿ 8 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆದಿವೆ. 5 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚಿಸಿದೆ. 2024ರಲ್ಲಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತೊಮ್ಮೆ ಕಂಡುಬಂದಿದೆ. ಲೋಕಸಭೆ ಚುನಾವಣೆಯಿಂದ ವಿಧಾನಸಭಾ ಚುನಾವಣೆಯವರೆಗೆ ಬಿಜೆಪಿ ನರೇಂದ್ರ ಮೋದಿಯವರ ಹೆಸರು ಹೇಳಿಕೊಂಡೇ ಮತ ಕೇಳಿದ್ದರು. ಜನರು ಮತ್ತೊಮ್ಮೆ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಮತ ಹಾಕಿದರು.

2024ರಲ್ಲಿ ಬಿಜೆಪಿ ಹಾಗೂ ಪ್ರಧಾನಿ ಮೋದಿಯವರ ರಾಜಕೀಯದ ಪ್ರಮುಖ ಘಟ್ಟಗಳಿವು:

ಲೋಕಸಭೆ ಚುನಾವಣೆಗಳು:

2024ರ ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆಗಳು ನಡೆದವು. ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶಗಳು ಆಶ್ಚರ್ಯಕರವಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 400 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿತ್ತು. ಎನ್‌ಡಿಎ 400ರ ಸಂಖ್ಯೆಯನ್ನು ಸಾಧಿಸಲು ಸಾಧ್ಯವಾಗದಿದ್ದರೂ, ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರವನ್ನು ಪಡೆದುಕೊಂಡಿತು. ನರೇಂದ್ರ ಮೋದಿ 3ನೇ ಬಾರಿ ಮತ್ತೊಮ್ಮೆ ಪ್ರಧಾನಿಯಾದರು.

ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆ:

ಈ ವರ್ಷ ಅರುಣಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗಳು ನಡೆದವು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತು. ರಾಜ್ಯದ 60 ಸ್ಥಾನಗಳ ಪೈಕಿ 46 ಸ್ಥಾನಗಳನ್ನು ಬಿಜೆಪಿ ವಶಪಡಿಸಿಕೊಂಡಿತು. ಇದಲ್ಲದೇ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪೇಮಾ ಖಂಡು ಸೇರಿದಂತೆ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಗೆದ್ದಿದ್ದಾರೆ.

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ:

2024 ಆಂಧ್ರಪ್ರದೇಶಕ್ಕೆ ಬಹಳ ಮುಖ್ಯವಾಗಿತ್ತು. ಇಲ್ಲಿನ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಬದಲಾವಣೆಯಾಗಿದ್ದು, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಹೀನಾಯ ಸೋಲನುಭವಿಸಿದ್ದು, ಟಿಡಿಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದೆ.

ಒಡಿಶಾ ವಿಧಾನಸಭಾ ಚುನಾವಣೆ:

ಒಡಿಶಾ ರಾಜ್ಯದಲ್ಲಿ 24 ವರ್ಷಗಳ ಕಾಲ ಅಧಿಕಾರದಲ್ಲಿದ್ದ ನವೀನ್ ಪಟ್ನಾಯಕ್ ಅವರ ಬಿಜೆಡಿ ಈ ವರ್ಷ ಅಧಿಕಾರ ಕಳೆದುಕೊಂಡಿತು. 147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆದ್ದಿದೆ. ಆದರೆ ಬಿಜೆಡಿ ಕೇವಲ 51 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು.

ಹರಿಯಾಣ ವಿಧಾನಸಭಾ ಚುನಾವಣೆ:

ಈ ವರ್ಷ ದೇಶದಲ್ಲಿ ಉಂಟಾದ ಅತ್ಯಂತ ಆಶ್ಚರ್ಯಕರ ಫಲಿತಾಂಶಗಳ ಪೈಕಿ ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶವೂ ಒಂದು. ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬಹುದು ಎಂಬ ಊಹಾಪೋಹಗಳು ಹಬ್ಬಿದ್ದವು. ಎಕ್ಸಿಟ್ ಪೋಲ್‌ಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸುತ್ತಿದೆ ಎಂದು ತೋರಿಸಲಾಗಿದ್ದರೂ ಎಣಿಕೆಯ ದಿನ ಎಲ್ಲವೂ ತದ್ವಿರುದ್ಧವಾಗಿತ್ತು. ಮತ್ತೊಮ್ಮೆ ಹರಿಯಾಣದಲ್ಲಿ ಬಿಜೆಪಿ ಅದ್ಭುತ ವಿಜಯವನ್ನು ದಾಖಲಿಸಿ, ಸರ್ಕಾರವನ್ನು ರಚಿಸಿತು. ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ:

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಮಹಾಯುತಿ ಅದ್ಭುತ ಗೆಲುವು ಸಾಧಿಸಿದೆ. 288 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 132 ಸ್ಥಾನಗಳನ್ನು ಗೆದ್ದರೆ, ಶಿವಸೇನೆ 57 ಮತ್ತು ಎನ್‌ಸಿಪಿ 41 ಸ್ಥಾನಗಳನ್ನು ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಆಡಳಿತ ವಿರೋಧಿ ಅಲೆಯನ್ನು ಸೋಲಿಸಿ, ಬಿಜೆಪಿ 132 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಇದರೊಂದಿಗೆ ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ