ನಾನು ಭಯೋತ್ಪಾದಕನಾದರೆ ನಿಮ್ಮದು ಸರ್ಕಾರಿ ನಕ್ಸಲಿಸಂ; ಪಿಎಂ ಮೋದಿ, ಸಿಎಂ ಶಿಂಧೆ ವಿರುದ್ಧ ಉದ್ಧವ್ ಠಾಕ್ರೆ ಆಕ್ರೋಶ

|

Updated on: Jun 20, 2024 | 6:26 PM

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ನಡೆದ ಶಕ್ತಿ ಪ್ರದರ್ಶನದಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಈಗಿನಿಂದಲೇ ರಾಜ್ಯದಲ್ಲಿ ಪ್ರಚಾರ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದ್ದಾರೆ. ನಮ್ಮ ಪಕ್ಷದ ಮೂಲ ಚಿಹ್ನೆಯಿಲ್ಲದೆ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸಿ. ನಾವು ಬೇರೆಯವರ ಫೋಟೋವನ್ನು ಬಳಸಿಲ್ಲ ಮತ್ತು ಎಂದಿಗೂ ಬಳಸುವುದಿಲ್ಲ. ಆ ನಕಲಿ ಶಿವಸೇನೆ ಇಲ್ಲದೆ ಈಗಲೇ ಸಿದ್ಧತೆಗಳನ್ನು ಪ್ರಾರಂಭಿಸಲು ನಾನು ಪ್ರಧಾನಿ ಮೋದಿಗೆ ಸವಾಲು ಹಾಕುತ್ತೇನೆ ಎಂದಿದ್ದಾರೆ.

ನಾನು ಭಯೋತ್ಪಾದಕನಾದರೆ ನಿಮ್ಮದು ಸರ್ಕಾರಿ ನಕ್ಸಲಿಸಂ; ಪಿಎಂ ಮೋದಿ, ಸಿಎಂ ಶಿಂಧೆ ವಿರುದ್ಧ ಉದ್ಧವ್ ಠಾಕ್ರೆ ಆಕ್ರೋಶ
ಉದ್ಧವ್ ಠಾಕ್ರೆ
Follow us on

ಮುಂಬೈ: ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಅವರು ತಮ್ಮ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ವಿರುದ್ಧ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ ‘ಹೌದು, ನಾನು ಭಯೋತ್ಪಾದಕ’ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅರ್ಬನ್ ನಕ್ಸಲಿಸಂ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ, ನಾನು ಭಯೋತ್ಪಾದಕನೇ. ಸಂವಿಧಾನ ಮತ್ತು ದೇಶವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನೊಬ್ಬ ಭಯೋತ್ಪಾದಕ ಎಂದುಕೊಳ್ಳಿ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಶಿವಸೇನೆಯ 58ನೇ ಸಂಸ್ಥಾಪನಾ ದಿನದ ಅಂಗವಾಗಿ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬುಧವಾರ ಸಂಜೆ ಉದ್ಧವ್ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉಸ್ತುವಾರಿಯಾಗಿ ಮಹಾರಾಷ್ಟ್ರ ಚುನಾವಣೆಗೆ ಭೂಪೇಂದರ್ ಯಾದವ್, ಜಾರ್ಖಂಡ್‌ಗೆ ಶಿವರಾಜ್ ಸಿಂಗ್ ಚೌಹಾಣ್ ನೇಮಕ

ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದು “ಸರ್ಕಾರಿ ನಕ್ಸಲಿಸಂ” ಎಂದು ಹೇಳಿರುವ ಉದ್ಧವ್ ಠಾಕ್ರೆ, “ಇದು ನಿಜಕ್ಕೂ ನಕ್ಸಲಿಸಂ. ಇದು ಅರ್ಬನ್ ನಕ್ಸಲಿಸಂಗಿಂತಲೂ ಅಪಾಯಕಾರಿ. ಇದು ವಿರೋಧ ಪಕ್ಷಗಳನ್ನು ಒಡೆಯಲು, ಉತ್ತಮ ಸರ್ಕಾರವನ್ನು ಉರುಳಿಸಲು ನಿಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಕ್ರಮವಾಗಿದೆ. ಇದು ನಕ್ಸಲಿಸಂ, ಇದು ಪ್ರಜಾಪ್ರಭುತ್ವವನ್ನು ಕೊಲ್ಲುತ್ತದೆ” ಎಂದು ಆರೋಪಿಸಿದ್ದಾರೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಶಿವಸೇನೆ (ಏಕನಾಥ್ ಶಿಂಧೆ) ಅವರು ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಫೋಟೋ ಮತ್ತು ಪಕ್ಷದ ಚಿಹ್ನೆಯಾದ ‘ಬಿಲ್ಲು ಮತ್ತು ಬಾಣ’ವನ್ನು ಬಳಸದೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಉದ್ಧವ್ ಠಾಕ್ರೆ ಸವಾಲು ಹಾಕಿದ್ದಾರೆ.

ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಈಗಲೇ ಪ್ರಾರಂಭಿಸುವಂತೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಭತ್ತ, ರಾಗಿ, ಜೋಳ ಸೇರಿ 14 ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಮೋದಿ ಸರ್ಕಾರ ನಿರ್ಧಾರ

“ಪ್ರಜಾಪ್ರಭುತ್ವ”ವನ್ನು ಉಳಿಸಿದ್ದಕ್ಕಾಗಿ ಇಂಡಿಯಾ ಬ್ಲಾಕ್ ಮತ್ತು ಮಹಾ ವಿಕಾಸ್ ಅಘಾಡಿ (MVA) ಅನ್ನು ಬೆಂಬಲಿಸಿದ ಸ್ವತಂತ್ರ ಪತ್ರಕರ್ತರು ಮತ್ತು ಯೂಟ್ಯೂಬರ್ ಧ್ರುವ ರಥೀ ಅವರಿಗೆ ಉದ್ಧವ್ ಠಾಕ್ರೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ 48 ಸ್ಥಾನಗಳ ಪೈಕಿ ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಬಿಜೆಪಿ 9 ಸ್ಥಾನಗಳನ್ನು ಪಡೆದುಕೊಂಡಿದೆ. ಶಿವಸೇನೆ (ಯುಬಿಟಿ) 9 ಸ್ಥಾನಗಳನ್ನು ಗೆದ್ದರೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) 8 ಸ್ಥಾನಗಳನ್ನು ಗೆದ್ದಿದೆ. ಮತ್ತೊಂದೆಡೆ, ಶಿವಸೇನೆ 7 ಸ್ಥಾನಗಳನ್ನು ಪಡೆದುಕೊಂಡರೆ, ಎನ್‌ಸಿಪಿ 1 ಸ್ಥಾನವನ್ನು ಪಡೆದುಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ