PM Modi US Visit Schedule: ಜೂನ್ 20ರಂದು ಅಮೆರಿಕಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿಯವರ ವೇಳಾಪಟ್ಟಿ ಹೀಗಿದೆ

ಜೂನ್ 22 ರಂದು ಬೆಳಗ್ಗೆ ಪ್ರಧಾನಿ ಮೋದಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ನಂತರ ಅವರ ಮತ್ತು ಯುಎಸ್ ಅಧ್ಯಕ್ಷ ಜೋ ಬೈಡನ್ ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎರಡು ದೇಶಗಳ ನಡುವಿನ ತಂತ್ರಜ್ಞಾನ ಪಾಲುದಾರಿಕೆ, ರಕ್ಷಣೆ ಮತ್ತು ಹವಾಮಾನ ಬದಲಾವಣೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.

PM Modi US Visit Schedule: ಜೂನ್ 20ರಂದು ಅಮೆರಿಕಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿಯವರ ವೇಳಾಪಟ್ಟಿ ಹೀಗಿದೆ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Jun 14, 2023 | 4:22 PM

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಜೂನ್ 20 ರಂದು ನ್ಯೂಯಾರ್ಕ್‌ಗೆ (New York) ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಅವರು ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು (Yoga Day) ಆಚರಿಸಲು ವಿಶ್ವಸಂಸ್ಥೆಯ ಸೆಕ್ರೆಟರಿಯೇಟ್‌ನಲ್ಲಿ ಯೋಗ ಅಧಿವೇಶನದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವವು ಅಂತರರಾಷ್ಟ್ರೀಯ ಯೋಗ ದಿನವನ್ನು ನಿಜವಾಗಿಯೂ ಸ್ವೀಕರಿಸಿದೆ ಎಂದು ಯುಎನ್ ರೆಸಿಡೆಂಟ್ ಭಾರತದಲ್ಲಿನ ಸಂಯೋಜಕರಾದ ಶೋಂಬಿ ಶಾರ್ಪ್ ನಿನ್ನೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರ. ಪ್ರಧಾನಿ ಮೋದಿ ವಿಶ್ವಸಂಸ್ಥೆಯಲ್ಲಿರುವುದೇ ವಿಶೇಷ ಎಂದು ಶಾರ್ಪ್ ಹೇಳಿದ್ದಾರೆ. ನಂತರ ಪ್ರಧಾನಿ ವಾಷಿಂಗ್ಟನ್ ಡಿಸಿಗೆ ತೆರಳಲಿದ್ದಾರೆ.

ಜೂನ್ 22 ರಂದು ಬೆಳಗ್ಗೆ ಪ್ರಧಾನಿ ಮೋದಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ನಂತರ ಅವರ ಮತ್ತು ಯುಎಸ್ ಅಧ್ಯಕ್ಷ ಜೋ ಬೈಡನ್ ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎರಡು ದೇಶಗಳ ನಡುವಿನ ತಂತ್ರಜ್ಞಾನ ಪಾಲುದಾರಿಕೆ, ರಕ್ಷಣೆ ಮತ್ತು ಹವಾಮಾನ ಬದಲಾವಣೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.

ಮಧ್ಯಾಹ್ನ ಮೋದಿಯವರು ಎರಡನೇ ಬಾರಿಗೆ ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿಂದೆ 2016ರಲ್ಲಿ ಮೋದಿ ಇಲ್ಲಿ ಮಾತನಾಡಿದ್ದರು.

ರಾತ್ರಿ ಶ್ವೇತಭವನದಲ್ಲಿ ಬೈಡನ್ ಆಯೋಜಿಸಿದ ಭರ್ಜರಿ ಭೋಜನದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ ಪ್ರಮುಖ ಅಮೆರಿಕನ್ನರು ಮತ್ತು ಭಾರತೀಯ-ಅಮೆರಿಕನ್ನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ: International Yoga Day: ಈ ವರ್ಷದ ಯೋಗ ದಿನದ ಧ್ಯೇಯ ವಾಕ್ಯ ಮಾನವತೆಗಾಗಿ ಯೋಗ; ಇಡೀ ವಿಶ್ವವನ್ನೇ ಕುಟುಂಬ ಸಮಾನವಾಗಿಸುವಲ್ಲಿ ಯೋಗದ ಪಾತ್ರ

ಜೂನ್ 23 ರಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಸ್ಟೇಟ್ ಡಿಪಾರ್ಟ್‌ಮೆಂಟ್‌ನಲ್ಲಿ ಆಯೋಜಿಸುವ ಭೋಜನಕೂಟದಲ್ಲಿ ಪ್ರಧಾನಿ ಪಾಲ್ಗೊಳ್ಳುತ್ತಾರೆ. ಇದರ ನಂತರ ಪ್ರಧಾನಮಂತ್ರಿಯವರು ಯುಎಸ್-ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್ ಫೋರಂ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ. ಕೆಲವು ಸಿಇಒಗಳ ಜತೆ ಪ್ರಧಾನಿ ಸಭೆ ನಡೆಸುವ ಸಾಧ್ಯತೆ ಇದೆ.  ಮೋದಿ ವಾಪಸ್ ಆಗುವ ಮುಂಚಿನ ದಿನ ಅಂದರೆ ಜೂನ್ 23ರಂದು ಸಂಜೆ ಅವರು ಭಾರತೀಯ ವಲಸೆಗಾರರರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Wed, 14 June 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್