ದಾರಿತಪ್ಪಿಸುವ ಜಾಹೀರಾತು ಪ್ರಕರಣ: ಸುಪ್ರೀಂಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್

ಮಾರ್ಚ್ 19 ರಂದು, ಪ್ರಕರಣದಲ್ಲಿ ನೀಡಲಾದ ನೋಟಿಸ್‌ಗೆ ಕಂಪನಿಯು ಪ್ರತಿಕ್ರಿಯಿಸಲು ವಿಫಲವಾದ ಕಾರಣಕ್ಕೆ ವಿನಾಯಿತಿ ನೀಡಿದ ನಂತರ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ಹಾಜರಾಗುವಂತೆ ಸೂಚಿಸಿತ್ತು. ರೋಗಗಳಿಗೆ ಚಿಕಿತ್ಸೆ ನೀಡುವ ಉತ್ಪನ್ನಗಳ ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂಬ ತನ್ನ ಒಪ್ಪಂದವನ್ನು ಪಾಲಿಸದ ಕಂಪನಿ ವಿರುದ್ಧ ನ್ಯಾಯಾಲಯವು ತೀವ್ರವಾಗಿ ಟೀಕಿಸಿದೆ.

ದಾರಿತಪ್ಪಿಸುವ ಜಾಹೀರಾತು ಪ್ರಕರಣ: ಸುಪ್ರೀಂಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್
ಬಾಬಾ ರಾಮ್ ದೇವ್
Follow us
ರಶ್ಮಿ ಕಲ್ಲಕಟ್ಟ
|

Updated on:Apr 02, 2024 | 12:14 PM

ದೆಹಲಿ ಏಪ್ರಿಲ್  02: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ಆದೇಶವನ್ನು ಪಾಲಿಸದಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ (Yoga Guru Baba Ramdev) ಮಂಗಳವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ. ನಿಮ್ಮ ವಿರುದ್ಧ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಏಕೆ ಪ್ರಾರಂಭಿಸಬಾರದು ಎಂದು ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ ಕೆಲವು ದಿನಗಳ ನಂತರ ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ್‌ನ (Patanjali Ayurved) ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂಕೋರ್ಟ್‌ಗೆ ಹಾಜರಾಗಿದ್ದಾರೆ.

ಮಾರ್ಚ್ 19 ರಂದು, ಪ್ರಕರಣದಲ್ಲಿ ನೀಡಲಾದ ನೋಟಿಸ್‌ಗೆ ಕಂಪನಿಯು ಪ್ರತಿಕ್ರಿಯಿಸಲು ವಿಫಲವಾದ ಕಾರಣಕ್ಕೆ ವಿನಾಯಿತಿ ನೀಡಿದ ನಂತರ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ಹಾಜರಾಗುವಂತೆ ಸೂಚಿಸಿತ್ತು.  ಪತಂಜಲಿ ನೀಡಿದ ಜಾಹೀರಾತುಗಳು ರಾಮ್‌ದೇವ್ ಅವರ ಅನುಮೋದನೆಯನ್ನು ಪ್ರತಿಬಿಂಬಿಸುವುದರಿಂದ ಅವರಿಗೆ ಶೋಕಾಸ್ ನೋಟಿಸ್ ನೀಡುವುದು ಸೂಕ್ತವೆಂದು ಪರಿಗಣಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ರೋಗಗಳಿಗೆ ಚಿಕಿತ್ಸೆ ನೀಡುವ ಉತ್ಪನ್ನಗಳ ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂಬ ತನ್ನ ಒಪ್ಪಂದವನ್ನು ಪಾಲಿಸದ ಕಂಪನಿಯನ್ನು ನ್ಯಾಯಾಲಯವು ತೀವ್ರವಾಗಿ ಟೀಕಿಸಿದೆ.

ನನ್ನ ಉಪಸ್ಥಿತಿಯನ್ನು ಗಮನಿಸಿ ಬೇಷರತ್ ಕ್ಷಮೆ ಕೇಳುತ್ತಿರುವುದಾಗಿ ರಾಮ್‌ದೇವ್ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ.  ಬಾಬಾ ರಾಮ್‌ದೇವ್ ಅವರು ನ್ಯಾಯಾಲಯಕ್ಕೆ ನೀಡಿದ ತಮ್ಮ ಕಂಪನಿಯ ಜವಾಬ್ದಾರಿಯನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಹೇಳಿದ್ದು “ನೀವು ಎಲ್ಲಾ ಆದೇಶಗಳನ್ನು ಉಲ್ಲಂಘಿಸಿದ್ದೀರಿ” ಎಂದು ಹೇಳಿದೆ.

“ಇದು ಸಂಪೂರ್ಣ ಅವಿಧೇಯತೆ. ಕೇವಲ ಸುಪ್ರೀಂಕೋರ್ಟ್ ಮಾತ್ರವಲ್ಲ, ದೇಶಾದ್ಯಂತ ನ್ಯಾಯಾಲಯಗಳು ನೀಡಿದ ಪ್ರತಿಯೊಂದು ಆದೇಶವನ್ನು ಗೌರವಿಸಬೇಕು” ಎಂದು ನ್ಯಾಯಾಲಯವು ಹೇಳಿದೆ.

ಪತಂಜಲಿ ಆಯುರ್ವೇದ್ ಲಿಮಿಟೆಡ್ ಯಾವುದೇ ಕಾನೂನನ್ನು ಉಲ್ಲಂಘಿಸುವುದಿಲ್ಲ ಎಂದು ನವೆಂಬರ್ 21, 2023 ರಂದು ಪ್ರಸ್ತುತ ಕಂಪನಿ ಸುಪ್ರೀಂಕೋರ್ಟ್‌ಗೆ ಭರವಸೆ ನೀಡಿತ್ತು, ಅದರಲ್ಲೂ ವಿಶೇಷವಾಗಿ ತಾನು ತಯಾರಿಸಿದ ಮತ್ತು ಮಾರಾಟ ಮಾಡುವ ಉತ್ಪನ್ನಗಳ ಜಾಹೀರಾತು ಅಥವಾ ಬ್ರ್ಯಾಂಡಿಂಗ್‌ಗೆ ಸಂಬಂಧಿಸಿದ ಕಾನೂನುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ನಿಮ್ಮ ಹೆಂಡತಿಯರ ಸೀರೆ ಸುಡಬಲ್ಲಿರಾ?: ಬಾಂಗ್ಲಾದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ ವಿರುದ್ಧ ಪ್ರಧಾನಿ ಹಸೀನಾ ಗುಡುಗು

“ಔಷಧೀಯ ಪರಿಣಾಮಕಾರಿತ್ವವನ್ನು ಪ್ರತಿಪಾದಿಸುವ ಅಥವಾ ಯಾವುದೇ ಔಷಧದ ವ್ಯವಸ್ಥೆಯ ವಿರುದ್ಧ ಯಾವುದೇ ಪ್ರಾಸಂಗಿಕ ಹೇಳಿಕೆಗಳನ್ನು ಯಾವುದೇ ರೂಪದಲ್ಲಿ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದಿಲ್ಲ” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ನೇತೃತ್ವದ ಪೀಠಕ್ಕೆ ಕಂಪನಿ ಭರವಸೆ ನೀಡಿತ್ತು.

ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಮತ್ತು ಆಧುನಿಕ ಔಷಧ ಪದ್ಧತಿಯ ವಿರುದ್ಧ ರಾಮ್‌ದೇವ್ ಅವರು ಅಭಿಯಾನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Tue, 2 April 24

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ