Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿಗಳಿಂದ ತೆರವುಗೊಳಿಸಿದ್ದ ಧ್ವನಿವರ್ಧಕಗಳನ್ನು ಶಾಲೆಗಳಿಗೆ ದಾನ ಮಾಡಲಾಗುತ್ತಿದೆ : ಯೋಗಿ ಆದಿತ್ಯನಾಥ್

ಮಸೀದಿಗಳಿಂದ ತೆರವುಗೊಳಿಸಲಾಗಿದ್ದ ಧ್ವನಿವರ್ದಕಗಳನ್ನು ಶಾಲೆಗಳಿಗೆ ಮತ್ತು ಆಸ್ಪತ್ರೆಗಳಿಗೆ ದಾನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಮಸೀದಿಗಳಿಂದ ತೆರವುಗೊಳಿಸಿದ್ದ ಧ್ವನಿವರ್ಧಕಗಳನ್ನು  ಶಾಲೆಗಳಿಗೆ ದಾನ ಮಾಡಲಾಗುತ್ತಿದೆ : ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Follow us
TV9 Web
| Updated By: ವಿವೇಕ ಬಿರಾದಾರ

Updated on:May 23, 2022 | 10:24 AM

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಸೀದಿಗಳಲ್ಲಿನ ಧ್ವನಿವರ್ಧಕಗಳ (Mosque Loudspeaker) ಶಬ್ದಗಳನ್ನು ಕಡಿಮೆಗೊಳಿಸಲಾಗಿದೆ. ಕೆಲವು ಮಸೀದಿಗಳ ಧ್ವನಿವರ್ದಕಗಳನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ. ಭಾನುವಾರ ಆರ್‌ಎಸ್‌ಎಸ್​ನ ವಾರಪತ್ರಿಕೆಗಳಾದ ಪಾಂಚಜನ್ಯ ಮತ್ತು ಆರ್ಗನೈಸರ್ ಆಯೋಜಿಸಿದ್ದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು ಮಸೀದಿಗಳಿಂದ ತೆರವುಗೊಳಿಸಲಾಗಿದ್ದ ಧ್ವನಿವರ್ದಕಗಳನ್ನು ಶಾಲೆಗಳಿಗೆ ಮತ್ತು ಆಸ್ಪತ್ರೆಗಳಿಗೆ ದಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯ ಸಮಯದಲ್ಲಿ ಮತ್ತು ನಂತರ ಬಿಜೆಪಿ (BJP) ಆಡಳಿತದ ರಾಜ್ಯದಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ. ಆದರೆ “ಹಲವು ರಾಜ್ಯಗಳಲ್ಲಿ ಚುನಾವಣೆ ಮುಗಿದ ನಂತರ ಗಲಭೆಗಳು ನಡೆದಿವೆ ಎಂದು ಪರೋಕ್ಷವಾಗಿ ಪಶ್ಚಿಮ ಬಂಗಾಳದ ಚುನಾವಣೆ ಸಮಯದಲ್ಲಿ ಮತ್ತು ನಂತರ ನಡೆದ ಗಲಭೆಗಳ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಟಾಂಗ್ ಕೊಟ್ಟರು.

ಇದನ್ನು ಓದಿ: ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ವಿಧಿವಶ

ಇದನ್ನೂ ಓದಿ
Image
IPL 2022 Points Table: ಲೀಗ್ ಪಂದ್ಯಗಳು ಮುಕ್ತಾಯ: ಪಾಯಿಂಟ್ ಟೇಬಲ್, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?
Image
ಹಿಂದಿ ಸಿನಿಮಾ ಆಫರ್​ ಬದಿಗಿಟ್ಟು ಕನ್ನಡದ ಚಿತ್ರ ಆಯ್ಕೆ ಮಾಡಿಕೊಂಡ ರವಿ ವರ್ಮಾ; ಮನಸಾರೆ ಹೊಗಳಿದ ಅದಿತಿ
Image
ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ವಿಮಾನ ಸಂಚಾರ ವ್ಯತ್ಯಯ
Image
Covid 19 ಭಾರತದಲ್ಲಿ ಕೊರೊನಾವೈರಸ್​​ನ BA.4 ಮತ್ತು BA.5 ಉಪತಳಿ ಪ್ರಕರಣ ಪತ್ತೆ: ಐಎನ್‌ಎಸ್‌ಎಸಿಒಜಿ

ಯುಪಿಯಲ್ಲಿ ಚುನಾವಣೆಯ ಸಮಯದಲ್ಲಿ ಅಥವಾ ನಂತರ ಯಾವುದೇ ಗಲಭೆಗಳು ನಡೆದಿಲ್ಲ. ಸರ್ಕಾರ ರಚನೆಯಾದ ನಂತರ ರಾಮ ನವಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಹನುಮ ಜಯಂತಿ ಆಚರಣೆಗಳು ಶಾಂತಿಯುತವಾಗಿ ಜರುಗಿದವು. ಇದೇ ಉತ್ತರಪ್ರದೇಶದಲ್ಲಿ ಈ ಹಿಂದೆ ಸಣ್ಣಪುಟ್ಟ ಗಲಭೆಗಳು ನಡೆದಿದ್ದವು ಎಂದರು.

ಈಗ ರಸ್ತೆಗಳಲ್ಲಿ ಈದ್ ನಮಾಜ್ ಮಾಡದಿರುವುದನ್ನು ನೀವು ಮೊದಲ ಬಾರಿಗೆ ನೋಡಿರಬೇಕು. ಇನ್ನು ರಾಜ್ಯದಲ್ಲಿ ಬಿಡಾಡಿ ದನಗಳ ಸಮಸ್ಯೆ ಕುರಿತು ಮಾತನಾಡಿದ ಅವರು, ಇದನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಹಲವು ಕ್ರಮಗಳ ಕುರಿತು ತಿಳಿಸಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸಲಾಗಿದೆ. ಬೀದಿ ಮತ್ತು ಹೊಲಗಳಲ್ಲಿ ಅಲೆದಾಡುತ್ತಿದ್ದ ಬಿಡಾಡಿ ದನಗಳನ್ನು ಮೊದಲು ಅಕ್ರಮ ಕಸಾಯಿಖಾನೆಗಳಿಗೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಇದನ್ನು ತಪ್ಪಿಸಲು ನಾವು 5,600 ಕ್ಕೂ ಹೆಚ್ಚು ಬಿಡಾಡಿ ಗೋಶಾಲೆಗಳನ್ನು ಪ್ರಾರಂಭಿಸಿದ್ದೇವೆ.

ಹಸುವಿನ ಸಗಣಿಯಿಂದ ಸಿಎನ್‌ಜಿ ಉತ್ಪಾದಿಸಲು ಹೊಸ ವ್ಯವಸ್ಥೆಯನ್ನು ರೂಪಿಸಲಾಗುತ್ತಿದ್ದು, ಅದನ್ನು ಜನರಿಂದ ಕೆಜಿಗೆ 1 ರೂಪಾಯಿಗೆ ಖರೀದಿಸಲಾಗುವುದು. ಹಾಗೇ ಗೋವುಗಳ ರಕ್ಷಣೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರ ಮತ್ತು ನವೀಕರಿಸಿದ ಕಾಶಿ ವಿಶ್ವನಾಥ ಮಂದಿರ ಸಂಕೀರ್ಣದ ಬಗ್ಗೆಯೂ ಮಾತನಾಡಿದರು. ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರ ಯಾತ್ರಾಸ್ಥಳ ಅಭಿವೃದ್ಧಿ ಪಡಿಸುತ್ತಿದೆ. “ಡಬಲ್ ಎಂಜಿನ್” ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರದ ಅಡಿಯಲ್ಲಿ ಉತ್ತರ ಪ್ರದೇಶದ ಆರ್ಥಿಕ ಪ್ರಗತಿಯ ಕುರಿತು ಮಾತನಾಡಿದರು.

ಇದನ್ನು ಓದಿ: ಖಾಲಿ ಹೊಟ್ಟೆಯಲ್ಲಿ ಯೋಗ: ತಜ್ಞರು ಹೇಳುವುದೇನು?

ಈ ಹಿಂದೆ ಈದ್ ಹಾಗೂ ಅಕ್ಷಯ ತೃತೀಯ ಹಬ್ಬಗಳ ಮುಂಚೆಯೇ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಮೈಕ್ ಬಳಕೆ ಬಗ್ಗೆ ಹೊಸ ಮಾರ್ಗಸೂಚಿಯನ್ನೇ ಹೊರಡಿಸಿದ್ದರು. ಅನುಮತಿ ಪಡೆಯದೇ, ಧಾರ್ಮಿಕ ಮೆರವಣಿಗೆ ನಡೆಸದಂತೆ ನಿರ್ಬಂಧ ವಿಧಿಸಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೈಕ್‌ಗಳನ್ನು ಬಳಸಬಹುದಾದರೂ, ಆವರಣದ ಹೊರಗೆ ಧ್ವನಿ ಕೇಳಬಾರದು ಮತ್ತು ಇತರರಿಗೆ ಅನಾನುಕೂಲತೆಯನ್ನು ಉಂಟುಮಾಡಬಾರದು ಎಂದು ಈ ಹಿಂದೆ ಆದೇಶ ಹೊರಡಿಸಿದ್ದರು

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ 

Published On - 10:22 am, Mon, 23 May 22

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?