AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್ ಗಾಂಧಿ ಅಪ್ರಬುದ್ಧ: ಯೋಗಿ ಆದಿತ್ಯನಾಥ್

ಪ್ರಧಾನಿ ನಾಳೆ ಲೋಕಸಭೆಯಲ್ಲಿ ಮಾತನಾಡುತ್ತಾರೆ. ನಾವು 2004 ರಿಂದ ರಾಹುಲ್ ಗಾಂಧಿಯನ್ನು ನೋಡಿದ್ದೇವೆ. ಆಗ ಅವರು ಸಚಿವರಾಗಿರಲಿಲ್ಲ ಆದರೆ ಸದನದಲ್ಲಿ ಮಾತನಾಡಲು ಅವಕಾಶ ಪಡೆದರು. ಇಂದು ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರು ಪ್ರಬುದ್ಧತೆ ತೋರಿಸುತ್ತಾರೆ ಎಂದು ನಾವು ಬಯಸಿದ್ದೆವು. ಆದರೆ ಅವರು ಇಂದು ಸದನದಲ್ಲಿ ಮಾತನಾಡುವ ರೀತಿಯಿಂದ ನಮಗೆ ನಿರಾಸೆಯಾಗಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

Rahul Gandhi: ರಾಹುಲ್ ಗಾಂಧಿ ಅಪ್ರಬುದ್ಧ: ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 01, 2024 | 8:26 PM

Share

ದೆಹಲಿ ಜುಲೈ 01: ರಾಹುಲ್ ಗಾಂಧಿಯವರ (Rahul Gandhi) ‘ಹಿಂದೂ’ ಹೇಳಿಕೆಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಸೋಮವಾರ ಕಾಂಗ್ರೆಸ್ ನಾಯಕನನ್ನು “ಅಪ್ರಬುದ್ಧ” ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರಾದ ನಂತರ ರಾಹುಲ್ ಗಾಂಧಿ ಪ್ರಬುದ್ಧರಾಗುತ್ತಾರೆ ಎಂದು ಭಾವಿಸಿದ್ದೆವು. ಆದರೆ ಅಪಕ್ವ ಮನಸ್ಸಿನ ವ್ಯಕ್ತಿ ಮಾತ್ರ ಇಂತಹ ಟೀಕೆಗಳನ್ನು ಮಾಡುತ್ತಾನೆ ಎಂದು ಹೇಳಲು ನನಗೆ ವಿಷಾದವಿದೆ. ಹಿಂದೂ ಭಾರತದ ಮೂಲ ಸಮಾಜ ಮತ್ತು ಈ ದೇಶದ ಆತ್ಮ ಎಂದಿದ್ದಾರೆ ಯೋಗಿ.

ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ತಮ್ಮನ್ನು ತಾವು ಹಿಂದೂಗಳು ಎಂದು ಕರೆದುಕೊಳ್ಳುವವರು “ಹಿಂಸಾಚಾರ ಮತ್ತು ದ್ವೇಷ” ದಲ್ಲಿ ಹಗಲಿರುಳು ನಿರತರಾಗಿದ್ದಾರೆ ಎಂದು ಹೇಳಿದ್ದು ಎನ್​​​ಡಿಎ ಸಂಸದರನ್ನು ಕೆರಳಿಸಿತ್ತು. “ಎಲ್ಲಾ ಧರ್ಮಗಳು ಮತ್ತು ನಮ್ಮ ಎಲ್ಲಾ ಮಹಾಪುರುಷರು ಅಹಿಂಸೆ ಮತ್ತು ನಿರ್ಭಯತೆಯ ಬಗ್ಗೆ ಮಾತನಾಡುತ್ತಾರೆ, ಆದರೆ ತಮ್ಮನ್ನು ತಾವು ಹಿಂದೂಗಳು ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ ಮತ್ತು ಸುಳ್ಳಿನ ಬಗ್ಗೆ ಮಾತ್ರ ಮಾತನಾಡುತ್ತಾರೆ .ಆಪ್ ಹಿಂದೂ ಹೋ ಹಿ ನಹೀ (ನೀವು ಹಿಂದೂಗಳಲ್ಲ)” ಎಂದು ರಾಹುಲ್ ಹೇಳಿದ್ದರು.

ಇದೇ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸದನದ ನಿಯಮಗಳನ್ನು ಉಲ್ಲಂಘಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬೆನ್ನು ತೋರಿಸುತ್ತಲೇ ಇದ್ದಾರೆ ಎಂದು ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಓಂ ಬಿರ್ಲಾ ಅವರು ಲೋಕಸಭೆಯ ಇತರ ಸದಸ್ಯರನ್ನಲ್ಲ, ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಲು ರಾಹುಲ್ ಗಾಂಧಿಗೆ ಹೇಳಿದ್ದಾರೆ.

ಪ್ರಧಾನಿ ನಾಳೆ ಲೋಕಸಭೆಯಲ್ಲಿ ಮಾತನಾಡುತ್ತಾರೆ. ನಾವು 2004 ರಿಂದ ರಾಹುಲ್ ಗಾಂಧಿಯನ್ನು ನೋಡಿದ್ದೇವೆ. ಆಗ ಅವರು ಸಚಿವರಾಗಿರಲಿಲ್ಲ ಆದರೆ ಸದನದಲ್ಲಿ ಮಾತನಾಡಲು ಅವಕಾಶ ಪಡೆದರು. ಇಂದು ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರು ಪ್ರಬುದ್ಧತೆ ತೋರಿಸುತ್ತಾರೆ ಎಂದು ನಾವು ಬಯಸಿದ್ದೆವು. ಆದರೆ ಅವರು ಇಂದು ಸದನದಲ್ಲಿ ಮಾತನಾಡುವ ರೀತಿಯಿಂದ ನಮಗೆ ನಿರಾಸೆಯಾಗಿದೆ. ಸ್ಪೀಕರ್ ಕಡೆಗೆ ಬೆನ್ನು ತೋರಿಸಬೇಡಿ ಎಂದು ಹೇಳಿದ್ದೇವೆ. ಅವರಿಗೆ ನಿಯಮಗಳ ಬಗ್ಗೆಯೂ ಹೇಳಲಾಯಿತು, ಆದರೆ ಅವರು ಸ್ಪೀಕರ್‌ಗೆ ಬೆನ್ನು ತೋರಿಸುತ್ತಲೇ ತಮ್ಮ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು ಎಂದು ರಿಜಿಜು ಹೇಳಿದ್ದಾರೆ.

ಅಗ್ನಿವೀರ್ ಯೋಜನೆ ಬಗ್ಗೆ ರಾಹುಲ್ ಗಾಂಧಿ ಸುಳ್ಳು ಹೇಳಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಅವರು (ರಾಹುಲ್ ಗಾಂಧಿ) ಇಂದು ಸಂಸತ್ತಿನಲ್ಲಿ ಕೆಲವು ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದರು. ಅಗ್ನಿವೀರ್ ಯೋಜನೆಯಡಿ ಹುತಾತ್ಮರಿಗೆ ಪರಿಹಾರ ಸಿಗುವುದಿಲ್ಲ ಎಂದು ಹೇಳಿದರು. ಇದೊಂದು ದೊಡ್ಡ ಸುಳ್ಳು. ರಾಹುಲ್ ಗಾಂಧಿ ಭಾಷಣದ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಗ್ನಿವೀರ್ ಯೋಜನೆಯಡಿ ಹುತಾತ್ಮರಾದವರಿಗೆ ₹1 ಕೋಟಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಯಾವಾಗಲೂ ಸಶಸ್ತ್ರ ಪಡೆಗಳ ವಿರುದ್ಧ ಇಂತಹ ಟೀಕೆಗಳನ್ನು ಮಾಡುತ್ತಿದೆ ಮತ್ತು ಸಾರ್ವಜನಿಕರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ:  ಮೊದಲ ದಿನವೇ ಕೆಟ್ಟ ಪ್ರದರ್ಶನ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣಕ್ಕೆ ಜೆಪಿ ನಡ್ಡಾ ಆಕ್ಷೇಪ

ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮನಸ್ಥಿತಿಯನ್ನು ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.  “ಕಾಂಗ್ರೆಸ್‌ನ ಹಿಂದೂ ವಿರೋಧಿ ಮನಸ್ಥಿತಿ ಇನ್ನೂ ಇದೆ ಮತ್ತು ಅದು ಇಂದಿಗೂ ಸಾಬೀತಾಗಿದೆ. ಅವರ (ರಾಹುಲ್ ಗಾಂಧಿ) ಹಿಂದೂ ಧರ್ಮದ ಮೇಲಿನ ದ್ವೇಷವನ್ನು ಜಗತ್ತು ನೋಡಿದೆ” ಎಂದು ಜೋಶಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್