Rakshabandhan: ರಕ್ಷಾಬಂಧನಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್ ನೀಡಿದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ರಾಜ್ಯದಲ್ಲಿ ಮಹಿಳೆಯರಿಗೆ 48 ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ರಕ್ಷಾಬಂಧನದ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಯೋಗಿ ನೀಡಿದ ಉಡುಗೊರೆಯಾಗಿದೆ.

Rakshabandhan: ರಕ್ಷಾಬಂಧನಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್ ನೀಡಿದ ಯೋಗಿ ಆದಿತ್ಯನಾಥ್
Yogi Adityanath
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 06, 2022 | 11:26 AM

ಲಕ್ನೋ: ರಕ್ಷಾಬಂಧನ ಸಮೀಪಿಸುತ್ತಿರುವಂತೆಯೇ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ರಾಜ್ಯದಲ್ಲಿ ಮಹಿಳೆಯರಿಗೆ 48 ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ರಕ್ಷಾಬಂಧನದ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಯೋಗಿ ನೀಡಿದ ಉಡುಗೊರೆಯಾಗಿದೆ. ರಕ್ಷಾಬಂಧನದ ಸಂದರ್ಭದಲ್ಲಿ, ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಅವರ ಕಚೇರಿ ಟ್ವೀಟ್ ಮಾಡಿದೆ. ಆಜಾದಿ ಕಾ ಅಮೃತ್ ಮಹೋತ್ಸವವನ್ನು ಗುರುತಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಲಾಗಿದೆ ಮತ್ತು 48 ಗಂಟೆಗಳ ಅವಧಿಗೆ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ.

ಇದಕ್ಕೂ ಮುನ್ನ, ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಭಾನುವಾರ ಮಹಿಳೆಯರ ಘನತೆಯನ್ನು ಎತ್ತಿಹಿಡಿಯಬೇಕು ಮತ್ತು ಅವರಿಗೆ ಎಲ್ಲಾ ಸಮಯದಲ್ಲೂ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಬೇಕು ಎಂದಿದ್ದರು. ವೆಂಕಯ್ಯ ನಾಯ್ಡು ಅವರು ಕರ್ನಾಟಕ ರಾಜ್ಯ ಪ್ರವಾಸದಲ್ಲಿ ಇದ್ದರೆ, ಬೆಂಗಳೂರಿನ ಸ್ಥಳೀಯ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಮಕ್ಕಳೊಂದಿಗೆ ರಕ್ಷಾಬಂಧನ ಆಚರಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಶಯ ಕೋರಿದ ಶ್ರೀ ನಾಯ್ಡು, ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಗೌರವದ ವಿಶೇಷ ಮತ್ತು ಆಳವಾದ ಬೇರೂರಿರುವ ಬಾಂಧವ್ಯದ ಆಚರಣೆಯಾಗಿದೆ ಎಂದು ಹೇಳಿದರು.

ರಕ್ಷಾಬಂಧನದ ಶುಭಾಶಯಗಳು! ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಗೌರವದ ವಿಶೇಷ ಮತ್ತು ಆಳವಾದ ಬೇರೂರಿರುವ ಬಾಂಧವ್ಯದ ಆಚರಣೆಯಾಗಿದೆ. ಈ ಮಂಗಳಕರ ದಿನದಂದು, ಮಹಿಳೆಯರ ಘನತೆಯನ್ನು ಎತ್ತಿಹಿಡಿಯಲು ಮತ್ತು ಅವರಿಗೆ ಎಲ್ಲಾ ಸಮಯದಲ್ಲೂ ಸುರಕ್ಷಿತ ವಾತಾವರಣವನ್ನು ಸೃಷ್ಟಿಸುವ ಸಂಕಲ್ಪ ಮಾಡೋಣ, ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಉಪರಾಷ್ಟ್ರಪತಿಗಳ ಸಚಿವಾಲಯದ ಪ್ರಕಾರ, ಪ್ರತಿಯೊಬ್ಬರನ್ನು ತಮ್ಮ ಸಹೋದರ ಸಹೋದರಿಯರಂತೆ ಕಾಣುವಂತೆ ಆಗಬೇಕು. ಇದು ನಾಗರಿಕರಲ್ಲಿ ಸಹೋದರತೆ ಮತ್ತು ಸೌಹಾರ್ದತೆ ಸಂಕೇತವಾಗಿದೆ ಮತ್ತು ನಮ್ಮ ರಾಷ್ಟ್ರವನ್ನು ಬಲಿಷ್ಠಗೊಳಿಸುತ್ತದೆ ಎಂದು ಹೇಳಿದರು. ಸನಾತನ ಭಾರತೀಯ ಪದ್ಧತಿಯನ್ನು ಶ್ಲಾಘಿಸಿದ ಅವರು, ಇದು ನಮಗೆ ಹಿರಿಯರನ್ನು ಗೌರವಿಸುವುದನ್ನು ಕಲಿಸುತ್ತದೆ ಮತ್ತು ಯುವಕರಲ್ಲಿ ಹಂಚಿಕೊಳ್ಳುವ ಮತ್ತು ಕಾಳಜಿಯ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿದರು. ಸಹೋದರಿಯರು ಮನೆಯಲ್ಲಿ ಸಂತೋಷವನ್ನು ತರುತ್ತಾರೆ ಎಂದು ಹೇಳಿದ ಅವರು, ಕುಟುಂಬ ಸಂಬಂಧಗಳನ್ನು ಒಗ್ಗಟ್ಟಿನ ಬಾಂಧವ್ಯವನ್ನು ಬಲಪಡಿಸುವ ಅನೇಕ ಭಾರತೀಯ ಹಬ್ಬಗಳಿವೆ ಎಂದು ಹೇಳಿದರು.

ಆಗಸ್ಟ್ 10 ರ ಮಧ್ಯರಾತ್ರಿಯಿಂದ ಆಗಸ್ಟ್ 12 ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು ಎಂಬ ಯೋಜನೆ ತುಂಬಾ ಅದ್ಭುತ ಯೋಜನೆಯಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Sat, 6 August 22

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ