ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು 1.70 ಲಕ್ಷ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಿದೆ ಉತ್ತರ ಪ್ರದೇಶ ಸರ್ಕಾರ

Yogi Adityanath: ಹೊಸ ಶಿಕ್ಷಣ ನೀತಿ 2020ರ ಅಡಿಯಲ್ಲಿ, ಇಸಿಸಿಇ ಯೋಜನೆಯ ಭಾಗವಾಗಿ ಉತ್ತರಪ್ರದೇಶದ 44 ಜಿಲ್ಲೆಗಳ 1,06,128 ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೂರ್ವ ಶಾಲಾ ಕಿಟ್‌ಗಳನ್ನು ವಿತರಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು 1.70 ಲಕ್ಷ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಿದೆ ಉತ್ತರ ಪ್ರದೇಶ ಸರ್ಕಾರ
ಯೋಗಿ ಆದಿತ್ಯನಾಥ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 27, 2021 | 6:45 PM

ದೆಹಲಿ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಅಂಗನವಾಡಿ ಕೇಂದ್ರಗಳ ಮಹತ್ವವನ್ನು ಎತ್ತಿ ತೋರಿಸಿದೆ. ಪ್ರತಿಯೊಬ್ಬರೂ ತನ್ನ ಶಿಕ್ಷಣ ಯೋಜನೆಗಳ ಲಾಭವನ್ನು ಪಡೆಯಲು ಈ ಕೇಂದ್ರಗಳನ್ನು ಪುನಶ್ಚೇತನಗೊಳಿಸಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ. ಆರಂಭಿಕ ಬಾಲ್ಯ ಮಕ್ಕಳ ಶಿಕ್ಷಣ (ECCE) ಯೋಜನೆಯನ್ನು ಸುಗಮವಾಗಿ ಅನುಷ್ಠಾನಗೊಳಿಸಲು ಬುಕ್‌ಲೆಟ್‌ಗಳು ಮತ್ತು ಶಾಲಾಪೂರ್ವ ಕಿಟ್‌ಗಳನ್ನು ಹೊಂದಿದ 1,70,896 ಅಂಗನವಾಡಿ ಕೇಂದ್ರ ಕಟ್ಟಡಗಳನ್ನು ನಿರ್ಮಿಸುತ್ತಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಪ್ರಕಟಿಸಿದೆ. ಇದಲ್ಲದೆ, ಕೇಂದ್ರಗಳು ಮಕ್ಕಳಿಗೆ ಮೌಲ್ಯಮಾಪನ ಕಾರ್ಡ್‌ಗಳನ್ನು ಸಹ ನೀಡುತ್ತವೆ.

ಹೊಸ ಶಿಕ್ಷಣ ನೀತಿ 2020ರ ಅಡಿಯಲ್ಲಿ, ಇಸಿಸಿಇ ಯೋಜನೆಯ ಭಾಗವಾಗಿ ಉತ್ತರಪ್ರದೇಶದ 44 ಜಿಲ್ಲೆಗಳ 1,06,128 ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೂರ್ವ ಶಾಲಾ ಕಿಟ್‌ಗಳನ್ನು ವಿತರಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಅಲ್ಲದೆ, ನ್ಯಾಷನಲ್ ಬುಕ್ ಟ್ರಸ್ಟ್ (NBT) ಚಟುವಟಿಕೆ ಆಧಾರಿತ ಕಲಿಕೆಯನ್ನು ಉತ್ತೇಜಿಸಲು ಕೇಂದ್ರಗಳಿಗೆ ಭೇಟಿ ನೀಡುವುದರ ಹೊರತಾಗಿ, ಮೂರರಿಂದ ಆರು ವರ್ಷದ ಮಕ್ಕಳಿಗೆ ಕಥೆ ಪುಸ್ತಕಗಳನ್ನು ಒದಗಿಸುತ್ತಿದೆ ಎಂದು ಅದು ಹೇಳಿದೆ.

ಅಂಗನವಾಡಿ ಕಾರ್ಮಿಕರಿಗಾಗಿ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳು (ICDS) ‘ಪಹಲ್’ ಎಂಬ ಇಸಿಸಿಇ ಕೈಪಿಡಿಯನ್ನು ಸಿದ್ಧಪಡಿಸಿದೆ ಎಂದು ಸರ್ಕಾರ ಹೇಳಿದೆ. ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (SCERT) ಅಭಿವೃದ್ಧಿಪಡಿಸಿದ ಪಠ್ಯಕ್ರಮದ ಪ್ರಕಾರ ಕೈಪಿಡಿಯನ್ನು ಸಿದ್ಧಪಡಿಸಲಾಗಿದ್ದು 44 ಜಿಲ್ಲೆಗಳಲ್ಲಿ ವಿತರಿಸಲಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA), ಪಂಚಾಯತಿ ರಾಜ್, ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಪುಷ್ಟಹಾರ್‌ಗಳ ಮೂಲಕ ಭಾರತ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅಂಗನವಾಡಿ ಕೇಂದ್ರಗಳನ್ನು ಉತ್ತರ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ. ನಾಲ್ಕು ವರ್ಷಗಳಲ್ಲಿ 10,187 ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿತ್ತು. ಈ ಪೈಕಿ 8,820 ಕಟ್ಟಡಗಳನ್ನು ನಿರ್ಮಿಸಲಾಗಿದ್ದು, 1,367 ನಿರ್ಮಾಣ ಹಂತದಲ್ಲಿದೆ.

ಇದನ್ನೂ ಓದಿ: UP Assembly Election: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಿದ್ಧತೆ; ಯೋಗಿ ಆದಿತ್ಯನಾಥ್​​ ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರಂತೆ..

ಇದನ್ನೂ ಓದಿ: ಮುಂದಿನ ಸಂಪುಟದಲ್ಲಿ ಯಡಿಯೂರಪ್ಪ ಪಾತ್ರ ಇರಲ್ಲ. ಇನ್ನು ಮಕ್ಕಳ ಪಾತ್ರ ಎಲ್ಲಿಂದ ಬಂತು?: ಸಂಸದ ಬಿ ವೈ ರಾಘವೇಂದ್ರ

(Yogi Adityanath government in Uttar Pradesh building 1.70 lakh Anganwadi centres for quality education to children rak)

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್