ಝಾನ್ಸಿ ರೈಲು ನಿಲ್ದಾಣದ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಯೋಗಿ ಆದಿತ್ಯನಾಥ್ ಸರ್ಕಾರ

Jhansi Railway Station: ಯೋಗಿ ಆದಿತ್ಯನಾಥ್ ಸರ್ಕಾರದ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯವು ಅಂಚೆ ಇಲಾಖೆ ಮತ್ತು ಸರ್ವೆ ಆಫ್‌ ಇಂಡಿಯಾಕ್ಕೆ ರವಾನಿಸಿದೆ. ಅಲ್ಲಿ ದಾಖಲೆಗಳನ್ನು ಪರಿಶೀಲಿಸಿದ ನಂತರ ಈ ಹೆಸರಿನ ಯಾವುದೇ ನಿಲ್ದಾಣ ಅಥವಾ ಊರು ಇಲ್ಲ ಎನ್ನುವುದನ್ನು ಇಲಾಖೆಗಳು ದೃಢೀಕರಿಸಬೇಕಿದೆ.

ಝಾನ್ಸಿ ರೈಲು ನಿಲ್ದಾಣದ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಯೋಗಿ ಆದಿತ್ಯನಾಥ್ ಸರ್ಕಾರ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: sandhya thejappa

Updated on:Aug 04, 2021 | 10:34 AM

ಲಕ್ನೋ: ಹೆಸರು ಬದಲಾವಣೆಯ ಮೂಲಕವೇ ಸಾಕಷ್ಟು ಸುದ್ದಿ ಮಾಡಿರುವ ಯೋಗಿ ಆದಿತ್ಯನಾಥ್ ನಾಯಕತ್ವದ ಉತ್ತರ ಪ್ರದೇಶ ರಾಜ್ಯ ಸರ್ಕಾರ ಇದೀಗ ಝಾನ್ಸಿ ರೈಲು ನಿಲ್ದಾಣಕ್ಕೆ (Jhansi Railway Station) ಮರು ನಾಮಕರಣ ಮಾಡಲು ನಿರ್ಧರಿಸಿದೆ. ಝಾನ್ಸಿ ರೈಲು ನಿಲ್ದಾಣದ ಹೆಸರನ್ನು ವೀರಾಂಗನಾ ಲಕ್ಷ್ಮೀಬಾಯಿ ರೈಲುನಿಲ್ದಾಣ (Veerangana Laxmibai Railway Station) ಎಂದು ಬದಲಿಸಲು ತೀರ್ಮಾನಿಸಿರುವ ಯೋಗಿ ಆದಿತ್ಯನಾಥ್ ಸರ್ಕಾರ ಆ ಕುರಿತು ರೈಲ್ವೆ ಸಚಿವಾಲಯಕ್ಕೆ ಅಧಿಕೃತ ಪ್ರಸ್ತಾವನೆಯನ್ನೂ ಸಲ್ಲಿಸಿದೆ. ಆ ಮೂಲಕ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ವಿರುದ್ಧ ಹೋರಾಡಿದ, ಝಾನ್ಸಿ ರಾಣಿ ಎಂದೇ ಪ್ರಸಿದ್ಧಳಾಗಿರುವ ಲಕ್ಷ್ಮೀಬಾಯಿ ಹೆಸರನ್ನು ಉಳಿಸಿಕೊಂಡು ಝಾನ್ಸಿ ಹೆಸರಿನ ಬದಲಿಗೆ ವೀರಾಂಗನಾ ಲಕ್ಷ್ಮೀಬಾಯಿ ಎಂದು ಹೆಸರಿಸುವ (Rename) ನಿರ್ಧಾರ ಮಾಡಿದೆ.

ಯೋಗಿ ಆದಿತ್ಯನಾಥ್ ಸರ್ಕಾರದ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯವು ಅಂಚೆ ಇಲಾಖೆ ಮತ್ತು ಸರ್ವೆ ಆಫ್‌ ಇಂಡಿಯಾಕ್ಕೆ ರವಾನಿಸಿದೆ. ಅಲ್ಲಿ ದಾಖಲೆಗಳನ್ನು ಪರಿಶೀಲಿಸಿದ ನಂತರ ಈ ಹೆಸರಿನ ಯಾವುದೇ ನಿಲ್ದಾಣ ಅಥವಾ ಊರು ಇಲ್ಲ ಎನ್ನುವುದನ್ನು ಇಲಾಖೆಗಳು ದೃಢೀಕರಿಸಬೇಕಿದೆ. ಬಳಿಕ ರೈಲ್ವೆ ಸಚಿವಾಲಯದ ಶಿಫಾರಸು ಆಧರಿಸಿ ಗೃಹ ಸಚಿವಾಲಯವು ಹೆಸರು ಬದಲಾವಣೆ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಬೇಕಿದೆ.

ಕೆಲದಿನಗಳ ಹಿಂದೆಯಷ್ಟೇ ವಾರಾಣಸಿಯ ಮಂಡೂದಿಹ್‌ ರೈಲು ನಿಲ್ದಾಣದ ಹೆಸರನ್ನು ಬನಾರಸ್‌ ರೈಲು ನಿಲ್ದಾಣ ಎಂದು ಬದಲಿಸಲಾಗಿದೆ. ಮುಘಲ್‌ಸರಾಯ್‌ ನಿಲ್ದಾಣಕ್ಕೆ 2018ನೇ ಇಸವಿಯಲ್ಲಿ ಪಂಡಿತ ದೀನ್‌ದಯಾಳ್‌ ಉಪಾಧ್ಯಾಯ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಅಂತೆಯೇ, ಅಲಹಾಬಾದ್ ರೈಲು ನಿಲ್ದಾಣವನ್ನು ಪ್ರಯಾಗ್​ರಾಜ್​ ರೈಲು ನಿಲ್ದಾಣ ಎಂದು ಹೆಸರಿಸಲಾಗಿದೆ. ಆ ಪಟ್ಟಿಗೆ ಝಾನ್ಸಿ ರೈಲು ನಿಲ್ದಾಣ ಕೂಡಾ ಸೇರಲಿದ್ದು, ಒಪ್ಪಿಗೆ ಸಿಕ್ಕಿದಲ್ಲಿ ವೀರಾಂಗನಾ ಲಕ್ಷ್ಮೀಬಾಯಿ ರೈಲು ನಿಲ್ದಾಣ ಎಂದು ಮರುನಾಮಕರಣ ಆಗಲಿದೆ.

ಯೋಗಿ ಆಡಳಿತಕ್ಕೆ ಮೆಚ್ಚುಗೆ ಇತ್ತೀಚೆಗಷ್ಟೇ ಉತ್ತರಪ್ರದೇಶಕ್ಕೆ ಭೇಟಿ ನೀಡಿದ ಅಮಿತ್ ಶಾ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಹೊಗಳಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಉತ್ತರಪ್ರದೇಶವನ್ನು ಯೋಗಿ ಜೀ ಉನ್ನತ ಸ್ಥಾನಕ್ಕೆ ಒಯ್ದಿದ್ದಾರೆ. ನಾನು 2019ಕ್ಕೂ ಮೊದಲು ಸುಮಾರು 6ವರ್ಷ ಅನೇಕ ಬಾರಿ ಉತ್ತರಪ್ರದೇಶಕ್ಕೆ ಬರುತ್ತಿದ್ದೆ. 2019ಕ್ಕೂ ಮೊದಲಿನ ಯುಪಿ ಹೇಗಿತ್ತು ಎಂಬುದು ನನಗೆ ಸ್ಪಷ್ಟವಾಗಿ ಗೊತ್ತು. ಆದರೀಗ ಉತ್ತರ ಪ್ರದೇಶ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಉನ್ನತ ಸ್ಥಾನದಲ್ಲಿದೆ. ಇದು ಸಿಎಂ ಯೋಗಿ ಆದಿತ್ಯನಾಥ್​ ಮತ್ತು ಅವರ ತಂಡದ ಶ್ರಮ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಬರುವ ವರ್ಷ ವಿಧಾನಸಭೆ ಚುನಾವಣೆ ಇದೆ. ಅದರ ಬೆನ್ನಲ್ಲೇ ಅಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಮಾತುಗಳೂ ಕೇಳಿಬಂದಿದ್ದವು. ಆದರೆ ಇತ್ತೀಚೆಗೆ ಉತ್ತರಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರೂ ಯೋಗಿ ಆದಿತ್ಯನಾಥ್​ರ ಆಡಳಿತವನ್ನು ಮನಸಾರೆ ಹೊಗಳಿದ್ದರು. ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಮಾತನಾಡುತ್ತಾ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಅವರು, ಕೊವಿಡ್​ 19 ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದಾರೆ. ಹಲವಾರು ಮಾಫಿಯಾಗಳು, ಉಗ್ರರ ಹುಟ್ಟಡಗಿಸಿದ್ದಾರೆ. ಈ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿ ಇರುವಂಥ ವಾತಾವರಣ ಸೃಷ್ಟಿಸಲಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಅಮಿತ್​ ಶಾ ಉತ್ತರ ಪ್ರದೇಶ ಭೇಟಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರನ್ನು ಹೊಗಳಿದ ಗೃಹ ಸಚಿವ 

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ

(Yogi Adityanath Government proposes renaming of Jhansi Railway Station as Veerangana Laxmibai Railway Station)

Published On - 10:28 am, Wed, 4 August 21

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ